ಸಿದ್ದರಾಮಯ್ಯನವರ ಹೊಸ ಸರ್ಕಾರದ ಪೂರಕ ಬಜೆಟ್ ಮಂಡನೆ ಮಾಡಿದ್ದಾರೆ. ಹಾಗಾದ್ರೆ, ಸಿದ್ದರಾಮಯ್ಯನವರ ತಮ್ಮ ಬಜೆಟ್ ನಲ್ಲಿ ಏನೆಲ್ಲಾ ಘೋಷಣೆ ಮಾಡಿದ್ದಾರೆ, ಯಾವ ಯಾವ ಕ್ಷೇತ್ರಕ್ಕೆ ಎಷ್ಟೇಷ್ಟು ಅನುದಾನ ಎನ್ನುವ ಕುರಿತು ಇಲ್ಲಿದೆ ಮಾಹಿತಿ.
ಇದನ್ನೂ ಓದಿ; ಚಿಕ್ಕಮಗಳೂರು: ಚಾಕು ಇರಿತ ಪ್ರಕರಣ, ವಿಘ್ನೇಶ್ ಸ್ಥಿತಿ ಗಂಭೀರ
ಸಿದ್ದರಾಮಯ್ಯನವರ ಸರ್ಕಾರದಲ್ಲಿ ಚಿಕ್ಕಮಗಳೂರಿಗೆ ಏನೆಲ್ಲಾ ಅನುದಾನ ಸಿಕ್ಕಿದೆ?:
14ನೇ ಬಾರಿಗೆ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯನವರು ‘ತೆಂಗು, ಅಡಕೆ, ದ್ರಾಕ್ಷಿ, ದಾಳಿಂಬೆ ಬೆಳೆ ಸಂಸ್ಕರಣೆಗೆ 10 ಕೋಟಿ ವೆಚ್ಚದಲ್ಲಿ ಯೋಜನೆ ಜಾರಿ ಮಾಡಿದ್ದಾರೆ. ಚಿಕ್ಕಮಗಳೂರು ಕಾಫಿ, ಪ್ರವಾಸೋದ್ಯಮ ಉತ್ತೇಜನಕ್ಕೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಶಿಡ್ಲಘಟ್ಟದಲ್ಲಿ 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ. ಅನುಗ್ರಹ ಯೋಜನೆ ಮರು ಜಾರಿ ಮಾಡಿ ‘ಕುರಿ ಮೇಕೆ ಮೃತಪಟ್ಟರೆ 5 ಸಾವಿರ ರೂ. ಪರಿಹಾರ ನೀಡಲಾಗುವುದು. ಹಾಗೂ ಚಾಮುಂಡಿ ಬೆಟ್ಟ ಅಭಿವೃದ್ಧಿಗೆ ಪ್ರಾಧಿಕಾರ ಸ್ಥಾಪನೆ.
ನಮ್ಮ ಮೆಟ್ರೋ ಯೋಜನೆಗೆ ರೂ.30,000 ಕೋಟಿ;
ಬೆಂಗಳೂರು ನಮ್ಮ ಮೆಟ್ರೋ ಯೋಜನೆಗೆ 30 ಸಾವಿರ ಕೋಟಿ ಘೋಷಿಸಿದ ಸಿಎಂ ಸಿದ್ದರಾಮಯ್ಯ. ಸಮಾಜ ಕಲ್ಯಾಣ ಇಲಾಖೆಗೆ ಸರ್ಕಾರ 11,179 ಘೋಷಿಸಿದೆ. ಕಲಬುರಗಿ ಮತ್ತು ಮೈಸೂರು ಜಿಲ್ಲೆಯಲ್ಲಿ ಟ್ರಾಮಾ ಸೆಂಟರ್‌ಗೆ ನಿರ್ಮಾಣಕ್ಕೆ 30 ಕೋಟಿ ರೂಪಾಯಿ ಅನುದಾನ.
