(Karnataka Jails:) ಕರ್ನಾಟಕದ ಜೈಲುಗಳಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಮಹತ್ವದ ಕ್ರಮಗಳನ್ನು ಕೈಗೊಂಡಿದ್ದಾರೆ. ಜೈಲುಗಳಲ್ಲಿ ಶಿಸ್ತನ್ನು ಬಲಪಡಿಸಲು ಕೈದಿಗಳ ವಿಶೇಷ ಸಂದರ್ಶನ ಹಾಗೂ ಸಿಬ್ಬಂದಿ ವರ್ಗಾವಣೆ ಕುರಿತಾಗಿ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ರಿಲೀಫ್; ಏನದು, ಮಿಸ್ ಮಾಡ್ದೆ ಈ ಸುದ್ದಿ ಓದಿ
ವರ್ಷಾನುಗಟ್ಟಲೆ ಒಂದೇ ಜೈಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಬೇರೆ ಜೈಲುಗಳಿಗೆ ವರ್ಗಾವಣೆ ಮಾಡುವ ಯೋಜನೆಯನ್ನು ಇಲಾಖೆ ರೂಪಿಸಿದೆ. ಒಂದೇ ಸ್ಥಳದಲ್ಲಿ ದೀರ್ಘಕಾಲ ಕೆಲಸ ಮಾಡಿದರೆ ಕೈದಿಗಳೊಂದಿಗೆ ಅನ್ಯೂನ್ಯತೆ ಹೆಚ್ಚಾಗಿ ಅಕ್ರಮಗಳಿಗೆ ಅವಕಾಶ ಸಿಗುವ ಸಾಧ್ಯತೆ ಇರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಇದೇ ವೇಳೆ ಜೈಲಿನಲ್ಲಿರುವ ಕೈದಿಗಳ ಕುಟುಂಬಸ್ಥರ ಭೇಟಿಗೆ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಗಂಭೀರ ಅನಾರೋಗ್ಯ ಅಥವಾ ಗಾಯದಿಂದ ನಡೆಯಲು ಸಾಧ್ಯವಾಗದ ಕೈದಿಗಳಿಗೆ ತಿಂಗಳಿಗೆ ಒಮ್ಮೆ ಕುಟುಂಬದವರನ್ನು ಭೇಟಿ ಮಾಡುವ ಅವಕಾಶ ನೀಡಲಾಗಿದೆ. ಕುಟುಂಬದಲ್ಲಿ ಸಾವು ಅಥವಾ ತುರ್ತು ವೈದ್ಯಕೀಯ ಪರಿಸ್ಥಿತಿ ಉಂಟಾದ ಸಂದರ್ಭದಲ್ಲೂ ಕೈದಿಗೆ ಕುಟುಂಬಸ್ಥರು ಭೇಟಿ ನೀಡಿ ಮಾಹಿತಿ ನೀಡಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮೊಬೈಲ್ ನಲ್ಲೇ ಸಿಗಲಿದೆ ಹಳೆಯ ಪಹಣಿ
ಕೈದಿ ಬಿಡುಗಡೆಯ ದಿನಾಂಕಕ್ಕೆ ಎರಡು ತಿಂಗಳು ಮುಂಚೆ ಕುಟುಂಬದವರು ಭೇಟಿ ನೀಡಿ ಮುಂದಿನ ಜೀವನ, ಉದ್ಯೋಗ, ವಾಸಸ್ಥಳ ಮತ್ತು ಸಲಹೆಗಳ ಕುರಿತು ಚರ್ಚೆ ನಡೆಸಲು ಅವಕಾಶ ನೀಡಲಾಗಿದೆ. ಕೈದಿಗಳನ್ನು ಭೇಟಿ ಮಾಡುವವರು ವಿಕಲಚೇತನರು ಅಥವಾ ಗರ್ಭಿಣಿಯರಾಗಿದ್ದರೆ ಕೂಡ ತಿಂಗಳಿಗೆ ಒಮ್ಮೆ ವಿಶೇಷ ಸಂದರ್ಶನಕ್ಕೆ ಅವಕಾಶ ಇರಲಿದೆ.
ಕೈದಿ ಭೇಟಿಗೆ ಪಾಲಿಸಬೇಕಾದ ಪ್ರಮುಖ ನಿಯಮಗಳು:
- ಸಂಬಂಧಿಸಿದ ಜೈಲು ಮುಖ್ಯಸ್ಥರ ಲಿಖಿತ ಅನುಮತಿ ಕಡ್ಡಾಯ
- ಜೈಲು ಭದ್ರತಾ ತಪಾಸಣೆಗೆ ಸಹಕರಿಸಬೇಕು
- ನಿಗದಿತ ಸಂದರ್ಶನ ಕೊಠಡಿಯಲ್ಲಿ ಮಾತ್ರ ಭೇಟಿ
- ಗರಿಷ್ಠ 30 ನಿಮಿಷಗಳವರೆಗೆ ಮಾತ್ರ ಸಂದರ್ಶನ
- ಒಂದೇ ವೇಳೆ 5 ಮಂದಿಗಿಂತ ಹೆಚ್ಚು ಮಂದಿ ಭೇಟಿಗೆ ಅವಕಾಶ ಇಲ್ಲ
- ಜೈಲು ಅಧಿಕಾರಿಯ ಮೇಲ್ವಿಚಾರಣೆ ಕಡ್ಡಾಯ
- ಕನಿಷ್ಠ 2 ಕೆಲಸದ ದಿನಗಳ ಮುಂಚಿತವಾಗಿ ಅರ್ಜಿ ಸಲ್ಲಿಸಬೇಕು
- ಅತ್ಯವಶ್ಯಕ ಪರಿಸ್ಥಿತಿಯಲ್ಲಿ ಕಾರಾಗೃಹ ಡಿಜಿಪಿ ಅನುಮತಿ ಪಡೆಯಬೇಕು
ಇದನ್ನೂ ಓದಿ: ಎಲ್ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ; ಗ್ರಾಹಕರಿಗೆ ಬಿಗ್ ಶಾಕ್

ಇತ್ತೀಚಿನ ಜನಪ್ರಿಯ ಸುದ್ದಿಗಳು (Karnataka Jails:)
-
- ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
- ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
- ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
- ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
- ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್
- ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
- ಯುವಕರಿಗೆ ʼಗ್ರಾಮ ಒನ್ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
- ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
- 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
- ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿ ಆಹ್ವಾನ





