ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಮಾರ್ಗಮಧ್ಯದಲ್ಲಿಯೇ ಬಸ್ಸಿನ ಮಹಿಳಾ ನಿರ್ವಾಹಕಿಯು ಸದರಿ ಮಹಿಳೆಗೆ ಹೆರಿಗೆ ಮಾಡಿಸಿದ್ದು, ಮಗು ಮತ್ತು ಮಹಿಳೆ ಆರೋಗ್ಯವಾಗಿರುತ್ತಾರೆ.
ಇದನ್ನೂ ಓದಿ; ಹಣಕ್ಕಾಗಿ ಯುವತಿಯ ಕಿಡ್ನ್ಯಾಪ್
ಇದನ್ನೂ ಓದಿ; ಅನಾಥ ಶವದ ಪಕ್ಕದಲ್ಲಿದ್ದ ಬ್ಯಾಗಿನಲ್ಲಿ 6.65 ಲಕ್ಷ ಪತ್ತೆ
ಬೆಂಗಳೂರಿನಿಂದ ಬೇಲೂರಿಗೆ ಪ್ರಯಾಣಿಸುತ್ತಿದ್ದ ಓರ್ವ ಗರ್ಭಿಣಿ ಮಹಿಳೆಗೆ ಉದಯಪುರ ಸಮೀಪವಿರುವ ಕೃಷಿ ಕಾಲೇಜು ಹತ್ತಿರ ಮಧ್ಯಾಹ್ನ 1.35 ರ ಸಮಯದಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದ್ದು ಹತ್ತಿರ ಯಾವುದೇ ಆಸ್ಪತ್ರೆ ಇರಲಿಲ್ಲ. ಆ ಸಂದರ್ಭದಲ್ಲಿ ಗರ್ಭಿಣಿ ಮಹಿಳೆಯ ಪರಿಸ್ಥಿತಿ ಅರಿತ ಮಹಿಳಾ ನಿರ್ವಾಹಕಿ ಎಸ್.ವಸಂತಮ್ಮ ಬಸ್ಸನ್ನು ನಿಲ್ಲಿಸಲು ಚಾಲಕರಿಗೆ ತಿಳಿಸಿದರು. ಬಳಿಕ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರನ್ನು ಕೆಳಗೆ ಇಳಿಸಿ ಬಸ್ಸಿನಲ್ಲಿಯೇ ಹೆರಿಗೆಯನ್ನು ಮಾಡಿಸಿರುತ್ತಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಉದ್ಯಮಿ ಕೃತ್ಯದ ವಿರುದ್ಧ ಮಹಿಳೆಯಿಂದ ದೂರು
- ಸಿ. ಟಿ ರವಿ ಸೋಲನ್ನು ಸಂಭ್ರಮಿಸುವ ರೀತಿ ವ್ಯಂಗ್ಯವಾಡಿದ ಎಂ ಪಿ ಕುಮಾರಸ್ವಾಮಿ
- ಬಿಜೆಪಿಗೆ ಮತ ಹಾಕಿದ್ದಕ್ಕೆ ಅನ್ಯಕೋಮಿಗಳಿಂದ ಆಟೋ ಚಾಲಕನ ಮೇಲೆ ಹಲ್ಲೆ
ಮಹಿಳೆಯು ಆರ್ಥಿಕವಾಗಿ ದುರ್ಬಲಳಾಗಿದ್ದ ಕಾರಣ ನಿಗಮದ ಚಾಲನಾ ಸಿಬ್ಬಂದಿಗಳು ಮಹಿಳೆಯ ತುರ್ತು ಖರ್ಚಿಗಾಗಿ ಎಲ್ಲಾ ಪ್ರಯಾಣಿಕರಿಂದ ಒಟ್ಟು ರೂ.1500 ಗಳನ್ನು ಸಂಗ್ರಹಿಸಿ ಮಹಿಳೆಗೆ ನೀಡಿರುತ್ತಾರೆ. ನಂತರ ಮಹಿಳೆಯನ್ನು ಅಂಬುಲೆನ್ಸ್ ಮೂಲಕ ಶಾಂತಿಗ್ರಾಮ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಯನ್ನು ಸಹಕರಿಸಿದ್ದರು. ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ಕೆ.ಎಸ್.ಆರ್.ಟಿ.ಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ; ಕಾರ್ಮಿಕನ ಮೇಲೆ ಕಾಡಾನೆ ದಾಳಿ; ಗಂಭೀರ ಗಾಯ
ಸಕಾಲದಲ್ಲಿ ಮಹಿಳಾ ಪ್ರಯಾಣಿಕರಿಗೆ ಸ್ಪಂದಿಸಿ ಮಗು ಮತ್ತು ತಾಯಿಯನ್ನು ಉಳಿಸಿ ಮಾನವೀಯ ನೆರವನ್ನು ನೀಡಿದ ನಿರ್ವಾಹಕಿಯವರ ಕಾರ್ಯವು ನಿಜಕ್ಕೂ ಶ್ಲಾಘನೀಯವಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಜಿ.ಸತ್ಯವತಿ ರವರು ಅಭಿನಂದಿಸಿದರು.
ಇದನ್ನೂ ಓದಿ; ಜ್ಯೋತಿಷಿ ಮಾತು ಕೇಳಿ ಯುವಕನ ಕೈ-ಕಾಲು ಕತ್ತರಿಸಿದ್ದ ಚಿಕ್ಕಪ್ಪ?