Sunday, October 1, 2023
Homeಮಲೆನಾಡುವಿದ್ಯುತ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

ವಿದ್ಯುತ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ವಿದ್ಯುತ್ ಕಂಬದ ಮೇಲೆ ಹತ್ತಿ ದುರಸ್ತಿ ನಡೆಸುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ ಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹಾಲಸ್ವಾಮಿ (26) ಮೃತ ಲೈನ್ ಮ್ಯಾನ್.

ಇದನ್ನೂ ಓದಿ; ವಿವಿಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಮನೆ ಕಳ್ಳತನದ ಆರೋಪಿ ಬಂಧನ

ಇದನ್ನೂ ಓದಿ; ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ

ಶಿವಮೊಗ್ಗದ ಆಟೋ ಕಾಂಪ್ಲೆಕ್ಸ್ ಬಳಿ ವಿದ್ಯುತ್ ಲೈನ್ ದುರಸ್ತಿ ಕಾರ್ಯ ನಡೆಯುತ್ತಿತ್ತು. ಲೈನ್ ಮ್ಯಾನ್ ಹಾಲಸ್ವಾಮಿ ಅವರು ಕಂಬದ ಮೇಲೆ ಹತ್ತಿ ರಿಪೇರಿ ಕೆಲಸ ಮಾಡುತ್ತಿದ್ದರು. ಈ ವೇಳೆ ವಿದ್ಯುತ್ ಪ್ರವಹಿಸಿದ ಪರಿಣಾಮ ಹಾಲಸ್ವಾಮಿ ಅವರು ಕಂಬದಿಂದ ಕೆಳಗೆ ಬಿದ್ದಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಗಂಭೀರ ಗಾಯಗೊಂಡಿದ್ದ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸುವ ವೇಳೆ ಮೃತಪಟ್ಟಿದ್ದರು.

ಬಾಳೆಬರೆ ಘಾಟಿ; ವಾಹನ ಸಂಚಾರ ಆರಂಭ

ಶಿವಮೊಗ್ಗ: ಕರಾವಳಿ ಹಾಗೂ ಮಲೆನಾಡನ್ನು ಬೆಸೆಯುವ ಬಾಳೆಬರೆ (ಹುಲಿಕಲ್‌) ಘಾಟಿಯ ಕಾಂಕ್ರಿಟೀಕರಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಶನಿವಾರ ರಾತ್ರಿಯಿಂದ ವಾಹನ ಸಂಚಾರ ಮತ್ತೆ ಆರಂಭಗೊಂಡಿದೆ.

ಇದನ್ನೂ ಓದಿ; ಶಾಸಕ ಸಿ. ಟಿ ರವಿ ಆಸ್ಪತ್ರೆಗೆ ದಾಖಲು.. ಪತ್ನಿ ಪಲ್ಲವಿ ಸಿಟಿ ರವಿ ಕಣ್ಣೀರು!

ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ, ಚರಂಡಿ ಮತ್ತಿತರ ಕಾಮಗಾರಿಗಳಾಗಿ ಫೆ.5ರಿಂದ ಎ. 5ರ ವರೆಗೆ ಈ ಘಾಟಿಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಆ ಬಳಿಕ ಎ. 5ರಂದು ಕಾಮಗಾರಿ ಪೂರ್ಣಗೊಳ್ಳದ ಕಾರಣ ಮತ್ತೆ 10 ದಿನಗಳ ವರೆಗೆ ಸಂಚಾರ ನಿಷೇಧಿಸಲಾಗಿತ್ತು. ಈಗ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

3.5 ಕಿ.ಮೀ. ಕಾಮಗಾರಿ:

ಕುಂದಾಪುರ – ತೀರ್ಥಹಳ್ಳಿ ರಾಜ್ಯ ಹೆದ್ದಾರಿ ಹಾದುಹೋಗುವ ಬಾಳೆಬರೆ ಘಾಟಿಯ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ 3 ಕೋಟಿ.ರೂ. ವೆಚ್ಚದಲ್ಲಿ ಅಂದಾಜು 1 ಕಿ.ಮೀ. ಹಾಗೂ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ 10 ಕೋಟಿ.ರೂ. ವೆಚ್ಚದಲ್ಲಿ 2.5 ಕಿ.ಮೀ. ಸೇರಿದಂತೆ ಒಟ್ಟು 3.5 ಕಿ.ಮೀ. ದೂರದವರೆಗೆ ರಸ್ತೆ ಅಗಲ, ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ ನಿರ್ಮಾಣ ಕಾರ್ಯ ನಡೆದಿದೆ.

3.5 ಕಿ.ಮೀ. ಅಭಿವೃದ್ಧಿ ಬಾಕಿ:
ಬಾಳೆಬರೆ ಘಾಟಿಯು ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆ ಸೇರಿ ಹುಲಿಕಲ್‌ ಚೆಕ್‌ ಪೋಸ್ಟ್‌ನಿಂದ ಹೊಸಂಗಡಿಯ ಘಾಟಿಯ ಬುಡದ ವರೆಗೆ 14.5 ಕಿ.ಮೀ. ದೂರವಿದೆ. ಶಿವಮೊಗ್ಗ ಜಿಲ್ಲೆಯ 8 ಕಿ.ಮೀ. ಪೈಕಿ ಈ ಹಿಂದೆ ಸ್ವಲ್ಪ ಕಾಂಕ್ರಿಟೀಕರಣ ಆಗಿದ್ದು, ಈಗ ಬಾಕಿಯಿದ್ದ 2.5 ಕಿ.ಮೀ.ನೊಂದಿಗೆ ಕಾಂಕ್ರಿಟೀಕರಣಗೊಂಡಿದೆ. ಉಡುಪಿ ಜಿಲ್ಲೆಯ 6.5 ಕಿ.ಮೀ. ಘಾಟಿಯ ಪೈಕಿ ಈ ಹಿಂದೆ 2 ಕಿ.ಮೀ., ಈಗ 1 ಕಿ.ಮೀ. ಸೇರಿದಂತೆ ಒಟ್ಟು 3 ಕಿ.ಮೀ. ಕಾಂಕ್ರಿಟೀಕರಣಗೊಂಡಂತಾಗಿದೆ. ಇನ್ನು ಜಿಲ್ಲೆಯ ವ್ಯಾಪ್ತಿಯಲ್ಲಿ 3.5 ಕಿ.ಮೀ. ಘಾಟಿ ರಸ್ತೆ ಕಾಂಕ್ರಿಟೀಕರಣ ಬಾಕಿ ಇದೆ.

ಇದನ್ನೂ ಓದಿ; ಒಳಮೀಸಲಾತಿ ಕಿಚ್ಚು: ತರ್ಲಘಟ್ಟ ತಾಂಡಾದಲ್ಲಿ ವಿಜಯೇಂದ್ರಗೆ ಪ್ರತಿಭಟನೆಯ ಸ್ವಾಗತ

Most Popular

Recent Comments