(LED Bulb) ವಾಹನಗಳಲ್ಲಿ ಇತ್ತೀಚೆಗೆ ಬರುತ್ತಿರುವ ಎಲ್‌ಇಡಿ ಬಲ್ಪ್ ಗಳ ಅಳವಡಿಕೆಗೆ ಪೊಲೀಸ್ ಇಲಾಖೆ ಬ್ರೇಕ್ ಹಾಕಲು ಮುಂದಾಗಿದೆ. ಹೌದು, ರಾಜ್ಯದಲ್ಲಿ ವಾಹನಗಳಿಗೆ ಎಲ್‌ಇಡಿ ಬಲ್ಪ್ ಅಳವಡಿಸುವುದನ್ನು ನಿರ್ಬಂಧಿಸಲಾಗಿದೆ. ನಿಯಮ ಉಲ್ಲಂಸಿದರೆ ಜುಲೈಯಿಂದ ಕೇಸ್ ದಾಖಲಿಸುವುದಾಗಿ ಪೊಲೀಸ್ ಇಲಾಖೆ ಎಚ್ಚರಿಕೆ ಕೂಡ ನೀಡಿದೆ.
ಇದನ್ನೂ ಓದಿ: ರಾಜ್ಯದ ಈ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ!; ಅರ್ಜಿ ಸಲ್ಲಿಸುವುದು ಹೇಗೆ..? ಅರ್ಹತೆ ಏನು?
ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ಬಲ್ಪ್ ಗಳನ್ನು ಅಳವಡಿಸಿರುವುದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರ ವಾಹನ ಸವಾರ, ಚಾಲಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಹಾಗೂ ಇದರಿಂದ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿದೆ. ಈ ಪೈಕಿ ಪ್ರಮುಖವಾಗಿ ಭಾರಿ ಗಾತ್ರ ವಾಹನಗಳಾದ ಲಾರಿ, ಟ್ರಕ್, ಬಸ್ ಮುಂತಾದವುಗಳು ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್ ಇಡಿ ಬಲ್ಪ್ ಗಳನ್ನು ವಾಹನಗಳಲ್ಲಿ ಅಳವಡಿಸುತ್ತಿರುವುದರಿಂದ ಇತರೆ ವಾಹನ ಚಾಲಕರಿಗೆ ವಾಹನ ಚಲಾಯಿಸಲು ತೊಂದರೆಯಾಗುತ್ತಿದೆ. ಈ ಕಾರಣದಿಂದ ವಾಹನ ಮಾಲೀಕರು ಕಡ್ಡಾಯವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆಯಂತೆ ಮಾರ್ಗಸೂಚಿ ಪಾಲನೆ ಮಾಡಬೇಕು ಎಂದು ಸೂಚಿಸಿದ್ದಾರೆ.
ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದಿಂದ ಭರ್ಜರಿ ಗಿಫ್ಟ್; ನೂತನ ಕೇಂದ್ರ ಸಚಿವರಿಂದ ಬಂಪರ್ ಘೋಷಣೆ
ಇಲ್ಲವಾದರೆ ಚಾಲಕರ ವಿರುದ್ಧ ಐಎಂವಿ ಕಾಯ್ದೆಯ ಕಲಂ 177ರಡಿ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಜುಲೈನಿಂದ ಎಲ್ ಇಡಿ ಬಲ್ಸ್ ಅಳವಡಿಸಿರುವ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಜುಲೈ 31ಕ್ಕೆ ವರದಿ ಒಪ್ಪಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






