KCET: KCET ಪರೀಕ್ಷೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

KCET :ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ ನಡೆಸಲಿದ್ದು, ಇದಕ್ಕೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಮತ್ತೊಮ್ಮೆ ಫೆಬ್ರುವರಿ 27ರವರೆಗೆ ವಿಸ್ತರಿಸಲಾಗಿದೆ.

ಇದು ಕೊನೆಯ ಅವಕಾಶವಾಗಿದ್ದು, ಈ ಅವಧಿ ನಂತರ ಪುನಃ ದಿನಾಂಕ ವಿಸ್ತರಣೆ ಅಗುವುದಿಲ್ಲ. ಅಭ್ಯರ್ಥಿಗಳಿಗೆ ಇದು ಅರ್ಜಿ ಸಲ್ಲಿಸಲು ಕೊನೆಯ ಅವಕಾಶವಾಗಿದೆ. ಹೀಗಾಗಿ ಅಭ್ಯರ್ಥಿಗಳು ವಿಸ್ತರಿಸಿದ ನಿಗದಿತ ಅವಧಿಯೊಳಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ನ್ನೂ ಓದಿ: 10th ಪಾಸ್‌ ಆದವರಿಗೆ ಪೋಸ್ಟ್‌ ಆಫೀಸ್‌ ನಲ್ಲಿ ಭರ್ಜರಿ ಜಾಬ್‌ ಆಫರ್‌; 12,000 ದಿಂದ ಸಂಬಳ


ಸುಮಾರು ಜನ ಅಭ್ಯರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯುವ ನಿರೀಕ್ಷೆಯಲ್ಲಿ ಇದ್ದರು. ಕೆಲವು ಅಭ್ಯರ್ಥಿಗಳು ಕೊನೆಯ ದಿನಾಂಕ ಒಳಗಾಗಿ ಅರ್ಜಿ ಸಲ್ಲಿಸಿದ್ದರು ಇನ್ನು ಕೇಲವರು ತಂತ್ರಾಂಶದ ಸಮಸ್ಯೆ ಹಾಗೂ ಶುಲ್ಕ ಪಾವತಿಗೆ ಸಮಯ ಸಿಗದ ಕಾರಣ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. 22 ರ ಕೊನೆಯ ದಿನಾಂಕವನ್ನು ವಿಸ್ತರಿಸಬೇಕೆಂದು ಮನವಿ ಮಾಡಿದ್ದಾರೆ.

ಇದುವರೆಗೂ ಸುಮಾರು 3.18 ಲಕ್ಷ ಮಂದಿ ಅಭ್ಯರ್ಥಿಗಳು ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಿದ್ದು, ಇನ್ನೂ ಅನೇಕರು ಫೆ.22ರ ಕೊನೆ ದಿನಾಂಕವನ್ನು ವಿಸ್ತರಿಸುವಂತೆ ಕೋರಿದ್ದಾರೆ. ವಿದ್ಯಾರ್ಥಿಗಳ ಈ ಕೋರಿಕೆ ಸ್ವೀಕರಿಸಿ ಆ ಪ್ರಕಾರ ಅರ್ಜಿ ಸಲ್ಲಿಸಲು ಫೆ.27 ಹಾಗೂ ಶುಲ್ಕ ಪಾವತಿಗೆ ಮಾರ್ಚ್ 3ರವರೆಗೆ ಅವಕಾಶ ನೀಡಲಾಗಿದೆ.


ನ್ನೂ ಓದಿ: 6 ತಿಂಗಳು ಇಂತಹವರ ರೇಷನ್‌ ಕಾರ್ಡ್‌ ಕ್ಯಾನ್ಸಲ್‌; ಕಾರಣವೇನು ಗೊತ್ತಾ…?


ಅರ್ಜಿ ಸಲ್ಲಿಸಿರುವವರ ಪೈಕಿ 2.18 ಲಕ್ಷ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಸ್ಯಾಟ್ಸ್ ಮೂಲಕ ಆನ್‌ಲೈನ್ ನಲ್ಲಿ ಆಗಿದೆ. ಕಾಲೇಜು ಹಂತದಲ್ಲಿ 1.08 ಲಕ್ಷ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮಾಡಲಾಗಿದೆ.

KCET: KCET ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ
KCET: KCET ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (KCET:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
  6. 10th ಪಾಸ್‌ ಆದವರಿಗೆ ಪೋಸ್ಟ್‌ ಆಫೀಸ್‌ ನಲ್ಲಿ ಭರ್ಜರಿ ಜಾಬ್‌ ಆಫರ್‌; 12,000 ದಿಂದ ಸಂಬಳ
  7. 6 ತಿಂಗಳು ಇಂತಹವರ ರೇಷನ್‌ ಕಾರ್ಡ್‌ ಕ್ಯಾನ್ಸಲ್‌; ಕಾರಣವೇನು ಗೊತ್ತಾ…?