Kisan-19th installment: ಇನ್ನು ನಾಲ್ಕು ದಿನಗಳಲ್ಲಿ 2000 ಹಣ ಜಮಾ!

(Kisan-19th installment) ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಹಣದ ಬಿಡುಗಡೆ ಇದೇ ತಿಂಗಳು ಫೆಬ್ರುವರಿ 24ರಂದು ಪ್ರಧಾನಿ ನರೇಂದ್ರ ಮೋದಿ ಅವರು ಹಣ ರಿಲೀಸ್ ಮಾಡಲಿದ್ದಾರೆ.


ಇದನ್ನೂ ಓದಿ: ಗೂಗಲ್ ಪೇನಲ್ಲಿ ಅದ್ಭುತವಾದ ವೈಶಿಷ್ಟ್ಯ ಪರಿಚಯ!;  ಏನದು ಗೊತ್ತಾ?


ಈ 19ನೇ ಕಂತಿನ ಹಣ ಫೆಬ್ರುವರಿ ಕೊನೆಯ ವಾರದಲ್ಲಿ ಬಿಡುಗಡೆ ಆಗಬಹುದು ಎಂದು ಈ ಹಿಂದೆ ಹಲವು ವರದಿಗಳು ಅಂದಾಜು ಮಾಡಿದ್ದವು. ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕೂಡ ಸುಳಿವು ನೀಡಿದ್ದರು. ಇದೀಗ ಫೆಬ್ರುವರಿ 24ರಂದು ಹಣ ಬಿಡುಗಡೆ ಆಗುವುದು ಖಾತ್ರಿಯಾಗಿದೆ. ಮುಂದಿನ ಸೋಮವಾರ ಫಲಾನುಭವಿ ರೈತರು ತಮ್ಮ ಖಾತೆಗೆ 2,000 ರೂ ಬರಬಹುದೆಂದು ನಿರೀಕ್ಷಿಸಬಹುದು.

2019ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಸರ್ಕಾರವು ರೈತರಿಗೆ ವ್ಯವಸಾಯಕ್ಕೆ ಸಹಾಯವಾಗಿ ವರ್ಷಕ್ಕೆ 6,000 ರೂನಷ್ಟು ಹಣ ನೀಡುತ್ತದೆ. ಈ 6,000 ರೂ ಹಣವನ್ನು ವರ್ಷದಲ್ಲಿ ಮೂರು ಕಂತುಗಳಲ್ಲಿ ನೀಡುತ್ತದೆ. ಪ್ರತೀ ನಾಲ್ಕು ತಿಂಗಳಿಗೊಮ್ಮೆ 2,000 ರೂ ಹಾಕುತ್ತದೆ. ಏಪ್ರಿಲ್​ನಿಂದ ಜುಲೈ, ಆಗಸ್ಟ್​​ನಿಂದ ನವೆಂಬರ್, ಡಿಸೆಂಬರ್​ನಿಂದ ಮಾರ್ಚ್ ಹೀಗೆ ಮೂರು ಬಾರಿ ಸರ್ಕಾರದಿಂದ ರೈತರ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಆಗುತ್ತದೆ.


ಇದನ್ನೂ ಓದಿ: ಪೋಸ್ಟ್‌ ಆಫೀಸ್‌ ನಲ್ಲಿ ಜಾಬ್‌ ಆಫರ್; 10th ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಯೋಜನೆಯಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ:
ಯೋಜನೆಗೆ ನೊಂದಾಯಿಸಿದ್ದು ಈ 19ನೇ ಕಂತಿನ ಹಣ ನಿಮ್ಮ ಕೈಸೇರುತ್ತದೋ ಇಲ್ಲವೋ ಎಂದು ಆತಂಕಗೊಂಡಿರಬಹುದು. ಈ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಎಂಬುದನ್ನು ತಿಳಿದುಕೊಳ್ಳಲು ಸಾಧ್ಯ.

* ಮೊದಲಿಗೆ ಪಿಎಂ ಕಿಸಾನ್ ಯೋಜನೆಯ ವೆಬ್​ಸೈಟ್​ಗೆ ಹೋಗಿರಿ: pmkisan.gov.in/
* ಮುಖ್ಯಪುಟದಲ್ಲಿ ತುಸು ಕೆಳಗೆ ಸ್ಕ್ರೋಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ಸೆಕ್ಷನ್ ಕಾಣುತ್ತೀರಿ.
* ಇಲ್ಲಿ ‘ಬೆನಿಫಿಷಿಯರಿ ಲಿಸ್ಟ್’ ಅನ್ನು ಕ್ಲಿಕ್ ಮಾಡಿ.
* ನಂತರ, ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು ಹಾಗು ಊರನ್ನು ಆಯ್ದುಕೊಂಡರೆ, ಆ ಊರಿನಲ್ಲಿರುವ ಎಲ್ಲಾ ಫಲಾನುಭವಿಗಳ ಪಟ್ಟಿಯನ್ನು ಕಾಣಬಹುದು.
* ಇದರಲ್ಲಿ ನಿಮ್ಮ ಹೆಸರಿದೆಯಾ ಗಮನಿಸಿ ನೋಡಿ.


ಇದನ್ನೂ ಓದಿ: ನಿಮ್ಮ ಬೆರಳುಗಳಲ್ಲಿ ಅಡಗಿದೆ ಈ ರಹಸ್ಯ!; ಕಿರುಬೆರಳು ಹೇಳುತ್ತೆ ನಿಮ್ಮ ವ್ಯಕ್ತಿತ್ವ


ಯೋಜನೆಗೆ ನೊಂದಾಯಿಸಿ:
ಇನ್ನು ನೀವು ಈ ಯೋಜನೆಗೆ ಅರ್ಹರಾಗಿದ್ದು, ಇನ್ನೂ ನೊಂದಾಯಿಸದಿದ್ದರೆ ಈಗಲೂ ಅವಕಾಶ ಇದೆ. ಇದೇ ವೆಬ್​ಸೈಟ್​ಗೆ ಹೋಗಿ ಅಲ್ಲಿ ಫಾರ್ಮರ್ಸ್ ಕಾರ್ನರ್​ನಲ್ಲಿ ನ್ಯೂ ಫಾರ್ಮರ್ ರಿಜಿಸ್ಟ್ರೇಶನ್ ಅನ್ನು ಕ್ಲಿಕ್ ಮಾಡಿ ಅಲ್ಲಿಂದ ನೀವು ಯೋಜನೆಗೆ ನೊಂದಾಯಿಸಬಹುದು.

Kisan-19th installment: ಇನ್ನು ನಾಲ್ಕು ದಿನಗಳಲ್ಲಿ 2000 ಹಣ ಜಮಾ!
Kisan-19th installment: ಇನ್ನು ನಾಲ್ಕು ದಿನಗಳಲ್ಲಿ 2000 ಹಣ ಜಮಾ!

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