Krishi Bhagya 25: ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(Krishi Bhagya 25:) 2025-26ನೇ ಸಾಲಿನ ಕೃಷಿ ಇಲಾಖೆ ವತಿಯಿಂದ ಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಹುಟ್ಟೂರು ಶೃಂಗೇರಿಯನ್ನ ಕೊಂಡಾಡಿದ ವಜ್ರಕಾಯ ಬೆಡಗಿ; ನಾನು ಶೃಂಗೇರಿಯವಳು ಎನ್ನಲು ಈ ಕಾರಣಕ್ಕೆ ಹೆಮ್ಮೆ ನಭಾ ನಟೇಶ್..


ಕೃಷಿ ಹೊಂಡ, ತಂತಿಬೇಲಿ, ಟಾರ್ಪಲ್ ಹೊದಿಕೆ, ಕ್ಷೇತ್ರ ಬದು, ಡಿಸೇಲ್ ಇಂಜನ್ ಹಾಗೂ ತುಂತುರು ನೀರಾವರಿಗೆ ಪ್ಯಾಕೇಜ್ ಮಾದರಿಯಲ್ಲಿ ಸಹಾಯಧನ ಪಡೆಯಲು ಲಭ್ಯವಿದ್ದು, ಎಲ್ಲಾ ವರ್ಗದ ಅರ್ಹ ರೈತರು ಅರ್ಜಿ ಸಲ್ಲಿಸಬಹುದಾಗಿದೆ.

ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಮತ್ತು ಹನಿ ನೀರಾವರಿ ಘಟಕಗಳಿಗೆ (ಕೃಷಿ ಬೆಳೆಗಳಿಗೆ ಮಾತ್ರ) ಎಲ್ಲಾ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನ ನೀಡಲಾಗುತ್ತದೆ. ಕೊಳವೆ ಬಾವಿ ಅಥವಾ ನೀರಾವರಿ ಮೂಲ ಹೊಂದಿರುವ ಮತ್ತು ಕನಿಷ್ಠ 1 ಎಕರೆ ಜಮೀನು ಹೊಂದಿರುವ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.


ಇದನ್ನೂ ಓದಿ: ವರ್ಷದ ಕೊನೆಯ ಖಗ್ರಾಸ ಚಂದ್ರಗ್ರಹಣ; ಶುರು-ಅಂತ್ಯ ಯಾವಾಗ?


ಆಸಕ್ತ ರೈತರು ಅರ್ಜಿಗಳನ್ನು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಿ ಯೋಜನೆಗಳಡಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಸಂಪರ್ಕಿಸಬಹುದಾಗಿದೆ.

Krishi Bhagya 25: ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
Krishi Bhagya 25: ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಇತ್ತೀಚಿನ ಜನಪ್ರಿಯ ಸುದ್ದಿಗಳು (Krishi Bhagya 25:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