ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್‌ನನ್ನು ನಿಯಂತ್ರಣಕ್ಕೆ ತರಲು ರಾಜ್ಯ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸುತ್ತಿದ್ದು, ರಾತ್ರಿ 9 ಗಂಟೆಯಿoದಲೇ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿಯವರು, ರಾಜ್ಯದಲ್ಲಿ ನೈಟ್ ಕರ್ಫ್ಯೂ ಅವಧಿಯನ್ನು ವಿಸ್ತರಿಸಲಾಗಿದೆ. ಇಂದಿನಿoದ ರಾತ್ರಿ 10 ಗಂಟೆಯ ಬದಲು ರಾತ್ರಿ 9 ಗಂಟೆಯಿoದಲೇ ನೈಟ್ ಕರ್ಫ್ಯೂ ಅನ್ನು ಜಾರಿಗೊಳಿಸಲಾಗುತ್ತಿದೆ ಎಂದರು.
ನೆರೆಯ ರಾಜ್ಯಗಳಾದ ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ನಾಳೆಯಿಂದಲೇ ಶನಿವಾರ ಮತ್ತು ಭಾನುವಾರ ವಾರಾಂತ್ಯ ಲಾಕ್ ಡೌನ್ ಜಾರಿಗೊಳಿಸಲಾಗುತ್ತದೆ ಎಂದು ಸಿಎಂ ತಿಳಿಸಿದರು.
ಕೇರಳ ಗಡಿ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಮಂಗಳೂರು, ಮಡಿಕೇರಿ ಹಾಗೂ ಮಹಾರಾಷ್ಟ್ರ ಗಡಿ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ ಮತ್ತು ಬೀದರ್ ನಲ್ಲಿ ವಾರಾಂತ್ಯ ಲಾಕ್ ಡೌನ್ ಜಾರಿಗೊಳಿಸಲಾಗುತ್ತಿದೆ.