(Land NM:) ರೈತರಿಗೆ ಕಾಂಗ್ರೆಸ್ ಸರ್ಕಾರ ನೀಡಿದ ನನ್ನ ಭೂಮಿ ಗ್ಯಾರಂಟಿ ಅಭಿಯಾನ ವೇಗ ಪಡೆದುಕೊಂಡಿದ್ದು, ಕೇವಲ 7 ತಿಂಗಳಲ್ಲಿ 1,04,222 ಜಮೀನುಗಳನ್ನು ಅಳತೆಗೆ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.
ಇದನ್ನೂ ಓದಿ: IBPS PO ನಲ್ಲಿ 5208 ಹುದ್ದೆಗಳ ನೇಮಕ; ಆಕರ್ಷಕ ಸಂಬಳ
ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಮೂರು ವರ್ಷಕ್ಕೆ ಕೇವಲ 5,801 ಪ್ರಕರಣಗಳಲ್ಲಿ ಮಾತ್ರ ರೈತರಿಗೆ ಪೋಡಿ ದುರಸ್ಥಿ ಮಾಡಿಕೊಡಲಾಗಿತ್ತು. ಆದರೆ, ಪ್ರಸ್ತುತ ಕಳೆದ ಡಿಸೆಂಬರ್ ನಲ್ಲಿ ನನ್ನ ಭೂಮಿ ಹೆಸರಿನಲ್ಲಿ ಪೋಡಿ ಅಭಿಯಾನ ಕೈಗೊಂಡಿದ್ದು, ಕೇವಲ 7 ತಿಂಗಳಲ್ಲಿ 1,04,222 ಜಮೀನುಗಳನ್ನು ಅಳತೆಗೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ಮರ ಕಡಿಯಲು ನಿಯಮ ಸರಳೀಕರಣ
(Land NM:) ಈವರೆಗೆ 1,04,222 ಜಮೀನುಗಳನ್ನು ಅಳತೆಗೆ ತೆಗೆದುಕೊಂಡಿದ್ದು, ಈ ಪೈಕಿ ಶೇ.20 ರಷ್ಟು ಭೂಮಿಯ ಅಳತೆ ಕೆಲಸವೂ ಮುಗಿದಿದೆ. ಉಳಿದ ಪ್ರಕರಣಗಳನ್ನು ಮುಂದಿನ 6 ತಿಂಗಳಲ್ಲಿ ಪೋಡಿ ಮಾಡಿಕೊಡಲು ಸೂಚಿಸಲಾಗಿದೆ. ಇದಲ್ಲದೆ, ಇನ್ನೂ 50 ರಿಂದ 70 ಸಾವಿರ ಪೋಡಿ ಪ್ರಕರಣಗಳು ದಾಖಲಾಗುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ PDO ಗಳಿಗೆ ಭರ್ಜರಿ ಗುಡ್ ನ್ಯೂಸ್; ವಿಶೇಷ ಮುಂಬಡ್ತಿ ಮಂಜೂರು ಮಾಡಿ ಆದೇಶ
ಮೂರು-ನಾಲ್ಕು ದಶಕಗಳ ಹಿಂದೆ ರೈತರಿಗೆ ದರ್ಖಾಸ್ತಿನಲ್ಲಿ ಮಂಜೂರಾಗಿದ್ದ ಜಮೀನಿಗೆ ಈವರೆಗೆ ಪೋಡಿ ಆಗಿಲ್ಲ. ಇದರಿಂದ ರೈತರು ಸಾಕಷ್ಟು ಸಮಸ್ಯೆ ಎದುರಿಸಿದ್ದರು. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ಸಲುವಾಗಿಯೇ ನನ್ನ ಭೂಮಿ ಹೆಸರಿನಲ್ಲಿ ಪೋಡಿ ಅಭಿಯಾನ ಆರಂಭಿಸಲಾಯಿತು. ಈ ಅಭಿಯಾನದ ಅಡಿ ಜನರ ಅರ್ಜಿಗೆ ಕಾಯದೆ ಸರ್ಕಾರವೇ ರೈತರ ಮನೆ ಬಾಗಿಲಿಗೆ ತೆರಳಿ ಪೋಡಿ ಮಾಡಿಕೊಡುತ್ತಿದೆ. ಹಿಂದೆ ಮಂಜೂರಾಗಿದ್ದ ಜಮೀನಿಗೆ ಪಕ್ಕಾ ದಾಖಲೆಗಳನ್ನು ಅವರ ಕೈಗೆ ಕೊಟ್ಟು ಅವರ ಭೂ ಮಾಲೀಕತ್ವಕ್ಕೆ ಗ್ಯಾರಂಟಿ ನೀಡುವುದು ಈ ಕಾರ್ಯಕ್ರಮದ ವಿಶೇಷ ಎಂದು ವಿವರಿಸಿದರು.

ಇತ್ತೀಚಿನ ಜನಪ್ರಿಯ ಸುದ್ದಿಗಳು (Land NM:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





