(KERALA) ದೇವರನಾಡು ಎಂದೇ ಕರೆಯುವ ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇರಳ ವಿಧಾನಸಭೆ 2ನೇ ಬಾರಿ ಅಂಗೀಕಾರ ನೀಡಿದೆ.
ಇದನ್ನೂ ಓದಿ: ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
ಕಳೆದ ವರ್ಷ ಈ ನಿರ್ಣಯವನ್ನು ಕೇರಳ ವಿಧಾನಸಭೆಯಲ್ಲಿ ಪ್ರಸ್ತಾವಕ್ಕೆ ಇಡಲಾಗಿತ್ತು. ಸರ್ವಾನುಮತದಿಂದ ಈ ಪ್ರಸ್ತಾವನಗೆ ಅಂಗೀಕಾರವೂ ದೊರಕಿತ್ತು. ಬಳಿಕ ಕೇಂದ್ರಕ್ಕೆ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರವು ಕೆಲ ಅಂಶಗಳಲ್ಲಿ ತಿದ್ದುಪಡಿಗೆ ಸೂಚಿಸಿ ಪ್ರಸ್ತಾವನೆಯನ್ನು ಕೇರಳ ರಾಜ್ಯ ಸರ್ಕಾರಕ್ಕೆ ಹಿಂತಿರುಗಿಸಿತ್ತು. ಆ ನಂತರ ತಿದ್ದುಪಡಿ ಮೂಲಕ ಕೇರಳ ವಿಧಾನಸಭೆಯಲ್ಲಿ 2ನೇ ಬಾರಿಗೆ ಸರ್ವಾನುಮತದಿಂದ ಪ್ರಸ್ತಾವನೆಗೆ ಅಂಗೀಕಾರ ಸಿಕ್ಕಿದೆ.
ಭಾರತದ ಸಂವಿಧಾನದ 8ನೇ ಶೆಡ್ಯೂಲ್‌ನಲ್ಲಿರುವ ಎಲ್ಲಾ ಭಾಷೆಗಳಲ್ಲಿ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸಲು ಒತ್ತಾಯಿಸಲಾಗಿತ್ತು. ರಾಜ್ಯವನ್ನು ಮಲಯಾಳಂನಲ್ಲಿ ಕೇರಳಂ ಎಂದು ಕರೆಯಲಾಗುತ್ತದೆ. ಆದರೆ ಇತರ ಭಾಷೆಗಳಲ್ಲಿ ಅದು ಇನ್ನೂ ಕೇರಳ ಎಂದೇ ಇದೆ. ಸಂವಿಧಾನದ ಮೊದಲ ಶೆಡ್ಯೂಲ್‌ನಲ್ಲಿ ಕೂಡ ನಮ್ಮ ರಾಜ್ಯದ ಹೆಸರನ್ನು ಕೇರಳ ಎಂದು ಬರೆಯಲಾಗಿದೆ. ಆದಕಾರಣ ಅದಕ್ಕೆ ತಿದ್ದುಪಡಿ ತಂದು ಎಲ್ಲೆಡೆ ಕೇರಳಂ ಎಂದು ಕರೆಯುವಂತೆ ಮಾಡಬೇಕು ಎಂದು ಕೇರಳ ಮುಖ್ಯಂತ್ರಿ ಪಿಣರಾಯಿ ವಿಜಯನ್ ಹೇಳಿದ್ದರು. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಎಂಟನೇ ಶೆಡ್ಯೂಲ್‌ನಲ್ಲಿ ಹೆಸರು ಬದಲಿಸುವ ಪ್ರಸ್ತಾವನ ಸಲ್ಲಿಸಲಾಗಿತ್ತು. ಈ ರೀತಿ ಹೆಸರು ಬದಲಾವಣೆ ಪ್ರಕ್ರಿಯೆ ಕೇವಲ ಮೊದಲ ಶೆಡ್ಯೂಲ್‌ನಲ್ಲಿ ಮಾತ್ರ ಅವಕಾಶವಿದೆ ಎಂದು ಕೇಂದ್ರ ಸರ್ಕಾರ ನಿರ್ಣಯದ ಪ್ರಸ್ತಾವನೆಯನ್ನು ಹಿಂತಿರುಗಿಸಿತ್ತು. ಹೀಗಾಗಿ ಇದೀಗ 2ನೇ ಬಾರಿಗೆ ಮೊದಲ ಶೆಡ್ಯೂಲ್ ಅಡಿಯಲ್ಲಿ ಈ ನಿರ್ಣಯಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ಪಡೆದು ಕೇಂದ್ರಕ್ಕೆ ಕಳುಹಿಸಲಾಗಿದೆ.

ಇದನ್ನೂ ಓದಿ: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಗುಡ್ ನ್ಯೂಸ್; ಗೌರವಧನ ಹೆಚ್ಚಳ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






