(Kerosene:) ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮನೆ ಅಡುಗೆಗಾಗಿ ಮತ್ತೆ ಸೀಮೆಎಣ್ಣೆ ಬಳಸಲು ತಾತ್ಕಾಲಿಕವಾಗಿ ಅನುಮತಿ ನೀಡಲಾಗಿದೆ. ಈ ಸಂಬಂಧ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ವಾಹನ ಮಾಲೀಕರ ಗಮನಕ್ಕೆ; ಇನ್ಮುಂದೆ ಗಾಡಿ FC ಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್
ರಾಜ್ಯಗಳಿಗೆ ಪಡಿತರ ಅಂಗಡಿಗಳ (PDS) ಮೂಲಕ ವಿತರಿಸಲು ಈಗಿರುವ 1 ಲಕ್ಷ ಕಿಲೋಲೀಟರ್ ನಿಯಮಿತ ಕೋಟಾದ ಜೊತೆಗೆ ಹೆಚ್ಚುವರಿಯಾಗಿ 48,000 ಕಿಲೋಲೀಟರ್ ಸೀಮೆಎಣ್ಣೆ ಹಂಚಿಕೆ ಮಾಡಲಾಗಿದೆ. ಪ್ರಾಥಮಿಕವಾಗಿ ಬಡ ಕುಟುಂಬಗಳಿಗೆ ಅಡುಗೆ ಇಂಧನವಾಗಿ ಇದನ್ನು ವಿತರಿಸುವಂತೆ ಸೂಚಿಸಲಾಗಿದೆ.
ಎಲ್‌ಪಿಜಿ ಮೇಲಿನ ಒತ್ತಡ ಕಡಿಮೆ ಮಾಡಲು ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಬಯೋಮಾಸ್, ಆರ್‌ಡಿಎಫ್ ಪೆಲೆಟ್‌ಗಳು ಮತ್ತು ಕಲ್ಲಿದ್ದಲು (ಕೋಲ್) ಅನ್ನು ಒಂದು ತಿಂಗಳ ಕಾಲ ಪರ್ಯಾಯ ಇಂಧನವಾಗಿ ಬಳಸಲು ಅನುಮತಿ ನೀಡುವಂತೆ ಪರಿಸರ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಮನವಿ ಮಾಡಿದೆ.
ಇದನ್ನೂ ಓದಿ: ನಿಮ್ಮ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದೀರಾ?; ಅಂತಹವರು ಈ ಸ್ಟೋರಿ ಓದಲೇಬೇಕು?
2012ರಿಂದ ದೇಶದಲ್ಲಿ ಎಲ್‌ಪಿಜಿ ಅಡುಗೆ ಅನಿಲ ಬಳಕೆಯನ್ನು ಉತ್ತೇಜಿಸುವ ಅಭಿಯಾನ ಆರಂಭವಾಗಿತ್ತು. ನಂತರ ಉಜ್ವಲ ಯೋಜನೆಯಡಿ ಬಡ ಕುಟುಂಬಗಳಿಗೆ ಸರ್ಕಾರ ಸಬ್ಸಿಡಿ ದರದಲ್ಲಿ ಸಿಲಿಂಡರ್ ಒದಗಿಸುತ್ತಿದೆ. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ತಾತ್ಕಾಲಿಕ ಪರಿಹಾರವಾಗಿ ಸೀಮೆಎಣ್ಣೆ ಬಳಕೆಗೆ ಅನುಮತಿ ನೀಡಲಾಗಿದೆ.
ಎಲ್‌ಪಿಜಿ ಪೂರೈಕೆ ಸಮಸ್ಯೆ ನಿವಾರಣೆಯಾಗುವವರೆಗೆ ಈ ಕ್ರಮ ಮುಂದುವರಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Kerosene:)
-
- ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
- ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
- ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
- ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
- ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್
- ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
- ಯುವಕರಿಗೆ ʼಗ್ರಾಮ ಒನ್ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
- ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
- 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
- ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿ ಆಹ್ವಾನ