ಅನುಗ್ರಹ ಯೋಜನೆ ಮರು ಜಾರಿ:
ರಾಜ್ಯದಲ್ಲಿ ಕುರಿಗಾಯಿಗಳಿಗೆ ಸಿಹಿ ಸುದ್ದಿ ದೊರೆತಿದೆ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಅನುಗ್ರಹ ಯೋಜನೆ ಮರು ಜಾರಿ ಮಾಡುವುದಾಗಿ ತಿಳಿಸಿದ್ದಾರೆ. ಕುರಿಗಳು ಆಕಸ್ಮಿಕವಾಗಿ ಮೃತಪಟ್ಟರೆ 5 ಸಾವಿರ, ಕುರಿ ಮರಿಗೆ 2500 ರೂ. ಪರಿಹಾರ.
ಬ್ರಾಂಡ್ ಬೆಂಗಳೂರಿಗೆ 45,000 ಕೋಟಿ;
ಡಿಕೆ ಶಿವಕುಮಾರ್ ನೇತೃತ್ವದ ಬ್ರಾಂಡ್ ಬೆಂಗಳೂರು ಉಪಕ್ರಮಕ್ಕೆ 45,000 ಕೋಟಿ ಅನುದಾನ ಘೋಷಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ಬಂಪರ್ ನೀಡಿದ್ದಾರೆ.
ಜಾನುವಾರು ಉತ್ಪನ್ನಗಳ ಸಂಸ್ಕರಣೆಗೆ ಕ್ರಮ;
ಖಾಸಗಿ ಸಹಭಾಗಿತ್ವದಲ್ಲಿ ಜಾನುವಾರು ಉತ್ಪನ್ನಗಳ ಸಂಸ್ಕರಣೆ. ಮೌಲವರ್ಧನೆ ಘಟಕಗಳು, ಮಾರುಕಟ್ಟೆಗಳ ಅಭಿವೃದ್ಧಿಗೊಳಿಸಲಾಗುವುದು. ಹಸು ಎಮ್ಮೆ ಮೃತಪಟ್ಟರೆ ಸೂಕ್ತ ಪರಿಹಾರ.
ದೇಶದ ಮೊದಲ ಅಂಗಾಂಗ ಜೋಡಣೆ ಆಸ್ಪತ್ರೆ;
ದೇಶದಲ್ಲೇ ಮೊದಲ ಬಾರಿಗೆ ಅಂಗಾಂಗ ಜೋಡಣೆ ಆಸ್ಪತ್ರೆ ಸ್ಥಾಪನೆ ಮಾಡಲಿದ್ದೇವೆ. 70 ಕೋಟಿ ರೂ.ನಲ್ಲಿ ಕಲಬುರಗಿಯಲ್ಲಿ ತಾಯಿ ಮಗು ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಕೊಪ್ಪಳ, ಕಾರವಾರ, ಕೊಡಗು ಜಿಲ್ಲಾಸ್ಪತ್ರೆಗಳ ಉನ್ನತೀಕರಣಗೊಳಿಸಲು ಕ್ರಮ.
ಇಂದಿರಾ ಕ್ಯಾಂಟಿನ್‌ಗೆ ವಿಶೇಷ ಆದ್ಯತೆ;
ಹೊಸ ಇಂದಿರಾ ಕ್ಯಾಂಟಿನ್‌ಗಳಿಗೆ 100 ರೂ. ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು. 2ನೇ ಹಂತದಲ್ಲಿ ಹೊಸ ಬೆಂಗಳೂರು ವಾರ್ಡ್ಗಳಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಾಣ,
ಶಾಲಾ ಕಾಲೇಜುಗಳಿಗೆ ಹೊಸ ಶೌಚಾಲಯ;
ಕರ್ನಾಟಕದ ಆಹಾರ ಇಲಾಖೆಗೆ 10,460 ಕೋಟಿ ರೂ. ಅನುದಾನ, ಶಾಲಾ ಕಾಲೇಜುಗಳಲ್ಲಿ ಹೊಸ ಶೌಚಾಲಯ ನಿರ್ಮಿಸಲು ಚಿಂತನೆ ಇದ್ದು, ಅದಕ್ಕಾಗಿ 200 ಕೋಟಿ ರೂಪಾಯಿ ಮೀಸಲು.
