(Lawyers) ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಕೀಲರ ನೇಮಕಾತಿ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಏನದು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿಸುದ್ದಿ; ಈ ದಿನ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ!
ಆದೇಶದಲ್ಲಿ ಏನಿದೆ?;
ಕ್ರಮ ಸಂಖ್ಯೆ (1)ರ ಪತ್ರದಲ್ಲಿ ಸಮಾಜ ಕಲ್ಯಾಣ ಇಲಾಖೆ ಇವರು ಮಾನ್ಯ ಸಮಾಜ ಕಲ್ಯಾಣ ಸಚಿವರ ಅಧ್ಯಕ್ಷತೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮತ್ತು ನಿಗಮಗಳ ಅಧಿಕಾರಿಗಳೊಂದಿಗೆ ದಿನಾಂಕ:01-06-2023 ರಂದು ಜರುಗಿದ ಸಭೆಯಲ್ಲಿ, ಸರ್ಕಾರಿ ವಕೀಲರನ್ನು ನೇಮಿಸುವಾಗ ಕನಿಷ್ಠ 24% ರಷ್ಟು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಕೀಲರನ್ನು ನೇಮಿಸಿಕೊಳ್ಳಲು ಕಾನೂನು ಇಲಾಖೆಗೆ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಿದ್ದು, ಸಭಾ ನಡವಳಿಯಲ್ಲಿ ಕ್ರಮವಹಿಸಲು ನಿರ್ದೇಶನವಿರುತ್ತದೆ. ಅದರಂತೆ, ಸರ್ಕಾರಿ ವಕೀಲರನ್ನು ನೇಮಿಸುವ ಸಂದರ್ಭದಲ್ಲಿ ಕನಿಷ್ಠ 24% ರಷ್ಟು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಕೀಲರನ್ನು ನೇಮಿಸುವಂತೆ ಶೇ.24 ರಷ್ಟು ಪರಿಶಿಷ್ಟ ಜಾತಿ/ ಪಂಗಡದವರಿಗೆ ಪ್ರಾತಿನಿಧ್ಯತೆ ನೀಡಬಹುದೆಂಬ ಅಭಿಪ್ರಾಯದೊಂದಿಗೆ ಪ್ರಸ್ತಾವನೆಯನ್ನು ಕಾನೂನು ಇಲಾಖೆಗೆ ಕಳುಹಿಸಲು ಸೂಕ್ತ ಆದೇಶವನ್ನು ಹೊರಡಿಸುವಂತೆ ಕೋರಿದ್ದಾರೆ.
ಇದನ್ನೂ ಓದಿ; ಯಜಮಾನಿಯರಿಗೆ ಗುಡ್ ನ್ಯೂಸ್; ಈ ದಿನ 2 ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!
ಕ್ರಮ ಸಂಖ್ಯೆ (2)ರ ಕಾನೂನು ಇಲಾಖೆಯ ಟಿಪ್ಪಣಿಯಲ್ಲಿ “ಕರ್ನಾಟಕ ರಾಜ್ಯಪತ್ರ ಸಂಖ್ಯೆ: ಸಂವ್ಯಶಾಇ 29 ಶಾಸನ 2022, ದಿನಾಂಕ:23.10.2022ರಲ್ಲಿ ಅಧ್ಯಾದೇಶಿಸಿದಂತೆ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಮೀಸಲಾತಿಯನ್ನು ಅನುಸೂಚಿತ ಜಾತಿಗಳಿಗೆ ಶೇಕಡ 17ರಷ್ಟು ಮತ್ತು ಅನುಸೂಚಿತ ಪಂಗಡಗಳಿಗೆ ಶೇಕಡ 7ರಷ್ಟು ಮೀಸಲಾತಿಯನ್ನು ಕಲ್ಪಿಸಲಾಗಿರುತ್ತದೆ. ಆ ಕಾರಣದಿಂದ ಸರ್ಕಾರಿ ವಕೀಲರನ್ನು ನೇಮಿಸುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅಧ್ಯಾದೇಶದಲ್ಲಿ ಹೇಳಿರುವಂತೆ ಒಟ್ಟು ಶೇಕಡ 24ರಷ್ಟು ಮೀಸಲಾತಿಯನ್ನು ಕಲ್ಪಿಸಬಹುದಾಗಿದೆ” ಎಂದು ಅಭಿಪ್ರಾಯ ನೀಡಿರುತ್ತಾರೆ.
ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
(Lawyers) ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರಿ ವಕೀಲರನ್ನು ನೇಮಿಸುವ ಸಂದರ್ಭದಲ್ಲಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಮೀಸಲಾತಿಯನ್ನು ಪರಿಶಿಷ್ಟ ಜಾತಿ ವಕೀಲರಿಗೆ ಶೇ.17% ಮತ್ತು ಪರಿಶಿಷ್ಟ ಪಂಗಡಗಳ ವಕೀಲರಿಗೆ ಶೇ.7% ಸೇರಿ ಒಟ್ಟು ಶೇ.24% ರಷ್ಟು ಮೀಸಲಾತಿಯನ್ನು ಕಲ್ಪಿಸಿ ಆದೇಶಿಸಿದೆ.

ಇದನ್ನೂ ಓದಿ; ಕೃಷಿ ಯಂತ್ರಗಳ ಖರೀದಿಗೆ ಭಾರೀ ಸಬ್ಸಿಡಿ; ಹೀಗೆ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






