(Land Documents:) ಗ್ರಾಮೀಣ ಭಾಗದ ಜನತೆಗೆ ರಾಜ್ಯ ಸರ್ಕಾರ ಮಹತ್ವದ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಇನ್ನು ಮುಂದೆ ಕೃಷಿ ಭೂಮಿಯಲ್ಲಿ ನಿರ್ಮಿಸಲಾದ ಮನೆಗಳಿಗೂ ಅಧಿಕೃತ ದಾಖಲೆ ನೀಡಲು ಹಾದಿ ಸುಗಮಗೊಳಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಈ ಕುಟುಂಬಗಳಿಗೆ ಎಲ್ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ
ಮಂಗಳವಾರ ನಡೆದ ವಿಧಾನಪರಿಷತ್ ಕಲಾಪದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಮಂಡಿಸಿದ ಸೂಚನೆಗೆ ಉತ್ತರಿಸಿದ ಸಚಿವರು ಈ ವಿಷಯವನ್ನು ಪ್ರಕಟಿಸಿದರು. ಕರ್ನಾಟಕ ಸರ್ಕಾರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಈ ಐತಿಹಾಸಿಕ ಕ್ರಮ ಕೈಗೊಂಡಿದೆ.
ಗ್ರಾಮೀಣ ವಸತಿ ಯೋಜನೆಗಳಡಿ ತಮ್ಮದೇ ಕೃಷಿ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಇ-ಸ್ವತ್ತು ಪಡೆಯಲು ಇದ್ದ ತಾಂತ್ರಿಕ ಅಡಚಣೆಗಳನ್ನು ಸಂಪೂರ್ಣವಾಗಿ ನಿವಾರಿಸಲಾಗಿದೆ. 2025ರ ಏಪ್ರಿಲ್ 7ಕ್ಕಿಂತ ಮೊದಲು ಕೃಷಿ ಭೂಮಿಯಲ್ಲಿ ನಿರ್ಮಿಸಲಾದ ಕಟ್ಟಡಗಳಿಗೆ ಈ ಸೌಲಭ್ಯ ಅನ್ವಯವಾಗಲಿದೆ.
ಇದನ್ನೂ ಓದಿ: LPG ಗ್ರಾಹಕರಿಗೆ ಮಹತ್ವದ ಸೂಚನೆ; ಆಧಾರ್ ಇ ಕೆವೈಸಿ ಮಾಡದಿದ್ರೆ ಸಿಗಲ್ಲ ಸಿಲಿಂಡರ್ !
ನಮೂನೆ 11ಬಿ ಲಭ್ಯ:
ಗ್ರಾಮ ಪಂಚಾಯಿತಿಗಳ ತೆರಿಗೆ ದರ ಮತ್ತು ಶುಲ್ಕಗಳ ನಿಯಮದನ್ವಯ ಸಾರ್ವಜನಿಕರು ಈಗ ‘ನಮೂನೆ 11 ಬಿ’ ದಾಖಲೆಯನ್ನು ಅಧಿಕೃತವಾಗಿ ಪಡೆಯಬಹುದಾಗಿದೆ. ಈ ತಿದ್ದುಪಡಿಯಿಂದ ಕೃಷಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡಿರುವ ಸಾವಿರಾರು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಕಾನೂನುಬದ್ಧ ದಾಖಲೆ ಸಿಗಲಿದ್ದು, ಆಸ್ತಿ ಹಕ್ಕು ಭದ್ರವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ಲೇಸ್ಟೋರ್‌ನಲ್ಲಿ ಸೌಂಡ್ ಮಾಡ್ತಿದೆ LPG ಬುಕಿಂಗ್ ಆ್ಯಪ್; ಚ್ಯಾಟ್ ಜಿಪಿಟಿ, ಫ್ಲಿಪ್‌ಕಾರ್ಟ್ ಹಿಂದಿಕ್ಕಿ ಹೊಸ ದಾಖಲೆ!
ಇತ್ತೀಚಿನ ಜನಪ್ರಿಯ ಸುದ್ದಿಗಳು (Land Documents:)
-
- ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
- ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
- ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
- ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
- ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್
- ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
- ಯುವಕರಿಗೆ ʼಗ್ರಾಮ ಒನ್ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
- ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
- 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
- ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿ ಆಹ್ವಾನ






Leave a Reply