Sunday, September 24, 2023
Homeಮಲೆನಾಡುಚಿಕ್ಕಮಗಳೂರುಚಿಕ್ಕಮಗಳೂರು; ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ "ಶಾಸಕ ಸಿಟಿ ರವಿ"

ಚಿಕ್ಕಮಗಳೂರು; ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ “ಶಾಸಕ ಸಿಟಿ ರವಿ”

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದರು. ನಾಮಪತ್ರಿಕೆ ಸಲ್ಲಿಕೆ ವೇಳೆ 3000 ಅಧಿಕ ಕಾರ್ಯಕರ್ತರು ಭಾಗಿಯಾಗಿದ್ದರು. ಕಾಮಧೇನು ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹೊರಟ ಸಿ.ಟಿ.ರವಿ ನಂತರ ಸ್ವಗ್ರಾಮ ಚಿಕ್ಕಮಾಗವಳ್ಳಿ ಗ್ರಾಮದಲ್ಲೂ ಗ್ರಾಮದೇವತೆಗೆ ಪೂಜೆ ಸಲ್ಲಿಸಿದರು.

ಇದನ್ನೂ ಓದಿ; ವಿವಿಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಮನೆ ಕಳ್ಳತನದ ಆರೋಪಿ ಬಂಧನ

ಇದನ್ನೂ ಓದಿ; ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ

ರಸ್ತೆಯುದ್ಧಕ್ಕೂ ಸಿ.ಟಿ.ರವಿಗೆ ಹಾರ ಹಾಕಿ ಶುಭಕೋರಿದರು ಇನ್ನೊಂದೆಡೆ ಮುಂದಿನ ಮುಖ್ಯಮಂತ್ರಿ ಸಿ.ಟಿ. ರವಿ ಎಂದು ಘೋಷಣೆ ಕೂಡ ಕೂಗಿದ್ದರು. ಇನ್ನು ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದವನ್ನು ಪಡೆದುಕೊಂಡರು ಸಿ.ಟಿ.ರವಿ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ನಾಮಪತ್ರ ಸಲ್ಲಿಕೆಯ ವೇಳೆ ಸಿ.ಟಿ. ರವಿಗೆ ಪತ್ನಿ ಪಲ್ಲವಿ, ಸಫಾಯಿ ಕರ್ಮಚಾರಿ ನಿಗಮ ಮಂಡಳಿ ಅಧ್ಯಕ್ಷ ವೆಂಕಟೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ, ತಾಪಂ ಮಾಜಿ ಅಧ್ಯಕ್ಷ ಈಶ್ವರಹಳ್ಳಿ ಮಹೇಶ್ ಜೊತೆ ಬಂದು ಚುನಾವಣಾ ಅಧಿಕಾರಿ ಕಿಶೋರ್ ಕುಮಾರ್ ಗೆ ನಾಮಪತ್ರ ಸಲ್ಲಿಕೆ ಮಾಡಿದರು.

ಬಾಳೆಬರೆ ಘಾಟಿ; ವಾಹನ ಸಂಚಾರ ಆರಂಭ

ಶಿವಮೊಗ್ಗ: ಕರಾವಳಿ ಹಾಗೂ ಮಲೆನಾಡನ್ನು ಬೆಸೆಯುವ ಬಾಳೆಬರೆ (ಹುಲಿಕಲ್‌) ಘಾಟಿಯ ಕಾಂಕ್ರಿಟೀಕರಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಶನಿವಾರ ರಾತ್ರಿಯಿಂದ ವಾಹನ ಸಂಚಾರ ಮತ್ತೆ ಆರಂಭಗೊಂಡಿದೆ.

ಇದನ್ನೂ ಓದಿ; ಶಾಸಕ ಸಿ. ಟಿ ರವಿ ಆಸ್ಪತ್ರೆಗೆ ದಾಖಲು.. ಪತ್ನಿ ಪಲ್ಲವಿ ಸಿಟಿ ರವಿ ಕಣ್ಣೀರು!

ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ, ಚರಂಡಿ ಮತ್ತಿತರ ಕಾಮಗಾರಿಗಳಾಗಿ ಫೆ.5ರಿಂದ ಎ. 5ರ ವರೆಗೆ ಈ ಘಾಟಿಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಆ ಬಳಿಕ ಎ. 5ರಂದು ಕಾಮಗಾರಿ ಪೂರ್ಣಗೊಳ್ಳದ ಕಾರಣ ಮತ್ತೆ 10 ದಿನಗಳ ವರೆಗೆ ಸಂಚಾರ ನಿಷೇಧಿಸಲಾಗಿತ್ತು. ಈಗ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

3.5 ಕಿ.ಮೀ. ಕಾಮಗಾರಿ:

ಕುಂದಾಪುರ – ತೀರ್ಥಹಳ್ಳಿ ರಾಜ್ಯ ಹೆದ್ದಾರಿ ಹಾದುಹೋಗುವ ಬಾಳೆಬರೆ ಘಾಟಿಯ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ 3 ಕೋಟಿ.ರೂ. ವೆಚ್ಚದಲ್ಲಿ ಅಂದಾಜು 1 ಕಿ.ಮೀ. ಹಾಗೂ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ 10 ಕೋಟಿ.ರೂ. ವೆಚ್ಚದಲ್ಲಿ 2.5 ಕಿ.ಮೀ. ಸೇರಿದಂತೆ ಒಟ್ಟು 3.5 ಕಿ.ಮೀ. ದೂರದವರೆಗೆ ರಸ್ತೆ ಅಗಲ, ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ ನಿರ್ಮಾಣ ಕಾರ್ಯ ನಡೆದಿದೆ.

3.5 ಕಿ.ಮೀ. ಅಭಿವೃದ್ಧಿ ಬಾಕಿ:
ಬಾಳೆಬರೆ ಘಾಟಿಯು ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆ ಸೇರಿ ಹುಲಿಕಲ್‌ ಚೆಕ್‌ ಪೋಸ್ಟ್‌ನಿಂದ ಹೊಸಂಗಡಿಯ ಘಾಟಿಯ ಬುಡದ ವರೆಗೆ 14.5 ಕಿ.ಮೀ. ದೂರವಿದೆ. ಶಿವಮೊಗ್ಗ ಜಿಲ್ಲೆಯ 8 ಕಿ.ಮೀ. ಪೈಕಿ ಈ ಹಿಂದೆ ಸ್ವಲ್ಪ ಕಾಂಕ್ರಿಟೀಕರಣ ಆಗಿದ್ದು, ಈಗ ಬಾಕಿಯಿದ್ದ 2.5 ಕಿ.ಮೀ.ನೊಂದಿಗೆ ಕಾಂಕ್ರಿಟೀಕರಣಗೊಂಡಿದೆ. ಉಡುಪಿ ಜಿಲ್ಲೆಯ 6.5 ಕಿ.ಮೀ. ಘಾಟಿಯ ಪೈಕಿ ಈ ಹಿಂದೆ 2 ಕಿ.ಮೀ., ಈಗ 1 ಕಿ.ಮೀ. ಸೇರಿದಂತೆ ಒಟ್ಟು 3 ಕಿ.ಮೀ. ಕಾಂಕ್ರಿಟೀಕರಣಗೊಂಡಂತಾಗಿದೆ. ಇನ್ನು ಜಿಲ್ಲೆಯ ವ್ಯಾಪ್ತಿಯಲ್ಲಿ 3.5 ಕಿ.ಮೀ. ಘಾಟಿ ರಸ್ತೆ ಕಾಂಕ್ರಿಟೀಕರಣ ಬಾಕಿ ಇದೆ.

ಇದನ್ನೂ ಓದಿ; ಒಳಮೀಸಲಾತಿ ಕಿಚ್ಚು: ತರ್ಲಘಟ್ಟ ತಾಂಡಾದಲ್ಲಿ ವಿಜಯೇಂದ್ರಗೆ ಪ್ರತಿಭಟನೆಯ ಸ್ವಾಗತ

Most Popular

Recent Comments