(krishi bhagya yojana) ರಾಜ್ಯ ಸರ್ಕಾರ ರೈತರಿಗಾಗಿ ಕೆಲವು ಪ್ರಮುಖ ಯೋಜನೆಗಳು ಜಾರಿ ತಂದಿದ್ದು, ಅದರಲ್ಲಿ ಕೃಷಿಭಾಗ್ಯ ಯೋಜನೆಯೂ ಒಂದು. ರೈತರಿಗಾಗಿಯೇ ಸಬ್ಸಿಡಿ ನೀಡುವ ಯೋಜನೆ ಇದಾಗಿದ್ದು, 2023 24ನೇ ಸಾಲಿನಲ್ಲಿ 24 ಜಿಲ್ಲೆಗಳ 106 ಪ್ರದೇಶಗಳನ್ನು ಈ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಕೂಡ ಕೃಷಿಭಾಗ್ಯ ಯೋಜನೆಯ ಇಂಪ್ಲಿಮೆಂಟ್ ಮಾಡಲು ಸರ್ಕಾರ ನಿರ್ಧರಿಸಿದೆ.
ಇದನ್ನೂ ಓದಿ; ಸಂಗೀತಾ ಶೃಂಗೇರಿ ಫಿಟ್ನೆಸ್ ಹಿಂದಿನ ಸೀಕ್ರೆಟ್ ಏನು ಗೊತ್ತಾ?; ಇವರ ಬೋಲ್ಡ್ ಲುಕ್ ಗೆ ಫ್ಯಾನ್ಸ್ ಫಿದಾ
ಈ ಯೋಜನೆಯ ಪ್ರಯೋಜನವೇನು?;
ಈ ಯೋಜನೆಯಲ್ಲಿ ಕೃಷಿ ಹೊಂಡ ನಿರ್ಮಾಣ, ಕ್ಷೇತ್ರ ಬದು ನಿರ್ಮಾಣ, ಕೃಷಿಹೊಂಡದ ಸುತ್ತಲೂ ತಂತಿ ಬೇಲಿ ನಿರ್ಮಾಣ, ಪಂಪ್ ಸೆಟ್ ವಿತರಣೆ ಹಾಗೂ ನೀರಾವರಿಗೆ ಅನುಕೂಲ ಆಗುವಂತಹ ಸಬ್ಸಿಡಿಯನ್ನು ಈ ಯೋಜನೆಯಲ್ಲಿ ನೀಡಲಾಗುತ್ತದೆ.
ಇದನ್ನೂ ಓದಿ; ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಉದ್ಯೋಗ; 1113 ಹುದ್ದೆಗಳಿಗೆ ಅರ್ಜಿ ಆಹ್ವಾನ
ಯಾರಿಗೆ ಸಿಗಲಿದೆ ಈ ಕೃಷಿ ಭಾಗ್ಯ ಯೋಜನೆ?;
ಪ್ರಮುಖವಾಗಿ ಈ ಯೋಜನೆ ಸಣ್ಣ ಮತ್ತು ಅತಿ ಸಣ್ಣ ರೈತರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆ ಅರ್ಜಿ ಸಲ್ಲಿಸಲು ಬಯಸುವ ರೈತರಿಗೆ ಸ್ವಂತ ಕೃಷಿ ಭೂಮಿ ಹೊಂದಿರಬೇಕು. ಹಾಗೂ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರಬೇಕು.
ಇದನ್ನೂ ಓದಿ; ಮತದಾರರೇ ಗಮನಿಸಿ; ವೋಟರ್ ಲಿಸ್ಟ್ ನಲ್ಲಿ ಹೆಸರು ಸೇರ್ಪಡೆಗೆ ಇನ್ನೂ ಇದೆ ಕಾಲಾವಕಾಶ
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆ ಯಾವುದು?;
* ರೈತರ ಆಧಾರ್ ಕಾರ್ಡ್
* ಪಹಣಿ ಅಥವಾ ಆರ್ ಟಿ ಸಿ
* ರೈತರು ಫೂಟ್ಸ್ ಐಡಿ ಹೊಂದಿರಬೇಕು
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಬಡ್ಡಿಯಿಲ್ಲದೆ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ!
ಈ ಯೋಜನೆಗೆ ಅರ್ಜಿ ಸಲ್ಲಿಕೆ ಎಲ್ಲಿ?;
ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಸಬ್ಸಿಡಿ ಹಣವನ್ನು ಪಡೆದುಕೊಳ್ಳಲು ಹತ್ತಿರದ ರೈತ ಸೇವಾ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ಮಹಿಳೆಯರಿಗೆ ಉಚಿತವಾಗಿ ಸಿಗಲಿದೆ ಸೋಲಾರ್ ಸ್ಟವ್; ಈ ರೀತಿ ಅರ್ಜಿ ಸಲ್ಲಿಸಿ







Leave a Reply