1,62 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ;
ರಾಜ್ಯದ ಪ್ರಮುಖ ಮೂರು ಇಲಾಖೆಗಳಿಂದ 1,62 ಕೋಟಿ ರೂಪಾಯಿ ರಾಜಸ್ವ ಸಂಗ್ರಹ ಮಾಡುವ ಗುರಿ ಸರ್ಕಾರ ಹೊಂದಿದೆ. ಸರ್ಕಾರಿ ಅನುದಾನಿತ ಶಾಲೆಗಳಲ್ಲಿ 1-10ನೇ ತರಗತಿ ಮಕ್ಕಳಿಗೆ ಮೊಟ್ಟೆ ವಿತರಣೆ. ಮಕ್ಕಳಿಗೆ ಬಾಳೆ ಹಣ್ಣು, ಶೇಂಗಾ ಚಕ್ಕಿ ವಿತರಣೆ ಮಾಡಲಾಗುವುದು. ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೆಂಟರ್ ಸ್ಥಾಪನೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕುವೆಂಪು ವಿವಿ ವಿದ್ಯಾರ್ಥಿಗಳ ಪ್ರತಿಭಟನೆ; ಬೇಡಿಕೆ ಈಡೇರಿಸುವಂತೆ ಆಗ್ರಹ
- ಮಾರುಕಟ್ಟೆಯಲ್ಲಿ ಇಂದು ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ? 06.07.2023
- ರೈತರೇ ಗಮನಿಸಿ: ಇಂದಿನ ಅಡಿಕೆ ಧಾರಣೆ ಹೀಗಿದೆ; ಬೆಟ್ಟೆ, ಗೊರಬಲು, ಸರಕು, ಇಡಿ-06.07.2023
ನೀರಿನ ಸಮಸ್ಯೆ ಪರಿಹಾರಕ್ಕೆ ಕೆರೆ ತುಂಬಿಸುವ ಯೋಜನೆ;
ರಾಜ್ಯದಲ್ಲಿ ಕುಡಿಯುವ ನೀರು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸರ್ಕಾರ ಮುಂದಾಗಿದೆ. 172 ಯೋಜನೆಗಳ ಮೂಲಕ 19 ಕೆರೆಗಳಿಗೆ ನೀರು ತುಂಬಿಸಲು 770 ಕೋಟಿ ಹಣ ನೀಡಲಾಗುವುದು. ಉತ್ತರ ಕರ್ನಾಟಕದ ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಯಾದಗಿರಿ ಸೇರಿ ಒಟ್ಟು 823,99ಕೆರೆಗಳನ್ನು ತುಂಬಿಸಲು ಸರ್ಕಾರ ನಿರ್ಧಾರ.
ರೈತರ ಆದಾಯ ಹೆಚ್ಚಳಕ್ಕೆ ಸರ್ಕಾರ ಕ್ರಮ;
ರೈತರ ಆದಾಯವನ್ನು ಹೆಚ್ಚಿಸುವುದರಲ್ಲಿ ತೋಟಗಾರಿಕಾ ಬೆಳೆಗಳು ಪ್ರಮುಖ ಪಾತ್ರ ವಹಿಸುತ್ತವೆ. ತೋಟಗಾರಿಕಾ ವಲಯದಲ್ಲಿನ ರಾಜ್ಯದ ಸಾಮರ್ಥ್ಯವನ್ನು ಹೆಚ್ಚಿಸಲು ತೆಂಗು, ಅಡಿಕೆ, ದ್ರಾಕ್ಷಿ, ದಾಳಿಂಬೆ, ಮಾವು ಮತ್ತಿತರ ಹಣ್ಣು, ತರಕಾರಿ, ಹೂವುಗಳು ಸೇರಿದಂತೆ ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರಫ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು. 2823-24ನೇ ಸಾಲಿನಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ರೋಗ ನಿಯಂತ್ರಣ ಕ್ರಮ.
ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಕ್ರಮ;
ಕೃಷ್ಣಾ ನ್ಯಾಯಾಧಿಕರಣ-2ರ ತೀರ್ಪಿನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ಕ್ಕೆ ಹಂಚಿಕೆಯಾಗಿರುವ 130 ಟಿ.ಎಂ.ಸಿ ನೀರಿನ ಬಳಕೆಗಾಗಿ ಯೋಜನಾ ಕಾಮಗಾರಿಗಳ ಜೊತೆಗೆ ಭೂಸ್ವಾಧೀನತೆ ಹಾಗೂ ಪುನರ್ ವಸತಿ ಮತ್ತು ಪುನರ್ ನಿರ್ಮಾಣಕ್ಕೆ ಆದ್ಯತೆ ನೀಡಿ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಕ್ರಮ.
