Friday, June 9, 2023
Homeಇತರೆನಮ್ಮ ನಾಡಿನ ಕನ್ನಡ ಭಾಷೆ ಕಟುಕರ ಕೈಯಲ್ಲಿ ಸಿಲುಕಿದೆ, ಬೆಜೆಪಿಗೆ ನನ್ನ ಧಿಕ್ಕಾರ : ಹೆಚ್....

ನಮ್ಮ ನಾಡಿನ ಕನ್ನಡ ಭಾಷೆ ಕಟುಕರ ಕೈಯಲ್ಲಿ ಸಿಲುಕಿದೆ, ಬೆಜೆಪಿಗೆ ನನ್ನ ಧಿಕ್ಕಾರ : ಹೆಚ್. ಡಿ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು : ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರರೋಗ ವಿಜ್ಞಾನ ಸಂಸ್ಥೆಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಕನ್ನಡಕ್ಕೆ ಅವಮಾನ ಮಾಡಲಿದೆ ಎಂದು ಮಾಜಿ ಸಿಎಂ ಹೆಚ್​​.ಡಿ ಕುಮಾರ್​ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ​ಮಾಡಿರುವ ಅವರು ಕನ್ನಡ ಕಟುಕುರ ಕೈಯಲ್ಲಿ ಸಿಕ್ಕಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ(ನಿಮ್ಹಾನ್ಸ್​) 25ನೇ ಘಟಿಕೋತ್ಸವದಲ್ಲಿ ಹಿಂದಿ ಭಾಷೆಗೆ ಅಗ್ರಸ್ಥಾನ, ಇಂಗ್ಲೀಷ್​ ಭಾಷೆಗೆ ದ್ವಿತೀಯ ಸ್ಥಾನ ಕೊಟ್ಟಿದ್ದಾರೆ ಆದರೆ ನಮ್ಮ ರಾಜ್ಯದ ನಮ್ಮ ಕನ್ನಡ ಭಾಷೆಗೆ ಮೂರನೇ ಸ್ಥಾನವನ್ನು ನೀಡಿದ್ದಾರೆ.

ಕನ್ನಡ ಭಾಷೆ ಕುಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ಒಳ್ಳೆಯ ನಿರ್ದೇಶನ ಇನ್ನೊಂದಿಲ್ಲ ಎಂದು ಹೆಚ್​.ಡಿ ಕುಮಾರಸ್ವಾಮಿ ಸರಣಿ ಪೋಸ್ಟ್​ ಬರೆದಿದ್ದಾರೆ.

ಈ ಕಾರ್ಯಕ್ರಮದ ವೇದಿಕೆಯ ಮೇಲೆ ರಾಜ್ಯದ ಮುಖ್ಯಮಂತ್ರಿ, ಒಬ್ಬ ಸಚಿವರು, ಇಬ್ಬರು ಸಂಸದರು ಇದ್ದರು. ಸಾವಿರಾರು ವರ್ಷಗಳ ಘನ ಇತಿಹಾಸವುಳ್ಳ ಅಭಿಜಾತ ಭಾಷೆ ಕನ್ನಡವನ್ನು 3ನೇ ಸ್ಥಾನಕ್ಕಿಳಿಸಿದ್ದ ಆ ವೇದಿಕೆಯ ಮೇಲೆ ಕೂರಲು ಅವರಿಗೆ ಮನಸಾದರೂ ಹೇಗೆ ಬಂತು? ಈ ಮೂವರ ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ,’ ಎಂದು ಬರೆದಿದ್ದಾರೆ.

ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ. ನಮ್ಮ ನಾಡು-ನುಡಿಯ ಮೇಲೆ ದಿಲ್ಲಿ ರಾಜಕಾರಣ ನಡೆಸುತ್ತಿರುವ ಆಕ್ರಮಣ ಸ್ವಾತಂತ್ರ್ಯಕ್ಕೂ ಮುನ್ನ ವಿದೇಶಿ ಆಕ್ರಮಣಕಾರರು ನಡೆಸಿದ ದಾಳಿಗಿಂತ ಹೇಯವಾಗಿದೆ. ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಎಂದು ಹೇಳಿದರು.

ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಕನ್ನಡವನ್ನು ಕರ್ನಾಟದಿಂದಲೇ ಮೂಲೋತ್ಪಾಟನೆ ಮಾಡಬೇಕು ಎಂಬುದು ಬಿಜೆಪಿಯ ಹಿಡನ್ ಅಜೆಂಡಾವೇ? ಎಂದು ಆಕ್ರೋಶಗೊಂಡು ಬಿಜೆಪಿಗೆ ಪ್ರಶ್ನೆಯನ್ನು ಮಾಡಿದರು.

Most Popular

Recent Comments