Karnataka By Election result: ಕರ್ನಾಟಕದ 3 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವಿನತ್ತ

(Karnataka By Election result) ಕರ್ನಾಟಕದ ಮೂರು ವಿಧಾನಸಭೆ ಕ್ಷೇತ್ರಗಳ (Karnataka Assembly By-Election) ವಿಧಾನಸಭಾ ‌ಉಪಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ.


ಇದನ್ನೂ ಓದಿ;  ಗ್ರಾಪಂ ನೌಕರರ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!


ಕರ್ನಾಟಕದಲ್ಲಿ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಜಿದ್ದಾಜಿದ್ದಿ ಕ್ಷೇತ್ರವಾಗಿವೆ. ಅದರಲ್ಲಂತೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಎನ್​ಡಿಎ ಮೈತ್ರಿಕೂಟ ಮತ್ತು ಕಾಂಗ್ರೆಸ್​ ಮಧ್ಯೆ ಪ್ರತಿಷ್ಠೆಯ ಕಣವಾಗಿದೆ. ಚನ್ನಪಟ್ಟಣದಿಂದ ಎನ್​ಡಿಎ ಮೈತ್ರಿಕೂಟದಿಂದ ನಿಖಿಲ್​ ಕುಮಾರಸ್ವಾಮಿ ಮತ್ತು ಕಾಂಗ್ರೆಸ್​ನಿಂದ ಸಿಪಿ ಯೋಗೇಶ್ವರ್​ ಕಣದಲ್ಲಿದ್ದಾರೆ.

ಶಿಗ್ಗಾಂವಿಯಿಂದ ಎನ್​ಡಿಎ ಮೈತ್ರಿಕೂಟದಿಂದ ಭರತ ಬೊಮ್ಮಾಯಿ ಕಾಂಗ್ರೆಸ್​ನಿಂದ ಯಾಸಿರ್ ಅಹಮದ್​ ಖಾನ್​ ಪಠಾಣ್​ ಅವರು ಕಣದಲ್ಲಿದ್ದಾರೆ.

ಕೊನೆಯದಾಗಿ ಸಂಡೂರಲ್ಲಿ ಎನ್​ಡಿಎ ಮೈತ್ರಿಕೂಟದಿಂದ ಬಂಗಾರು ಹನುಮಂತು ಮತ್ತು ಕಾಂಗ್ರೆಸ್​ನಿಂದ ಅನ್ನಪೂರ್ಣ ತುಕಾರಾಂ ಕಣದಲ್ಲಿದ್ದರೆ.


ಇದನ್ನೂ ಓದಿ; ಬ್ಯಾಂಕ್‌ ನಲ್ಲಿ ಸಾಲ ಮಾಡಿರುವವರಿಗೆ ಸಿಹಿಸುದ್ದಿ; ಕೇಂದ್ರ ಹಣಕಾಸು ಸಚಿವೆಯಿಂದ ಮಹತ್ವದ ಸೂಚನೆ


ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.
* 9,105 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ ಅನ್ನಪೂರ್ಣ ತುಕಾರಾಂ
* ಅನ್ನಪೂರ್ಣ ತುಕಾರಾಂ ಪಡೆದ ಮತಗಳು 88,727
* ಬಂಗಾರು ಹನಮಂತು ಪಡೆದ 79,622 ಮತಗಳು


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಭರ್ಜರಿ ಸುದ್ದಿ; ಡ್ರೈವಿಂಗ್ ಸೇರಿ ವಿವಿಧ ತರಬೇತಿಗೆ ಅರ್ಜಿ ಆಹ್ವಾನ!


ಚನ್ನಪಟ್ಟಣದಲ್ಲಿ 14ನೇ ಸುತ್ತಿನ ಮತ ಎಣಿಕಾ ಕಾರ್ಯ ಮುಕ್ತಾಯವಾಗಿದ್ದು, ನಿರಂತರ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಗೆಲುವಿನ ಸನಿಹದತ್ತ ಬಂದಿದ್ದಾರೆ.

ಸದ್ಯ ಕಾಂಗ್ರೆಸ್ 84413 ಮತಗಳನ್ನು ಪಡೆದಿದ್ದು, ಜೆಡಿಎಸ್ 60103 ಮತಗಳನ್ನು ಪಡೆದುಕೊಂಡಿದೆ. ಸಿಪಿವೈ 24310 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನು ಕೇವಲ 6 ಸುತ್ತುಗಳ ಮಾತ್ರ ಎಣಿಕಾ ಕಾರ್ಯ ಮಾತ್ರ ಬಾಕಿ ಉಳಿದಿದ್ದು, ಈಗಾಗಲೇ 1 ಲಕ್ಷದ 50 ಸಾವಿರ ಮತಗಳ ಎಣಿಕಾ ಕಾರ್ಯ ಪೂರ್ಣಗೊಂಡಿದೆ. 50600 ಮತಗಳ ಎಣಿಕೆ ಬಾಕಿ ಉಳಿದಿದೆ.


ಇದನ್ನೂ ಓದಿ; ರೇಷನ್ ಕಾರ್ಡ್ ಪಡೆಯಲು ಇರುವ ಮಾನದಂಡಗಳೇನು?; ಇಲ್ಲಿದೆ ನೋಡಿ ಮಾಹಿತಿ


ಶಿಗ್ಗಾಂವಿಯಲ್ಲಿ ಭರತ್‌ಬೊಮ್ಮಾಯಿ – 55,285
ಯಾಸಿರ್‌ ಪಠಾಣ್‌ – 68,078
12,793 ಅಂತರ ಕಾಯ್ದುಕೊಂಡಿದ್ದಾರೆ.

Karnataka By Election result: ಕರ್ನಾಟಕದ 3 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವಿನತ್ತ
Karnataka By Election result: ಕರ್ನಾಟಕದ 3 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವಿನತ್ತ

ಇತ್ತೀಚಿನ ಜನಪ್ರಿಯ ಸುದ್ದಿಗಳು