(liquor price hike:) ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಮದ್ಯದ ಮೇಲಿನ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದು ಹೊಸ ಅಬಕಾರಿ ನೀತಿಯನ್ನು ಜಾರಿಗೆ ತಂದಿದೆ. ಸೋಮವಾರದಿಂದ ಜಾರಿಗೆ ಬಂದಿರುವ ಈ ಹೊಸ ನೀತಿಯು ಮದ್ಯಪ್ರಿಯರಿಗೆ ದೊಡ್ಡ ಶಾಕ್ ನೀಡಿದ್ದು, ವಿಶೇಷವಾಗಿ ಕಡಿಮೆ ದರದ ಮದ್ಯದ ಬೆಲೆ ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಕಳೆದ ಆರು ದಶಕಗಳಿಂದ ಜಾರಿಯಲ್ಲಿದ್ದ ‘ಬಲ್ಕ್ ಲೀಟರ್’ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಸರ್ಕಾರ ರದ್ದುಗೊಳಿಸಿದೆ. ಅದರ ಬದಲಿಗೆ ಈಗ ‘ಅಲ್ಕೋಹಾಲ್ ಇನ್ ಬೇವರೇಜ್’ (ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣ) ಆಧಾರಿತ ತೆರಿಗೆ ಪದ್ಧತಿಯನ್ನು ಜಾರಿಗೆ ತರಲಾಗಿದೆ. ಜೊತೆಗೆ ಈ ಹಿಂದೆ ಇದ್ದ 16 ಅಬಕಾರಿ ತೆರಿಗೆ ಸ್ಲ್ಯಾಬ್‌ಗಳನ್ನು ಕಡಿತಗೊಳಿಸಿ ಕೇವಲ 8 ಸ್ಲ್ಯಾಬ್‌ಗಳಿಗೆ ಸೀಮಿತಗೊಳಿಸಲಾಗಿದೆ.
ಹೊಸ ನೀತಿಯ ಪರಿಣಾಮವಾಗಿ 180 ಮಿಲಿ ಟೆಟ್ರಾ ಪ್ಯಾಕ್‌ಗಳ ವಿಸ್ಕಿ, ರಮ್, ಬ್ರಾಂಡಿ, ಜಿನ್ ಹಾಗೂ ವೋಡ್ಕಾ ಬೆಲೆ ಕನಿಷ್ಠ ಶೇ.20ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸಾಮಾನ್ಯ ಜನರು ಹೆಚ್ಚು ಖರೀದಿಸುವ ಕಡಿಮೆ ದರದ ಮದ್ಯದ ಮೇಲೆಯೇ ಈ ದರ ಏರಿಕೆಯ ಹೊರೆ ಹೆಚ್ಚಾಗಿ ಬೀಳಲಿದೆ.
ಇನ್ನೊಂದೆಡೆ ವಿದೇಶಿ ಹಾಗೂ ಪ್ರೀಮಿಯಂ ಮದ್ಯದ ಬ್ರ್ಯಾಂಡ್‌ಗಳ ಬೆಲೆ ಶೇ.16ರಿಂದ 20ರಷ್ಟು ಇಳಿಕೆಯಾಗುವ ಸಾಧ್ಯತೆಯಿದೆ. ಸರ್ಕಾರದ ಈ ನಿರ್ಧಾರ ಬಹುರಾಷ್ಟ್ರೀಯ ಪ್ರೀಮಿಯಂ ಮದ್ಯ ಕಂಪನಿಗಳಿಗೆ ಲಾಭ ತಂದುಕೊಡಲಿದ್ದು, ಸ್ಥಳೀಯ ಡಿಸ್ಟಿಲರಿಗಳು ಹಾಗೂ ಪ್ರಾದೇಶಿಕ ಮದ್ಯ ಉತ್ಪಾದಕರಿಗೆ ಹಿನ್ನಡೆಯಾಗುವ ಭೀತಿ ವ್ಯಕ್ತವಾಗಿದೆ.
ಉದ್ಯಮ ವಲಯದ ಪ್ರಕಾರ, ಈ ನೀತಿಯಿಂದ ಸ್ಥಳೀಯ ಹೂಡಿಕೆ ಮತ್ತು ಉದ್ಯೋಗಾವಕಾಶಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ರಾಜ್ಯ ಸರ್ಕಾರವು ಆದಾಯ ಹೆಚ್ಚಿಸುವ ಉದ್ದೇಶದಿಂದ ‘ಕರ್ನಾಟಕ ಅಬಕಾರಿ ನಿಯಮಗಳು-2026’ ಅನ್ನು ಅಂತಿಮಗೊಳಿಸಿ ಜಾರಿಗೆ ತಂದಿದೆ ಎಂದು ತಿಳಿದುಬಂದಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (liquor price hike:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






Leave a Reply