KSRTC BUS: KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್

(KSRTC BUS) KSRTC ಬಸ್ಸಿನಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ ಒಂದು ಸಿಕ್ಕಿದೆ.


ಇದನ್ನೂ ಓದಿ;  ಗ್ರಾಪಂ ನೌಕರರ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!


ಹೌದು, ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ, ಇದೀಗ ಪ್ರಯಾಣಿಕರ ಬೇಡಿಕೆಯಂತೆ KSRTC ಯಲ್ಲಿ ಯುಪಿಐ ಮೂಲಕ ಹಣ ಪೇ ಮಾಡಿ ಟಿಕೆಟ್ ಪಡೆದುಕೊಳ್ಳುವ ಅವಕಾಶವನ್ನು ಕಲ್ಪಿಸಿದೆ.


ಇದನ್ನೂ ಓದಿ; ಬ್ಯಾಂಕ್‌ ನಲ್ಲಿ ಸಾಲ ಮಾಡಿರುವವರಿಗೆ ಸಿಹಿಸುದ್ದಿ; ಕೇಂದ್ರ ಹಣಕಾಸು ಸಚಿವೆಯಿಂದ ಮಹತ್ವದ ಸೂಚನೆ


ಪ್ರಯಾಣಿಕರ ಬಹುದಿನಗಳ ಬೇಡಿಕೆಯಂತೆ ಇದೀಗ KSRTC ಸಂಸ್ಥೆಯು ಒಂದು ಹೆಜ್ಜೆ ಮುಂದೆ ಇಟ್ಟಿದ್ದು, ದುಡ್ಡು ಕೊಟ್ಟು ಚಿಲ್ಲರೆ ವಿಚಾರವಾಗಿ ಕಂಡಕ್ಟರ್ ಜೊತೆಗೆ ಸಣ್ಣಪುಟ್ಟ ಕಿರಿಕ್ ಆಗುತ್ತಿದ್ದವು. ಆದರೆ ಇದೀಗ ಆ ಚಿಂತೆ ಬಿಟ್ಟುಬಿಡಿ. ಡೈನಮಿಕ್ ಕ್ಯೂಆರ್ ಕೋಡ್ ಮೂಲಕ ಹಣ ಪಾವತಿ ಮಾಡಬಹುದಾಗಿದೆ. ರಾಜ್ಯದ 8800 ಬಸ್ ಗಳಲ್ಲಿ ಯುಪಿಐ ಮೂಲಕ ಹಣ ಪಾವತಿಸಬಹುದಾಗಿದೆ.


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಭರ್ಜರಿ ಸುದ್ದಿ; ಡ್ರೈವಿಂಗ್ ಸೇರಿ ವಿವಿಧ ತರಬೇತಿಗೆ ಅರ್ಜಿ ಆಹ್ವಾನ!


ಆನ್ಲೈನ್ ಹಣ ಸಂದಾಯ ಮಾಡುವ ಆಪ್ ಗಳಾದ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಹಾಗೂ ಭೀಮ್ ಆಪ್ ಮೂಲಕ ಹಣ ಪಾವತಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಎಟಿಎಂ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ಗಳಲ್ಲೂ ಹಣ ಸ್ವೀಕರಿಸಲಾಗುತ್ತದೆ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.

KSRTC BUS: KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್
KSRTC BUS: KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್

ಇದನ್ನೂ ಓದಿ; ರೇಷನ್ ಕಾರ್ಡ್ ಪಡೆಯಲು ಇರುವ ಮಾನದಂಡಗಳೇನು?; ಇಲ್ಲಿದೆ ನೋಡಿ ಮಾಹಿತಿ


ಇತ್ತೀಚಿನ ಜನಪ್ರಿಯ ಸುದ್ದಿಗಳು