ಬೆಂಗಳೂರು : ಕರ್ನಾಟಕ-ಕೇರಳ ನಡುವೆ ಸಂಚಾರಕ್ಕೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂಬ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನೋಟಿಸ್ ನನ್ನು ನೀಡಿದೆ.
ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಕೇಂದ್ರ ಆರೋಗ್ಯ ಸಚಿವಾಲಯದ ಪ್ರತಿನಿಧಿಗಳಿಗೆ ಕೇರಳ ಹೈಕೋರ್ಟ್ ನೋಟಿಸ್ ನನ್ನು ಜಾರಿಮಾಡಿದ್ದು ಹೈಕೋರ್ಟ್ ಗೆ ಆಗಸ್ಟ್ 17 ರಂದು ಹಾಜರಾಗಿ ಸ್ಪಷ್ಟನೆಯನ್ನು ನೀಡುವಂತೆ ಸೂಚನೆಯನ್ನು ನೀಡಿದೆ.
ಕರ್ನಾಟಕ-ಕೇರಳ ನಡುವಿನ ಸಂಚಾರಕ್ಕೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯದ ಆದೇಶದ ಹಿನ್ನೆಲೆಯಲ್ಲಿ ಸ್ಪಷ್ಟನೆಯನ್ನು ನೀಡುವಂತೆ ಕೇರಳದ ಸಿಪಿಎಂ ಮುಖಂಡ ದಯಾನಂದ್ ಎಂಬುವರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು. ಅರ್ಜಿಯನ್ನು ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ಕರ್ನಾಟಕ ಸರ್ಕಾರ, ಕೇಂದ್ರ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಆಗಸ್ಟ್ 17 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆಯನ್ನು ನೀಡಿದೆ.