KSCCF Recruitment 2026: ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟದಲ್ಲಿ ನೇಮಕಾತಿ
ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ಲಿಮಿಟೆಡ್ ಕ್ಲರ್ಕ್, ಸೇಲ್ಸ್ ಅಸಿಸ್ಟೆಂಟ್, ಫಾರ್ಮಸಿಸ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 34 ಹುದ್ದೆಗಳಿದ್ದು, ಆಯ್ಕೆಯಾದವರಿಗೆ 21,400- 52,650 ರೂ.ಆಕರ್ಷಕ ವೇತನ ಸಿಗಲಿದೆ. ವಯೋಮಿತಿ ಸಡಿಲಿಕೆಯೂ ಲಭ್ಯ.
ಇದನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ
ನಿರುದ್ಯೋಗಿಗಳಿಗೆ ಕರ್ನಾಟಕದ ಸರ್ಕಾರಿ ವಲಯದಲ್ಲಿ ಉನ್ನತ ವೃತ್ತಿಜೀವನವನ್ನು ಹುಡುಕಿ ಬಯಸುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ. ಕ್ಲರ್ಕ್, ಸೇಲ್ಸ್ ಅಸಿಸ್ಟೆಂಟ್ ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನ ಭರ್ತಿ ಮಾಡುವ ನಿಟ್ಟಿನಲ್ಲಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಯೋಮಿತಿಯ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ವಯಸ್ಸಿನವರಾಗಿರಬೇಕು.2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ, SC/ST ಹಾಗೂ ಪ್ರವರ್ಗ–1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ, ಪಿಡಬ್ಲ್ಯೂಡಿ ಹಾಗೂ ವಿಧವೆ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಡೆಯಲಿದ್ದು ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ಸಂದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.
ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಮುಖ್ಯವಾಗಿ ಎಲ್ಲಾ ದಾಖಲೆಗಳಾದ ಇಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಬೇಕು. ಗುರುತಿನ ಚೀಟಿ, ವಯಸ್ಸಿನ ಪ್ರಮಾಣಪತ್ರ, ಶೈಕ್ಷಣಿಕ ಅರ್ಹತೆ, ರೆಸ್ಯೂಮ್ ಮತ್ತು ಅನುಭವ ಪ್ರಮಾಣಪತ್ರಗಳಿದ್ದಲ್ಲಿ ಅವುಗಳನ್ನು ಸ್ಕ್ಯಾನ್ ಮಾಡಿರಬೇಕು.
ಇದನ್ನೂ ಓದಿ: ಆಧಾರ್ ಸೇವಾ ಕೇಂದ್ರದಲ್ಲಿ ಜಾಬ್, ಅರ್ಜಿ ಆಹ್ವಾನ
ಕರ್ನಾಟಕದಲ್ಲಿ ಸರ್ಕಾರಿ ವಲಯದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು,ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಗೆ ಫೆಬ್ರವರಿ 07ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. SC/ST/ಪ್ರವರ್ಗ–I ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 500 ರೂ.ಇದ್ದು, ಇತರ ಎಲ್ಲಾ ಅಭ್ಯರ್ಥಿಗಳಿಗೆ 1000 ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (KSCCF Recruitment 2026:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
- ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ
- ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆ
- ಹೊಸ ವರ್ಷವನ್ನು ವಿಶಿಷ್ಟ ಡೂಡಲ್ ಮೂಲಕ ಸ್ವಾಗತಿಸಿದ ಗೂಗಲ್





