Land records; ಇನ್ಮುಂದೆ ಮೊಬೈಲ್‌ ನಲ್ಲೇ ಸಿಗಲಿದೆ ಹಳೆಯ ಪಹಣಿ

(Land records;) ಕಂದಾಯ ಇಲಾಖೆಯು ಭೂ ಸುರಕ್ಷಾ ಎಂಬ ವಿನೂತನ ಯೋಜನೆಯನ್ನು ಜಾರಿಗೆ ತಂದಿದ್ದು, ಜಮೀನಿಗೆ ಸಂಬಂಧಪಟ್ಟ ಎಲ್ಲಾ ಹಳೆಯ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿದೆ. ಈ ಹಿಂದೆ ಕೃಷಿಕರು ತಮ್ಮ ಜಮೀನಿನ ಹಳೆಯ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಿ, ಕಂದಾಯ ಇಲಾಖೆಯಿಂದ ದಾಖಲೆ ಕೈಸೇರುವವರೆಗೆ ಕಚೇರಿಗೆ ಅಲೆದಾಡಬೇಕಿತ್ತು.


ಇದನ್ನೂ ಓದಿ: ಬಿಪಿಎಲ್ ಕಾರ್ಡುದಾರರಿಗೆ ಬಜೆಟ್‌ನಲ್ಲಿ ಮಹತ್ವದ ಘೋಷಣೆ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇದರಿಂದ ರೈತರಿಗೆ ಸಮಯ ಹಾಗೂ ಹಣದ ವ್ಯಯವಾಗುತ್ತಿತ್ತು. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಜಾರಿಯಾಗಿರುವುದೇ ಭೂ ಸುರಕ್ಷಾ ಯೋಜನೆ. ಈ ಯೋಜನೆಯಡಿ ಜಮೀನಿನ ಎಲ್ಲಾ ಹಳೆಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ರೂಪದಲ್ಲಿ ಸುರಕ್ಷಿತವಾಗಿ ಸಂಗ್ರಹಿಸಲಾಗಿದೆ.

ಕಚೇರಿಗೆ ಭೇಟಿ ನೀಡಲು ಸಾಧ್ಯವಾಗದ ರೈತರು ತಮ್ಮ ಸ್ಮಾರ್ಟ್‌ಫೋನ್ ಮೂಲಕವೇ ಕಂದಾಯ ಇಲಾಖೆಯ ‘ರೆಕಾರ್ಡ್ ರೂಂ’ ವೆಬ್‌ಸೈಟ್‌ಗೆ ಭೇಟಿ ನೀಡಿ, ದಾಖಲೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ನಿಗದಿತ ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಿ ಕ್ಷಣಾರ್ಧದಲ್ಲಿ ದಾಖಲೆಗಳನ್ನು ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ.


ಇದನ್ನೂ ಓದಿ: ಅಡಿಕೆ ಬೆಳೆಗಾರರಿಗೆ ಬಜೆಟ್​ನಲ್ಲಿ ಶುಭ ಸುದ್ದಿ; ಎಲೆ ಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ 10 ಕೋಟಿ ರೂ.


ಕಂದಾಯ ಇಲಾಖೆಯ ಅಧಿಕೃತ ಲಿಂಕ್ https://recordroom.karnataka.gov.in/service4 ಮೇಲೆ ಕ್ಲಿಕ್ ಮಾಡಿ ರೆಕಾರ್ಡ್ ರೂಂ ತಂತ್ರಾಂಶವನ್ನು ಪ್ರವೇಶಿಸಿ. ದಾಖಲೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

Land records; ಇನ್ಮುಂದೆ ಮೊಬೈಲ್‌ ನಲ್ಲೇ ಸಿಗಲಿದೆ ಹಳೆಯ ಪಹಣಿ
Land records; ಇನ್ಮುಂದೆ ಮೊಬೈಲ್‌ ನಲ್ಲೇ ಸಿಗಲಿದೆ ಹಳೆಯ ಪಹಣಿ

ಇತ್ತೀಚಿನ ಜನಪ್ರಿಯ ಸುದ್ದಿಗಳು (Land records;)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