ಅಪ್ಪು ಸ್ಮರಣಾರ್ಥ ಆಸ್ಪತ್ರೆಗಳಲ್ಲಿ ಎಇಡಿ ವ್ಯವಸ್ಥೆ;
ಹಠಾತ್ ಹೃದಯಾಘಾತ ಸಾವು ತಡೆಯಲು ಸರ್ಕಾರ ಕ್ರಮಕೈಗೊಳ್ಳಲಿದೆ. ದಿ.ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಜಿಲ್ಲಾ-ತಾಲೂಕು ಆಸ್ಪತ್ರೆಗಳಲ್ಲಿ 06 ಕೊಟಿ ವೆಚ್ಚದಲ್ಲಿ ಎಇಡಿ ಚಿಕಿತ್ಸಾ ಯಂತ್ರ ಅಳವಡಿಸಲು ಕ್ರಮ.
ಬುಡಕಟ್ಟು ಪಂಗಡಗಳ ಪೌಷ್ಠಿಕತೆಗೆ ಒತ್ತು;
ರಾಜ್ಯದ 8 ಜಿಲ್ಲೆಗಳಲ್ಲಿ ವಾಸಿಸುತ್ತಿರುವ 11 ಬುಡಕಟ್ಟು ಪಂಗಡಗಳಾದ ಕೊರಗ, ಜೇನುಕುರುಬ, ಸೋಲಿಗ, ಎರವ, ಕಾಡುಕುರುಬ, ಮಲೆಕುಡಿಯ, ಸಿದ್ಧಿ, ಹಸಲರು, ಗೌಡಲು, ಗೊಂಡ ಮತ್ತು ಬೆಟ್ಟಕುರುಬ ಜನಾಂಗದ ಕುಟುಂಬಗಳಿಗೆ ಪೌಷ್ಟಿಕ ಆಹಾರ ಯೋಜನೆಯನ್ನು ವಾರ್ಷಿಕ ಆರು ತಿಂಗಳುಗಳಿಗೆ ನೀಡಲಾಗುತ್ತಿದೆ. ಇದನ್ನು 12 ತಿಂಗಳಿಗೆ ವಿಸ್ತರಿಸಲಾಗುವುದು. ಇದಕ್ಕೆ ವಾರ್ಷಿಕವಾಗಿ 50 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಒದಗಿಸಲಿದೆ.
ಮದ್ಯಪ್ರಿಯರಿಗೆ ಬಿಗ್ ಶಾಕ್, ಬಿಯರ್ ಮೇಲಿನ ಅಬಕಾರಿ ಶುಲ್ಕ ಶೇ 10 ಹೆಚ್ಚಳ;
ಈ ಬಾರಿಯ ಬಜೆಟ್‌ನಲ್ಲಿ ಅಬಕಾರಿ ಶುಲ್ಕದಲ್ಲಿ ಹೆಚ್ಚಳವನ್ನು ಮಾಡಿದ್ದು ಶೇಕಡ 20 ರಷ್ಟು ಮಾಡಿದ್ದು ಈ ಮೂಲಕ ಬಿಯರ್ ಮೇಲಿನ ಅಬಕಾರಿ ಶುಲ್ಕವನ್ನು ಶೇ 10 ರಷ್ಟು ಹೆಚ್ಚಳ.
ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಫಂಡ್;
ISEC ಸಂಸ್ಥೆಯಲ್ಲಿ Ph.D. ಮಾಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಡಾ. ಬಿ.ಆರ್. ಅಂಬೇಡ್ಕರ್ ಫೆಲೋಶಿಪ್ ನೀಡಲು ಎರಡು ಕೋಟಿ ರೂ. Corpus fund ನೀಡಲಾಗುವುದು. ‘ಸ್ವಾವಲಂಬಿ ಸಾರಥಿ’ ಯೋಜನೆಯಡಿ ಎಸ್‌ಸಿ, ಎಸ್‌ಟಿ ನಿರುದ್ಯೋಗಿ ಯುವಜನರು ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲದ ಶೇ.75 ರಷ್ಟು, ಗರಿಷ್ಠ ನಾಲ್ಕು ಲಕ್ಷ ರೂ. ಸಹಾಯಧನ.
