(Karkala Creative College) ಕಾರ್ಕಳ: (ನ್ಯೂಸ್ ಮಲ್ನಾಡ್ ವರದಿ) ಶೈಕ್ಷಣಿಕ ಸಾಧನೆಯಲ್ಲಿ ತನ್ನದೇ ಛಾಪು ಮೂಡಿಸುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆಗೈದಿದ್ದು, ವಾಣಿಜ್ಯ ವಿಭಾಗದ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ವಿಶೇಷ ಸಾಧನೆಗೈದಿದ್ದಾರೆ.
ಸಂಸ್ಕೃತ ಮತ್ತು ಇ.ಬಿ.ಎ.ಸಿಯಲ್ಲಿ ತಲಾ 100 ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದ ಸಾನ್ವಿ ರಾವ್ ಆಂಗ್ಲ ಭಾಷೆಯಲ್ಲಿ 95 ಅಂಕಗಳನ್ನು ಗಳಿಸಿದ್ದರು. ಇದೀಗ ಮರುಮೌಲ್ಯಮಾಪನ ಫಲಿತಾಂಶದಲ್ಲಿ 03 ಅಂಕಗಳನ್ನು ಹೆಚ್ಚುವರಿಯಾಗಿ ಗಳಿಸಿಕೊಂಡು 598 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಹೊರಹೊಮ್ಮಿದ್ದಾರೆ. ಇವರು ಉತ್ತರಕನ್ನಡದ ಹೊನ್ನಾವರದ ಜಗದೀಶ್ ರಾವ್ ಬಿ.ಎಸ್ ಮತ್ತು ವಿನುತಾ ಭಟ್ ದಂಪತಿಗಳ ಸುಪುತ್ರಿಯಾಗಿದ್ದಾರೆ.
ಇದನ್ನೂ ಓದಿ: ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ಇನ್ನು ವಾಣಿಜ್ಯ ವಿಭಾಗದ ಭಕ್ತಿ ಕಾಮತ್ 594 ಅಂಕಗಳೊಂದಿಗೆ ರಾಜ್ಯಕ್ಕೆ ಐದನೇ ರ‍್ಯಾಂಕ್, ವಿಜ್ಞಾನ ವಿಭಾಗದ ಸಾಗರ್ ಎಸ್.ಟಿ 591 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್ ಹಾಗೆಯೇ ವಾಣಿಜ್ಯ ವಿಭಾಗದ ವಿನಯ್ ಪ್ರಶಾಂತ್ 589 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 10ನೇ ರ‍್ಯಾಂಕ್ ಗಳಿಸಿದ್ದಾರೆ.
ಇದನ್ನೂ ಓದಿ: 50 ಲಕ್ಷ ರೂಪಾಯಿಗಿಂತ ಹೆಚ್ಚಿನ ಗೃಹ ಸಾಲ ಬೇಕಾ?; ಈ 5 ಬ್ಯಾಂಕ್‌ನಲ್ಲಿ ಕಡಿಮೆ ಬಡ್ಡಿ ದರ!; ಇಲ್ಲಿದೆ ನೋಡಿ ಡಿಟೈಲ್ಸ್
ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಒಟ್ಟು 12 ವಿದ್ಯಾರ್ಥಿಗಳು ರಾಜ್ಯದ ಮೊದಲ 10 ರ‍್ಯಾಂಕ್ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿರುವುದು ಹೆಮ್ಮೆಯ ವಿಷಯವಾಗಿದ್ದು, ವಿದ್ಯಾರ್ಥಿಗಳ ಈ ವಿಶೇಷ ಸಾಧನೆಯನ್ನು ಪ್ರಾಂಶುಪಾಲರು, ಆಡಳಿತ ಮಂಡಳಿ, ಉಪನ್ಯಾಸಕ ವರ್ಗದವರು, ಬೋಧಕೇತರ ವರ್ಗದವರು ಶ್ಲಾಘಿಸಿ ಅಭಿನಂದಿಸಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ





























