ಕರ್ನಾಟಕ: ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕರಾವಳಿ, ಮಲೆನಾಡಿನಲ್ಲಿ ಮಳೆಯಾಗುವ ಸೂಚನೆ ನೀಡಲಾಗಿದೆ.
ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಹಾಸನ, ಕೊಡಗು, ರಾಮನಗರ, ತುಮಕೂರು, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 5 ಹಾಗೂ 6ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ ತಿಂಗಳಿನಲ್ಲಿ ದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ದಾಖಲಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬುಧವಾರ ಮುನ್ಸೂಚನೆಯನ್ನು ನೀಡಿದೆ. ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಳೆ ದಾಖಲಾಗಿತ್ತು. ಎರಡು ತಿಂಗಳಿನಲ್ಲಿ ಬಿಟ್ಟು ಬಿಟ್ಟು ಮಳೆಯಾಗಿ ದೀರ್ಘಕಾಲ ಬಿಡುವನ್ನೂ ಪಡೆದುಕೊಂಡಿತ್ತು. ಇದೀಗ ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆಯ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ.
ಆಗಸ್ಟ್ ತಿಂಗಳಿಗೆ ಹೋಲಿಸಿದರೆ ಮುಂಗಾರಿನ ಕೊನೆಯ ತಿಂಗಳಾದ ಸೆಪ್ಟೆಂಬರ್‌ನಲ್ಲಿ ಹೆಚ್ಚಿನ ಮಳೆ ದಾಖಲಾಗಬಹುದು. ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆ ದಾಖಲಾಗಬಹುದು ಎಂದು ಹವಾಮಾನ ಇಲಾಖೆಯವರು ತಿಳಿಸಿದ್ದಾರೆ.