ಬೆಂಗಳೂರು: ಕರಾವಳಿ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದಾದ್ಯಂತ ಜುಲೈ.26 ರವರೆಗೂ ಭಾರೀ ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂಗಾರು ಆರಂಭವಾಗಿ ಹಲವು ದಿನಗಳು ಕಳೆದಿದ್ದು ಅನೇಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಈಗಾಗಲೇ ಪ್ರವಾಹದ ಭೀತಿ ಉಂಟಾಗಿದ್ದು ಅನೇಕ ಕಡೆ ಧರೆ ಕುಸಿದಿದೆ, ಅತೀಯಾದ ಗಾಳಿಯಿಂದ ಮರ ಗಿಡಗಳು ನೆಲಕ್ಕುರುಳಿದೆ, ಮನೆಗಳಿಗೆ ಕಟ್ಟಡಗಳಿಗೆ ಹಾನಿಯಾಗಿದೆ,
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗಾಳಿಯಿಂದ ಕೂಡಿದ ಮಳೆಯಾಗುತ್ತಿದೆ ಜುಲೈ 23-24 ರಂದು ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹಾಗೇಯೇ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದಾರೆ,
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಹಲವು ಕಡೆ ಶೀತಗಾಳಿ ಮುಂದುವರೆದಿದೆ, ಬೆಂಗಳೂರಿನಲ್ಲಿ ನಿನ್ನೆ ಸಂಜೆ 5-40 ರವರೆಗೆ 1.7 ಎಮ್ ಎಮ್ ಮಳೆಯಾಗಿದ್ದು, ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1 ಎಮ್ ಎಮ್. ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ 0.7 ಎಮ್ ಎಮ್ ಮಳೆಯಾಗಿದೆ ಎಂದು ತಿಳಿದುಬಂದಿದೆ.
ಜುಲೈ 23 ರಂದು ವಾಯವ್ಯ ಬಂಗಾಳಕೊಲ್ಲಿಯಲ್ಲಿ ಹವಾಮಾನದಲ್ಲಿ ಏರುಪೇರಾಗುವ ಸಾಧ್ಯತೆಯಿದೆ, ಇದರ ಪರಿಣಾಮದಿಂದ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಜುಲೈ 26 ರವರೆಗೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.