(Krushi Bhagya Benefits:) ಒಣಭೂಮಿ ಪ್ರದೇಶದ ರೈತರಿಗೆ ಕೃಷಿ ಹೊಂಡವು ಇಂದು ಕೇವಲ ನೀರಿನ ಸಂಗ್ರಹಣೆಯ ಸಾಧನವಲ್ಲ, ಬಹುಮುಖ ಆದಾಯದ ಮೂಲವಾಗುತ್ತಿದೆ. ಮಳೆಯಾಧಾರಿತ ಕೃಷಿಯ ಮೇಲೆ ಅವಲಂಬಿತವಾಗಿರುವ ರೈತರಿಗೆ ಬೇಸಿಗೆಯಲ್ಲಿ ನೀರಿನ ಕೊರತೆ ದೊಡ್ಡ ಸವಾಲಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಮಹತ್ವ ನೀಡಿದೆ.
ಇದನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ
ಕರ್ನಾಟಕದ ಬಹುಪಾಲು ಕೃಷಿಭೂಮಿ ಮಳೆಯನ್ನೇ ಅವಲಂಬಿಸಿರುವುದರಿಂದ, ನೀರಿನ ಸಂಗ್ರಹಣೆ ಮತ್ತು ಸಮರ್ಪಕ ಬಳಕೆ ಅನಿವಾರ್ಯವಾಗಿದೆ. ಈ ಸಮಸ್ಯೆ ನಿವಾರಣೆಗೆ ಕೃಷಿ ಇಲಾಖೆ ಕೃಷಿ ಭಾಗ್ಯ ಯೋಜನೆಯ ಮೂಲಕ ಕೃಷಿ ಹೊಂಡ ನಿರ್ಮಾಣ, ಪಾಲಿಥೀನ್ ಹೊದಿಕೆ ಅಳವಡಿಕೆ, ಡೀಸೆಲ್ ಅಥವಾ ಸೋಲಾರ್ ಪಂಪ್‌ಸೆಟ್‌ಗಳಿಗೆ ಸಹಾಯಧನ, ತುಂತುರು ನೀರಾವರಿ ವ್ಯವಸ್ಥೆ ಹಾಗೂ ಹೊಂಡದ ಸುತ್ತ ತಂತಿ ಬೇಲಿ ನಿರ್ಮಾಣಕ್ಕೆ ನೆರವು ನೀಡುತ್ತಿದೆ.
2025–26ನೇ ಸಾಲಿನಲ್ಲಿ ಈ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.80 ಹಾಗೂ ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡದ ರೈತರಿಗೆ ಶೇ.90 ರಷ್ಟು ರಿಯಾಯಿತಿ ದರದಲ್ಲಿ ಕೃಷಿ ಹೊಂಡ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಎಲ್ಲಾ ವರ್ಗದ ರೈತರಿಗೆ ತುಂತುರು ನೀರಾವರಿ ಘಟಕಗಳಿಗೆ ಶೇ.90 ರಷ್ಟು ಸಹಾಯಧನ ನೀಡಲಾಗುತ್ತಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಆಧಾರ್ ಸೇವಾ ಕೇಂದ್ರದಲ್ಲಿ ಜಾಬ್, ಅರ್ಜಿ ಆಹ್ವಾನ
ಈ ಅರ್ಹತೆ ಹೊಂದಿರುವುದು ಕಡ್ಡಾಯ:
* ಯೋಜನೆಯ ಪ್ರಯೋಜನ ಪಡೆಯಲು ಕನಿಷ್ಠ 1 ಎಕರೆ ಭೂಮಿ ಹೊಂದಿರಬೇಕು.
* ರೈತರ ಗುರುತಿನ ಸಂಖ್ಯೆ (FID) ಕಡ್ಡಾಯವಾಗಿದ್ದು, ಫಲಾನುಭವಿಗಳು ತಮ್ಮ ಹೆಸರಿನಲ್ಲಿ ಬ್ಯಾಂಕ್ ಖಾತೆ ಹೊಂದಿರಬೇಕು.
* ಕಳೆದ ಮೂರು ವರ್ಷಗಳಲ್ಲಿ ಪಂಪ್‌ಸೆಟ್ ಅಥವಾ ಹನಿ ನೀರಾವರಿ ವ್ಯವಸ್ಥೆಗೆ ಸಬ್ಸಿಡಿ ಪಡೆದವರು ಈ ಸೌಲಭ್ಯಕ್ಕೆ ಅರ್ಹರಾಗುವುದಿಲ್ಲ; ಆದರೆ ಕೃಷಿ ಹೊಂಡಕ್ಕೆ ಮಾತ್ರ ಅನ್ವಯವಾಗುತ್ತದೆ.
ಸೂಚನೆ: ಈ ಲೇಖನ ಕೇವಲ ಮಾಹಿತಿಗಾಗಿ. ಈ ಯೋಜನೆಯ ಅರ್ಜಿ ಅಥವಾ ಇನ್ಯಾವುದೇ ಮಾಹಿತಿಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬೇಕು.

Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (Krushi Bhagya Benefits:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
- ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ
- ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆ
- ಹೊಸ ವರ್ಷವನ್ನು ವಿಶಿಷ್ಟ ಡೂಡಲ್ ಮೂಲಕ ಸ್ವಾಗತಿಸಿದ ಗೂಗಲ್





