(Kantara Chapter 1 RR:) ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಚಾಪ್ಟರ್ 1 ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಕೊನೆಯ ಪ್ರಿಂಟ್ ಬಹುತೇಕ ರೆಡಿಯಾಗಿದ್ದು ಸಿನಿಮಾದ ಪ್ರಚಾರ ಕಾರ್ಯ ಕೆಲವೇ ದಿನಗಳಲ್ಲಿ ಆರಂಭ ಆಗಲಿದೆ. ಇದೀಗ ಸಿನಿಮಾದ ವಿತರಣೆ ಹಕ್ಕನ್ನು ಪ್ಯಾನ್ ಇಂಡಿಯಾ ಸ್ಟಾರ್ ನಟರೊಬ್ಬರು ಖರೀದಿ ಮಾಡಿದ್ದಾರೆ.
ಇದನ್ನೂ ಓದಿ: 2,000 ಹಣ ಪಡೆಯಲು ತಪ್ಪದೇ ಈ ಕೆಲಸ ಮಾಡಿ
‘ಕಾಂತಾರ ಚಾಪ್ಟರ್ 1’ ಸಿನಿಮಾದ ಕೇರಳ ವಿತರಣೆ ಹಕ್ಕನ್ನು ಪ್ಯಾನ್ ಇಂಡಿಯಾ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್ ಖರೀದಿ ಮಾಡಿದ್ದಾರೆ. ಹೊಂಬಾಳೆ ಮತ್ತು ಪೃಥ್ವಿರಾಜ್ ಸುಕುಮಾರನ್ ನಡುವೆ ಬಲು ಆಪ್ತ ನಂಟಿದ್ದು, ಹೊಂಬಾಳೆ ನಿರ್ಮಾಣ ಮಾಡಿದ್ದ ‘ಕೆಜಿಎಫ್’, ‘ಕೆಜಿಎಫ್ 2’ ಮತ್ತು ‘ಕಾಂತಾರ’ ಸಿನಿಮಾಗಳ ಕೇರಳ ರಾಜ್ಯ ವಿತರಣೆ ಹಕ್ಕನ್ನು ಈ ಹಿಂದೆ ಪೃಥ್ವಿರಾಜ್ ಸುಕುಮಾರನ್ ಅವರೇ ಖರೀದಿ ಮಾಡಿದ್ದರು. ಇದೀಗ ‘ಕಾಂತಾರ ಚಾಪ್ಟರ್ 1’ ಸಿನಿಮಾದ ವಿತರಣೆ ಹಕ್ಕನ್ನು ಸಹ ಪೃಥ್ವಿರಾಜ್ ಅವರೇ ಖರೀದಿ ಮಾಡಿದ್ದಾರೆ.
ಇದನ್ನೂ ಓದಿ: 10th ಪಾಸಾದವರಿಗೆ ಸರ್ಕಾರಿ ಉದ್ಯೋಗ; 21,000 ಸಂಬಳ
(Kantara Chapter 1 RR:) ‘ಕಾಂತಾರ ಚಾಪ್ಟರ್ 1’ ಸಿನಿಮಾ ಪ್ಯಾನ್ ಇಂಡಿಯಾ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಸಹ ಏಕಕಾಲಕ್ಕೆ ಬಿಡುಗಡೆ ಆಗಲಿದೆ. ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಇನ್ನೂ ಹಲವೆಡೆ ‘ಕಾಂತಾರ ಚಾಪ್ಟರ್ 1’ ಸಿನಿಮಾ ದೊಡ್ಡ ಮಟ್ಟದಲ್ಲಿ ಬಿಡುಗಡೆ ಆಗಲಿದ್ದು, ವಿದೇಶದ ವಿತರಣೆ ಹಕ್ಕನ್ನು ಭಾರಿ ದೊಡ್ಡ ಮೊತ್ತಕ್ಕೆ ಹೊಂಬಾಳೆ ಫಿಲಮ್ಸ್ ಮಾರಾಟ ಮಾಡಿದೆಯಂತೆ.
ಇನ್ನು ಸಿನಿಮಾದ ಉತ್ತರ ಭಾರತ ಬಿಡುಗಡೆ ಹಕ್ಕನ್ನು ಈ ಹಿಂದೆ ಹೊಂಬಾಳೆಯ ಸಿನಿಮಾಗಳನ್ನು ಉತ್ತರ ಭಾರತದಲ್ಲಿ ಬಿಡುಗಡೆ ಮಾಡಿದ್ದ ಅನಿಲ್ ಟಂಡಾನಿ ಅವರೇ ಬಿಡುಗಡೆ ಮಾಡಲಿದ್ದಾರಂತೆ. ಇನ್ನೂ ಕೆಲ ರಾಜ್ಯಗಳ ಬಿಡುಗಡೆ ಹಕ್ಕುಗಳ ಮಾರಾಟಕ್ಕೆ ಹೊಂಬಾಳೆ ಫಿಲಮ್ಸ್ ಮಾತುಕತೆ ನಡೆಸುತ್ತಿದೆ. ಇನ್ನು ಕರ್ನಾಟಕದಲ್ಲಿ ಸ್ವತಃ ಹೊಂಬಾಳೆಯವರೇ ವಿತರಣೆ ಮಾಡಲಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Kantara Chapter 1 RR:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





