(LKG-10th:) ಬೆಂಗಳೂರು: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಪೌಷ್ಟಿಕಾಂಶ ಮಟ್ಟ ಹೆಚ್ಚಿಸಿ, ಅಪೌಷ್ಟಿಕತೆ ಮತ್ತು ರಕ್ತಹೀನತೆ ನಿವಾರಣೆಗೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. 2026-27ನೇ ಶೈಕ್ಷಣಿಕ ಸಾಲಿನಿಂದ ಎಲ್ಕೆಜಿ ರಿಂದ 10ನೇ ತರಗತಿವರೆಗಿನ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದೊಂದಿಗೆ ವಾರದ ಎಲ್ಲಾ ಆರು ದಿನಗಳೂ ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸುವುದನ್ನು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ (ಪಿ.ಎಂ. ಪೋಷಣ್) ಆದೇಶ ಹೊರಡಿಸಿದೆ.
ಅಜೀಂ ಪ್ರೇಮ್ಜೀ ಫೌಂಡೇಶನ್ (APF) ಆರ್ಥಿಕ ಸಹಕಾರದೊಂದಿಗೆ ಯೋಜನೆಯನ್ನು ರಾಜ್ಯಾದ್ಯಂತ ಪರಿಣಾಮಕಾರಿಯಾಗಿ ವಿಸ್ತರಿಸಲಾಗುತ್ತಿದ್ದು, ಪ್ರಸ್ತುತ ಜಿಲ್ಲಾಮಟ್ಟದಲ್ಲಿ ಶೇ.50ರಿಂದ 60ರಷ್ಟಿರುವ ವಿತರಣಾ ಪ್ರಮಾಣವನ್ನು ಈ ಸಾಲಿನಲ್ಲಿ ಶೇ.90ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ.
ಸೋಮವಾರದಿಂದ ಶನಿವಾರದವರೆಗೆ ಮಧ್ಯಾಹ್ನದ ಊಟದ ಜೊತೆಗೆ ಪೋಷಕರ ಒಪ್ಪಿಗೆ ಪಡೆದ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡಲಾಗುತ್ತದೆ. ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಬದಲಾಗಿ ಬಾಳೆಹಣ್ಣು ವಿತರಿಸಲು ಸೂಚಿಸಲಾಗಿದೆ. ಶೈಕ್ಷಣಿಕ ವರ್ಷದ ಆರಂಭದಲ್ಲೇ ಹೊಸ ಹಾಗೂ ಹಳೆಯ ವಿದ್ಯಾರ್ಥಿಗಳ ಪೋಷಕರಿಂದ ಲಿಖಿತ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.
ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಶಾಲೆಗಳು ಮಾಸಿಕ ಹಾಜರಾತಿ, ಮೊಟ್ಟೆ ಮತ್ತು ಬಾಳೆಹಣ್ಣು ಸೇವಿಸಿದ ಮಕ್ಕಳ ಸಂಖ್ಯೆ, ಖರೀದಿ ಪ್ರಮಾಣ ಸೇರಿದಂತೆ ಎಲ್ಲ ಮಾಹಿತಿಯನ್ನು ‘SATS’ ತಂತ್ರಾಂಶದಲ್ಲಿ ದಾಖಲಿಸಬೇಕು ಎಂದು ಇಲಾಖೆ ಸೂಚಿಸಿದೆ.
ಮಕ್ಕಳಲ್ಲಿ ಮೊಟ್ಟೆ ಸೇವನೆ ಕುರಿತು ಜಾಗೃತಿ ಮೂಡಿಸಲು ಶಾಲೆಗಳಲ್ಲಿ ಗೋಡೆಚಿತ್ರಗಳು, ಪ್ರಾರ್ಥನಾ ಸಭೆಗಳಲ್ಲಿ ಅರಿವು ಕಾರ್ಯಕ್ರಮಗಳು, ತಜ್ಞ ವೈದ್ಯರು ಹಾಗೂ ಪೌಷ್ಟಿಕಾಂಶ ಅಧಿಕಾರಿಗಳಿಂದ ವಿಶೇಷ ಜಾಗೃತಿ ಸತ್ರಗಳನ್ನು ಆಯೋಜಿಸಲು ಸೂಚಿಸಲಾಗಿದೆ.
ಕಡಿಮೆ ಪ್ರಮಾಣದಲ್ಲಿ ಮೊಟ್ಟೆ ವಿತರಣೆ ನಡೆಯುವ ಶಾಲೆಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು (BEO) ಮತ್ತು ಉಪನಿರ್ದೇಶಕರು (DDPI) ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಪ್ರತಿ ತಿಂಗಳು ಬ್ಲಾಕ್ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸಲಾಗುತ್ತದೆ.
ಸೆಪ್ಟೆಂಬರ್ 2026ರೊಳಗೆ ರಾಜ್ಯದ ಶಾಲೆಗಳಲ್ಲಿ ಕನಿಷ್ಠ ಶೇ.80ರಷ್ಟು ಮೊಟ್ಟೆ ಸೇವನೆಯ ಗುರಿ ತಲುಪುವ ಉದ್ದೇಶ ಹೊಂದಿರುವ ಸರ್ಕಾರ, ಯೋಜನೆ ಯಶಸ್ವಿಗೊಳಿಸುವ ಜವಾಬ್ದಾರಿಯನ್ನು ಶಾಲಾ ಮುಖ್ಯ ಶಿಕ್ಷಕರು, ADPIಗಳು ಹಾಗೂ ಮಧ್ಯಾಹ್ನದ ಊಟ ಯೋಜನೆ ಅಧಿಕಾರಿಗಳಿಗೆ ವಹಿಸಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (LKG-10th:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






Leave a Reply