ಸರ್ಕಾರದಿಂದ ಶಿಕ್ಷಣಕ್ಕೆ ಆದ್ಯತೆ:
ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣಾ ವೆಚ್ಚ ಗರಿಷ್ಠ 45,000 ರೂ.ಗಳ ವರೆಗೆ ಹೆಚ್ಚಿಸಲಾಗಿದೆ. 153 ಕೋಟಿ ರೂ. ಅನುದಾನ. ಶಾಲೆ, ಕಾಲೇಜುಗಳ ಕೊಠಡಿಗಳ ನಿರ್ಮಾಣ, ದುರಸ್ತಿಗೆ 650 ಕೋಟಿ ರೂ. ಹಾಗೂ ಶೌಚಾಲಯ ಘಟಕ ನಿರ್ಮಾಣಕ್ಕೆ 200 ಕೋಟಿ ರೂ. ಅನುದಾನ.
12 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಅಭಿವೃದ್ಧಿ;
ರಾಜ್ಯದಲ್ಲಿ 50 ವರ್ಷಗಳನ್ನು ಪೂರೈಸಿದ 12 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಪಾರಂಪರಿಕ ಸಂಸ್ಥೆಗಳೆಂದು ಘೋಷಿಸಿ ಕೈಗಾರಿಕೆಗಳ ಬೇಡಿಕೆಗೆ ಅನುಗುಣವಾಗಿ ಅಭಿವೃದ್ಧಿಪಡಿಸಲಾಗುವುದು. ಈ ಸಂಬಂಧ ನಿರ್ಮಾಣ ಕಾರ್ಯ ಹಾಗೂ ಹೊಸ ಉಪಕರಣಗಳು ಮತ್ತು ಯಂತ್ರೋಪಕರಣಗಳ ಖರೀದಿಗಾಗಿ 100 ಕೋಟಿ ರೂ.ಗಳನ್ನು ವಿನಿಯೋಗ.
ಸಹಕಾರ ಮತ್ತು ರೇಷ್ಮೆ;
ರಾಜ್ಯದ 30 ಲಕ್ಷಕ್ಕೂ ಹೆಚ್ಚು ರೈತರಿಗೆ 25,000 ಕೋಟಿ ರೂ. ಸಾಲ ವಿತರಣೆ ಗುರಿ ಹೊಂದಿರುವ ಕಾಂಗ್ರೆಸ್ ಸರ್ಕಾರ, ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯಲು ಕ್ರಮ ಕೈಗೊಂಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ರೈತರಿಗೆ ಸರಕು ಸಾಗಾಣಿಕೆಗೆ ಪಿಕ್‌ಅಪ್ ವ್ಯಾನ್ ಖರೀದಿಗೆ ಶೇ.4 ರ ಬಡ್ಡಿ ದರದಲ್ಲಿ 7 ಲಕ್ಷ ರೂ. ವರೆಗಿನ ಸಾಲ ಸೌಲಭ್ಯ ಒದಗಿಸಲಾಗುವುದು. ಇನ್ನು ರಾಜ್ಯದ ಆಯ್ದ 50 ತರಕಾರಿ ಮಾರುಕಟ್ಟೆಗಳಲ್ಲಿ ಮಿನಿ ಶೀತಲಗೃಹಗಳ ಸ್ಥಾಪನೆ.
ಅನ್ನಭಾಗ್ಯ ಯೋಜನೆಯಡಿಯಲ್ಲಿ 4.42ಕೋಟಿ:
ಅನ್ನಭಾಗ್ಯ ಯೋಜನೆಯ ಮೂಲಕ ಬಡತನ ರೇಖೆಗಿಂತ ಕೆಳಗಿರುವ 4.42 ಕೋಟಿ ಫಲಾನುಭವಿಗಳಿಗೆ ಅನುಕೂಲವಾಗಲಿದೆ. ಇದಕ್ಕೆ ವರ್ಷಕ್ಕೆ ಸುಮಾರು 10,000 ಕೋಟಿ ರೂ.ಗಳಷ್ಟು ವೆಚ್ಚ.
