Sunday, October 1, 2023
Homeಮಲೆನಾಡುಚಿಕ್ಕಮಗಳೂರುಕಡೂರು: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ವಶ

ಕಡೂರು: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ವಶ

ಕಡೂರು: (ನ್ಯೂಸ್ ಮಲ್ನಾಡ್ ವರದಿ) ಚುನಾವಣಾ ಅಕ್ರಮಗಳನ್ನು ತಡೆಯುವಲ್ಲಿ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಜಿಲ್ಲೆಯ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಈವರೆಗೂ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ವಿವಿಧ ಚೆಕ್ ಪೋಸ್ಟ್ ಗಳಲ್ಲಿ ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ; ವಿವಿಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಮನೆ ಕಳ್ಳತನದ ಆರೋಪಿ ಬಂಧನ

ಕಡೂರು ತಾಲೂಕಿನ ವಿವಿಧ ಚೆಕ್‌ಪೋಸ್ಟ್ ಗಳಲ್ಲಿ ಎಫ್‌ಎಸ್‌ಟಿ ಅಧಿಕಾರಿಗಳು ಸೋಮವಾರ ವಾಹನಗಳ ತಪಾಸಣೆ ವೇಳೆ ಸಮರ್ಪಕ ದಾಖಲೆ ಒದಗಿಸದ ವ್ಯಕ್ತಿಗಳಿಂದ 3.52 ಲಕ್ಷ ರೂ, ನಗದು ವಶಪಡಿಸಿಕೊಂಡಿದ್ದಾರೆ.

ಸಿಂಗಟಗೆರೆ ಸಮೀಪದ ಕಸುವನಹಳ್ಳಿ ಚೆಕ್ ಪೋಸ್ಟ್ ಸಮೀಪ ಸಿಂಗಟಗೆರೆಯ ಕುಮಾರ ಎಂಬುವರಿಂದ 60,500 ರೂ, ಅನ್ನು ವಶ ಪಡಿಸಿಕೊಳ್ಳಲಾಗಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಇನ್ನು ಮಲ್ಲೇಶ್ವರ ಸಮೀಪ ಮಚ್ಚರಿ ಗಂಗಾಧರಪ್ಪ ಎಂಬುವರಿಂದ 1.4 ಲಕ್ಷ ರೂ, ಹಾಗೂ ಬಸವನಹಳ್ಳಿ ದಿಬ್ಬದ ಚೆಕ್‌ಪೋಸ್ಟ್ ನಲ್ಲಿ ಅರಸೀಕೆರೆಯ ರಿಯಾಜ್ ಪಾಷಾ ಎಂಬುವರಿಂದ 1 ಲಕ್ಷ, ಅರಸೀಕೆರೆ ತಾಲೂಕಿನ ಅಣ್ಣನಹಳ್ಳಿ ಗ್ರಾಮದ ಎ.ವಿ.ಲೋಕೇಶ್ ಎಂಬುವರಿಂದ 88 ಸಾವಿರ ರೂ. ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ; ಶೃಂಗೇರಿ: ಕರಡಿ ದಾಳಿಗೆ ರೈತನ ಸ್ಥಿತಿ ಗಂಭೀರ; ಮಣಿಪಾಲಕ್ಕೆ ದಾಖಲು

ಬಾಳೆಬರೆ ಘಾಟಿ; ವಾಹನ ಸಂಚಾರ ಆರಂಭ

ಶಿವಮೊಗ್ಗ: ಕರಾವಳಿ ಹಾಗೂ ಮಲೆನಾಡನ್ನು ಬೆಸೆಯುವ ಬಾಳೆಬರೆ (ಹುಲಿಕಲ್‌) ಘಾಟಿಯ ಕಾಂಕ್ರಿಟೀಕರಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಶನಿವಾರ ರಾತ್ರಿಯಿಂದ ವಾಹನ ಸಂಚಾರ ಮತ್ತೆ ಆರಂಭಗೊಂಡಿದೆ.

ಇದನ್ನೂ ಓದಿ; ಶಾಸಕ ಸಿ. ಟಿ ರವಿ ಆಸ್ಪತ್ರೆಗೆ ದಾಖಲು.. ಪತ್ನಿ ಪಲ್ಲವಿ ಸಿಟಿ ರವಿ ಕಣ್ಣೀರು!

ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ, ಚರಂಡಿ ಮತ್ತಿತರ ಕಾಮಗಾರಿಗಳಾಗಿ ಫೆ.5ರಿಂದ ಎ. 5ರ ವರೆಗೆ ಈ ಘಾಟಿಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಆ ಬಳಿಕ ಎ. 5ರಂದು ಕಾಮಗಾರಿ ಪೂರ್ಣಗೊಳ್ಳದ ಕಾರಣ ಮತ್ತೆ 10 ದಿನಗಳ ವರೆಗೆ ಸಂಚಾರ ನಿಷೇಧಿಸಲಾಗಿತ್ತು. ಈಗ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

3.5 ಕಿ.ಮೀ. ಕಾಮಗಾರಿ:

ಕುಂದಾಪುರ – ತೀರ್ಥಹಳ್ಳಿ ರಾಜ್ಯ ಹೆದ್ದಾರಿ ಹಾದುಹೋಗುವ ಬಾಳೆಬರೆ ಘಾಟಿಯ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ 3 ಕೋಟಿ.ರೂ. ವೆಚ್ಚದಲ್ಲಿ ಅಂದಾಜು 1 ಕಿ.ಮೀ. ಹಾಗೂ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ 10 ಕೋಟಿ.ರೂ. ವೆಚ್ಚದಲ್ಲಿ 2.5 ಕಿ.ಮೀ. ಸೇರಿದಂತೆ ಒಟ್ಟು 3.5 ಕಿ.ಮೀ. ದೂರದವರೆಗೆ ರಸ್ತೆ ಅಗಲ, ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ ನಿರ್ಮಾಣ ಕಾರ್ಯ ನಡೆದಿದೆ.

3.5 ಕಿ.ಮೀ. ಅಭಿವೃದ್ಧಿ ಬಾಕಿ:
ಬಾಳೆಬರೆ ಘಾಟಿಯು ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆ ಸೇರಿ ಹುಲಿಕಲ್‌ ಚೆಕ್‌ ಪೋಸ್ಟ್‌ನಿಂದ ಹೊಸಂಗಡಿಯ ಘಾಟಿಯ ಬುಡದ ವರೆಗೆ 14.5 ಕಿ.ಮೀ. ದೂರವಿದೆ. ಶಿವಮೊಗ್ಗ ಜಿಲ್ಲೆಯ 8 ಕಿ.ಮೀ. ಪೈಕಿ ಈ ಹಿಂದೆ ಸ್ವಲ್ಪ ಕಾಂಕ್ರಿಟೀಕರಣ ಆಗಿದ್ದು, ಈಗ ಬಾಕಿಯಿದ್ದ 2.5 ಕಿ.ಮೀ.ನೊಂದಿಗೆ ಕಾಂಕ್ರಿಟೀಕರಣಗೊಂಡಿದೆ. ಉಡುಪಿ ಜಿಲ್ಲೆಯ 6.5 ಕಿ.ಮೀ. ಘಾಟಿಯ ಪೈಕಿ ಈ ಹಿಂದೆ 2 ಕಿ.ಮೀ., ಈಗ 1 ಕಿ.ಮೀ. ಸೇರಿದಂತೆ ಒಟ್ಟು 3 ಕಿ.ಮೀ. ಕಾಂಕ್ರಿಟೀಕರಣಗೊಂಡಂತಾಗಿದೆ. ಇನ್ನು ಜಿಲ್ಲೆಯ ವ್ಯಾಪ್ತಿಯಲ್ಲಿ 3.5 ಕಿ.ಮೀ. ಘಾಟಿ ರಸ್ತೆ ಕಾಂಕ್ರಿಟೀಕರಣ ಬಾಕಿ ಇದೆ.

ಇದನ್ನೂ ಓದಿ; ಒಳಮೀಸಲಾತಿ ಕಿಚ್ಚು: ತರ್ಲಘಟ್ಟ ತಾಂಡಾದಲ್ಲಿ ವಿಜಯೇಂದ್ರಗೆ ಪ್ರತಿಭಟನೆಯ ಸ್ವಾಗತ

Most Popular

Recent Comments