Loan Interest: ಕೃಷಿ ಸಾಲದ ಬಡ್ಡಿ ಮನ್ನಾ ವಿಸ್ತರಣೆ

(Loan Interest) ಸಹಕಾರ ಸಂಘಗಳಲ್ಲಿ ರೈತರು ಪಡೆದಿರುವ ಸಾಲದ ಮೇಲಿನ ಬಡ್ಡಿ ಮನ್ನಾ ಯೋಜನೆಯನ್ನು ಮಾರ್ಚ್ 31 ವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ; ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಇಲ್ಲ ಫ್ರೀ ಕರೆಂಟ್

ಸಹಕಾರ ಸಂಸ್ಥೆಗಳ ಮೂಲಕ ಸಾಲ ಪಡೆದು 2023ರ ಡಿ. 31 ರವರೆಗೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲು ಪಾವತಿಸಿದರೆ, ಆ ಮೊತ್ತಕ್ಕೆ ಬಾಕಿ ಇರುವ ಬಡ್ಡಿ ಮನ್ನಾ ಗೆ ಮಾರ್ಚ್ 31 ವರೆಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ; ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟದ ಹಿಂದಿದ್ದಾರೆ ಮಲೆನಾಡಿನ ಇಬ್ಬರು; ಟೋಪಿಯಲ್ಲಿದ್ದ ಕೂದಲಿನಿಂದ ಸಿಕ್ಕಿತು ಮಹತ್ವದ ಸುಳಿವು

ಬರಗಾಲದಿಂದ ರೈತರು ಆರ್ಥಿಕವಾಗಿ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಈ ಸೌಲಭ್ಯ ವಿಸ್ತರಣೆ ಮಾಡಲಾಗಿದ್ದು, ಮಾರ್ಚ್ 31 ರವರೆಗೆ ರೈತರು ಸಾಲಗಳ ಅಸಲು ಮರುಪಾವತಿ ಮಾಡಿದರೆ ಬಡ್ಡಿ ಮನ್ನಾ (Loan Interest)  ಸೌಲಭ್ಯ ಸಿಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ; ನಿಮ್ಮತ್ರ ಇರೋ ವೋಟರ್ ಐಡಿ ಹಳೇದಾ..?; ಹೊಸ ಕಲರ್ pvc ವೋಟರ್ ಐಡಿ ಕಾರ್ಡ್ ಪಡೆಯೋದು ಹೇಗೆ?

ಯಾವ ಬ್ಯಾಂಕ್ ನಲ್ಲಿ ಸಾಲ ಪಡೆದವರು ಅರ್ಹರು:
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗಳು, ಹಾಗೂ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ ಗಳಿಂದ ಪಡೆದಿರುವ ಸಾಲಗಳಿಗೆ ಈ ಆದೇಶ ಅನ್ವಯವಾಗಲಿದೆ.

ಇದನ್ನೂ ಓದಿ; ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಉದ್ಯೋಗ; ಅಸಿಸ್ಟೆಂಟ್ ಅಕೌಂಟ್ಸ್​ ಆಫೀಸರ್, ಪ್ರೈವೇಟ್ ಸೆಕ್ರೆಟರಿ ಹುದ್ದೆಗೆ ಅರ್ಜಿ ಆಹ್ವಾನ

ಸಾಲ ಮರುಪಾವತಿ ಮಾಡಿದರೆ ಬಡ್ಡಿ ಮನ್ನಾ (Loan Interest) ಮಾಡುವ ಸೌಲಭ್ಯವನ್ನು 29-02-2024 ರವರೆಗೆ ಕಲ್ಪಿಸಿ ಈ ಮೊದಲು ಆದೇಶ ಹೊರಡಿಸಿತ್ತು. ಆದರೆ, ಬರಗಾಲ ಮುಂದುವರಿದ ಹಿನ್ನೆಲೆಯಲ್ಲಿ ಯೋಜನೆಯನ್ನು ಮಾರ್ಚ್ 31 ರವರೆಗೆ ವಿಸ್ತರಣೆ ಮಾಡಲಾಗಿದೆ.

Loan Interest: ಕೃಷಿ ಸಾಲದ ಬಡ್ಡಿ ಮನ್ನಾ ವಿಸ್ತರಣೆ
Loan Interest: ಕೃಷಿ ಸಾಲದ ಬಡ್ಡಿ ಮನ್ನಾ ವಿಸ್ತರಣೆ

ಪ್ರಮುಖ ಸುದ್ದಿಗಳನ್ನು ಓದಿ

  1. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  2. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  3. ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
  4. ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  5. ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
  6. ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
  7. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
  8. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  9. ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