ವಿದ್ಯಾರ್ಥಿ ವೇತನ ಮರು ಜಾರಿ:
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡಲು 24 ಲಕ್ಷ ವಿದ್ಯಾರ್ಥಿಗಳಿಗೆ 881 ಕೋಟಿ ರೂ.ಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವನ್ನು ಕಾಂಗ್ರೆಸ್ ಅವಧಿಯಲ್ಲಿ ಮಂಜೂರು ಮಾಡಿತ್ತು. ಆದರೆ ಬಿಜೆಪಿ ಸರ್ಕಾರವು 2020-21, 2021-22 ಮತ್ತು 2022-23ನೇ ಸಾಲಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸದೇ ನಿರ್ಲಕ್ಷಿಸಿತು. ಇದೀಗ ಕಾರ್ಯಕ್ರಮ ಪುನರ್ ಪ್ರಾರಂಭಿಸಲು ಸರ್ಕಾರ ನಿರ್ಧರ.
ರಾಜ್ಯದ GSDP ಶೇ.17ಕ್ಕೆ ಹೆಚ್ಚಿಸಲು ಗುರಿ;
ರಾಜ್ಯದ GSDP ಬೆಳವಣಿಗೆ ದರವನ್ನು ಶೇ.13 ರಿಂದ ಶೇ.17ಕ್ಕೆ ಹೆಚ್ಚಿಸುವ ಮೂಲಕ ರಾಜ್ಯವನ್ನು 1 ಟ್ರಿಲಿಯನ್ ಡಾಲರ್ ಎಕಾನಮಿಯಾಗಿ ಏರಿಸುವ ಗುರಿ ಹೊಂದಲಾಗಿದೆ. ಇದರೊಂದಿಗೆ ಕೃಷಿ, ಉದ್ಯಮ ಮತ್ತು ಸೇವಾ ವಲಯಗಳ ಸಾಮರ್ಥ್ಯ ವೃದ್ಧಿ, ಮೂಲಸೌಕರ್ಯ ಬೆಂಬಲ, ಅಧಿಕಾರ ಪ್ರತ್ಯಾಯೋಜನೆ, ಆಡಳಿತ ವಿಕೇಂದ್ರೀಕರಣ ಮತ್ತಿತರ ಉಪಕ್ರಮ ಜಾರಿಗೆ.
ಮನೆಬಾಗಿಲಿಗೆ ಔಷಧ: 8 ಜಿಲ್ಲೆಗಳಲ್ಲಿ ಜಾರಿ;
ರಾಜ್ಯದಲ್ಲಿ ಕ್ಷಯ ರೋಗ ಪತ್ತೆಗೆ ಕೈಚಾಲಿತ-ಕ್ಷ-ಕಿರಣ ಉಪಕರಣ ಒದಗಿಸಲು 3 ಕೋಟಿ ರೂ. ಅನುದಾನ ಸರ್ಕಾರ ಒದಗಿಸಲಿದೆ. ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆ, ಮನೆಬಾಗಿಲಿಗೆ ಔಷಧ ವಿತರಣೆ-ಪ್ರಾಯೋಗಿಕವಾಗಿ 8 ಜಿಲ್ಲೆಗಳಲ್ಲಿ ಜಾರಿ.
ವಿವಿಧ ಇಲಾಖೆಗಳಿಗೆ ಸಿಕ್ಕ ಅನುದಾನವೆಷ್ಟು?
ನಗರಾಭಿವೃದ್ಧಿ ಇಲಾಖೆಗೆ 19044 ಕೋಟಿ ರೂ. ಅನುದಾನ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಗೆ ಕಂದಾಯ ಇಲಾಖೆಗೆ 16167 ಕೋಟಿ ರೂ. ಅನುದಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 14950 ಕೋಟಿ ರೂ, ಅನುದಾನ ನೀಡಲಾಗುವುದು. ಸಮಾಜ ಕಲ್ಯಾಣ ಇಲಾಖೆಗೆ 11,179 ಕೋಟಿ ರೂಪಾಯಿ ಅನುದಾನ ನಿಗದಿಗೊಳಿಸಲಾಗಿದೆ. ಇಂಧನ ಇಲಾಖೆಗೆ 22,773 ಕೋಟಿ ರೂಪಾಯಿ.