Monday, December 11, 2023
Homeಮಲೆನಾಡುಕೊಡಗುರಾಜಾಸೀಟ್​ ಉದ್ಯಾನದ ಸೆಕ್ಯೂರಿಟಿ ಗಾರ್ಡ್​ ಮೇಲೆ ವ್ಯಾಪಾರಸ್ಥನಿಂದ ಹಲ್ಲೆ

ರಾಜಾಸೀಟ್​ ಉದ್ಯಾನದ ಸೆಕ್ಯೂರಿಟಿ ಗಾರ್ಡ್​ ಮೇಲೆ ವ್ಯಾಪಾರಸ್ಥನಿಂದ ಹಲ್ಲೆ

ಕೊಡಗು: (ನ್ಯೂಸ್ ಮಲ್ನಾಡ್ ವರದಿ) ಪ್ರವಾಸಿಗರ ಆಕರ್ಷಣೆಯ ತಾಣವೆಂದೆ ಪ್ರಸಿದ್ಧಿ ಪಡೆದಿರುವ ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇಲ್ಲಿಯ ರಾಜಾಸೀಟ್ ಉದ್ಯಾನದ ಸೆಕ್ಯೂರಿಟಿ ಗಾರ್ಡ್ ಮೇಲೆ ಸ್ಥಳೀಯ ವ್ಯಾಪಾರಸ್ಥರು ಹಲ್ಲೆ ಮಾಡಿರುವ ಘಟನೆ ಸೋಮವಾರ ಉದ್ಯಾನದ ಮುಂಭಾಗದಲ್ಲಿ ನಡೆದಿದೆ. ಜಯಣ್ಣ ಹಲ್ಲೆಗೊಳಗಾದ ರಾಜಾಸೀಟ್ ಉದ್ಯಾನದ ಸೆಕ್ಯೂರಿಟಿ ಗಾರ್ಡ್. ಕೋಲಿನಿಂದ ಹೊಡೆದು ಹಲ್ಲೆ ನಡೆಸಲಾಗಿದ್ದು, ಗಾಯಾಳು ಜಯಣ್ಣ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ;  ಚಾರ್ಮಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಓರ್ವ ಸಾವು, ಹಿಂಬದಿ ಸವಾರನ ಸ್ಥಿತಿ ಗಂಭೀರ

ನಿನ್ನೆ ಸಂಜೆ ಸುಮಾರಿಗೆ ಜಯಣ್ಣ ಮತ್ತು ಉದ್ಯಾನ ಮುಂಭಾಗದಲ್ಲಿನ ವ್ಯಾಪಾರಸ್ಥ ಜಮ್ ಶೇದ್ ನಡುವೆ ಸಣ್ಣ ವಿಚಾರವಾಗಿ ಗಲಾಟೆ ಆರಂಭವಾಗಿದೆ. ಬಳಿಕ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದ್ದು, ಇದರಿಂದ ಕೋಪಗೊಂಡ ಜಮ್ ಶದ್ ಏಕಾಏಕಿ ಜಯಣ್ಣರ ಮೇಲೆ ಕೋಲಿನಿಂದ ಹಲ್ಲೆ ನಡೆಸಿದ್ದಾನೆ. ಜೊತೆಗೆ ಹಲ್ಲೆ ತಡೆಯಲು ಬಂದ ಜಯಣ್ಣ ಪತ್ನಿ ಸುಶೀಲಾ ಅವರ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ;  ಸಿಟ್ಟಿನಲ್ಲಿ ತಮ್ಮನ ಜೀವವನ್ನೇ ತೆಗೆದ ಅಣ್ಣ

ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ತೊಟಗಾರಿಕಾ ಅಧಿಕಾರಿಗಳು ಉದ್ಯಾನದ ಮಂಭಾಗದ ಗೇಟ್ ಬಂದ್ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಾಜಾಸೀಟ್ ಉದ್ಯಾನದ ಮುಂದೆ ಇದ್ದ ವ್ಯಾಪಾರಸ್ಥರನ್ನು ತೆರವುಗೊಳಿಸಿದ ನಗರಸಭೆ ಅಧಿಕಾರಿಗಳು:
ಇನ್ನು ಹಲ್ಲೆಗೆ ಸಂಬಂಧಿಸಿದಂತೆ ರಾಜಾಸೀಟ್ ಉದ್ಯಾನದ ಮುಂದೆ ಇದ್ದ ವ್ಯಾಪಾರಸ್ಥರನ್ನು ನಗರಸಭೆ ಅಧಿಕಾರಿಗಳು ಮಂಗಳವಾರ ತೆರವುಗೊಳಿಸಿದರು. ಇಲ್ಲಿನ ವ್ಯಾಪಾರಿಗಳು ಹಾಗೂ ಉದ್ಯಾನದ ಭದ್ರತಾ ಸಿಬ್ಬಂದಿಯ ನಡುವೆ ಹೊಡೆದಾಟ ನಡೆದು ಪರಸ್ಪರ ದೂರು ದಾಖಲಾಗಿದೆ. ಹೀಗಾಗಿ ನಗರಸಭೆ ಇಲ್ಲಿರುವ ಎಲ್ಲ 20 ವ್ಯಾಪಾರಿಗಳನ್ನೂ ತೆರವುಗೊಳಿಸಿತು.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ‘ರಾಜಾಸೀಟ್ ಉದ್ಯಾನದ ವ್ಯಾಪಾರಿಗಳ ವಿರುದ್ಧ ಹಲವು ದೂರುಗಳು ಕೇಳಿ ಬಂದಿತ್ತು. ಇವರು ಅನುಮತಿ ಪಡೆಯದೇ ಅನಧಿಕೃತವಾಗಿ ವ್ಯಾಪಾರ ಮಾಡುತ್ತಿದ್ದರು. ಈಗ ಅವರನ್ನೆಲ್ಲ ತೆರವುಗೊಳಿಸಿ, ಆವರಣವನ್ನು ಅಭಿವೃದ್ಧಿಪಡಿಸಿ ನಿಯಮಾನುಸಾರ ಟೆಂಡರ್ ಕರೆದು ವ್ಯಾಪಾರಕ್ಕೆ ಹಂಚಿಕೆ ಮಾಡಲಾಗುವುದು’ ಎಂದು ತಿಳಿಸಿದರು.

ಬಾರ್ ಕ್ಯಾಷಿಯರ್ ನ ಬರ್ಬರ ಕೊಲೆ

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಬಾರ್ ನ ಕ್ಯಾಷಿಯರ್ ನನ್ನು ಡ್ರ‍್ಯಾಗರ್ ನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಚಿನ್ ಕುಮಾರ್ (27) ಕೊಲೆಯಾದ ವ್ಯಕ್ತಿ.

ಇದನ್ನೂ ಓದಿ; ತರೀಕೆರೆ ಶಾಸಕರ ಅಭಿನಂದನಾ ಸಮಾರಂಭದಲ್ಲೇ ವ್ಯಕ್ತಿಯ ಬರ್ಬರ ಕೊಲೆ

ನಿನ್ನೆ ರಾತ್ರಿ 10.00 ಗಂಟೆಗೆ ಬಾರ್ ಗೆ ಕುಡಿಯಲು ಬಂದಿದ್ದ ಮೂರು ಜನ ಆರೋಪಿಗಳು ರಾತ್ರಿ 11.30 ಆದರೂ ಮದ್ಯ ಸೇವಿಸುತ್ತಿದ್ದರು. “11.30 ಆಗಿದೆ ಬಂದ್ ಮಾಡ್ತೇವೆ ಹೊರಡಿ” ಎಂದು ಕ್ಯಾಶಿಯರ್ ಹೇಳಿದ್ದಕ್ಕೆ ಮೂವರು ಖ್ಯಾತೆ ತೆಗೆದಿದ್ದಾರೆ.

“ನಮ್ದು ಇನ್ನು ಕುಡಿದು ಮುಗಿದಿಲ್ಲ, ನಾವು ಹೋಗಲ್ಲ ಏನ್ ಮಾಡ್ತೀಯಾ” ಅಂತಾ ಆರೋಪಿಗಳು ಗಲಾಟೆ ಮಾಡಿ ಯುವಕನ ಎದೆಗೆ ಡ್ರ‍್ಯಾಗರ್ ನಿಂದ ಚುಚ್ಚಿದ್ದಾರೆ. ಇದೆ ವೇಳೆ 112 ವಾಹನ ಕೂಡ ಬಂದಿದ್ದು, ಪೊಲೀಸರ ಎದುರೆ ಜಗಳ ನಡೆದು ಕೊಲೆಯಾಗಿದೆ. ನಿರಂಜನ, ಸತೀಶ, ಅಶೋಕನಾಯ್ಕ ಕೊಲೆ ಮಾಡಿದ ಆರೋಪಿಗಳು ಎಂದು ಗುರುತಿಸಲಾಗಿದೆ.

ಇದನ್ನೂ ಓದಿ; ಡ್ರೈವಿಂಗ್ ಸ್ಕೂಲ್ ಕುಮಾರಣ್ಣ ಇನ್ನಿಲ್ಲ, ಅನಾರೋಗ್ಯ ಕಾರಣದಿಂದ ನಿಧನ

ಇನ್ನು ಮೃತ ಸಚಿನ್ ಗೆ ಆಯನೂರು ಪ್ರಾಥಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡುವ ಮೊದಲೇ ಸಚಿನ್ ಸಾವನ್ನಪ್ಪಿದ್ದಾನೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ; ಪೈಪ್ ಲೈನ್ ದುರಸ್ತಿ ಕಾಮಗಾರಿಯಿಂದ ತೊಂದರೆ: ಸ್ಥಳೀಯರ ಪ್ರತಿಭಟನೆ

Most Popular

Recent Comments