Loan Interest Waive: ರೈತರ ಕೃಷಿ ಸಾಲದ ಬಡ್ಡಿ ಮನ್ನಾ

Loan Interest Waive: ರಾಜ್ಯದಲ್ಲಿ ಉದ್ಭವಿಸಿರುವ ಅನಾವೃಷ್ಟಿಗಳ ಹಿನ್ನೆಲೆಯಲ್ಲಿ ರೈತರಿಗೆ ಅಲ್ಪ ಸಹಾಯಹಸ್ತವನ್ನು ರಾಜ್ಯ ಸರ್ಕಾರ ನೀಡಿದೆ. ಹೌದು, ರಾಜ್ಯದ ಸಹಕಾರ ಸಂಸ್ಥೆ ಮೂಲಕ ಸಾಲ ಪಡೆದು ದಿನಾಂಕ: 31.12.2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಇದನ್ನೂ ಓದಿ; ಶೀಘ್ರವೇ ರೈತರಿಗೆ ಬರ ಪರಿಹಾರ ತಲುಪಿಸಲು ಅಧಿಕಾರಿಗಳಿಗೆ ಸೂಚನೆ

ರಾಜ್ಯದಲ್ಲಿ ಉದ್ಭವಿಸಿರುವ ಅನಾವೃಷ್ಟಿಗಳ ಹಿನ್ನೆಲೆಯಲ್ಲಿ ರಾಜ್ಯದ ರೈತರು ಸಹಕಾರ ಸಂಸ್ಥೆಗಳಿಂದ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲ ಪಡೆದು ಸಾಲ ಮರುಪಾವತಿಸಲು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವುದನ್ನು ಮತ್ತು ಇದರಿಂದ ಸಹಕಾರ ಸಂಸ್ಥೆಗಳು ನಬಾರ್ಡ್ ನಿಂದ ಪಡೆದ ಸಾಲವನ್ನು ಮರುಪಾವತಿಸಲು ಸಾಧ್ಯವಾಗದೇ ಪುನಃ ರೈತರಿಗೆ ಸಾಲ ನೀಡಲು ತೊಂದರೆಯಾಗುತ್ತಿರುವುದನ್ನು ಮನಗಂಡು ಇಂತಹ ಸುಸ್ತಿದಾರರಾದ ರೈತರನ್ನು ಋಣಮುಕ್ತರನ್ನಾಗಿ (Loan Interest Waive: ) ಮಾಡಿ ಮುಂದಿನ ತಮ್ಮ ಕೃಷಿ ಚಟುವಟಿಕೆಗಳಿಗೆ ಸಾಲ ಪಡೆದು ಅರ್ಹತೆ ಗಳಿಸಲು ಸರ್ಕಾರವು ಯೋಜನ ರೂಪಿಸುವುದು ಅತ್ಯವಶ್ಯಕವಾಗಿರುತ್ತದೆ. ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಸಹಕಾರ ಸಂಘಗಳ ನಿಬಂಧಕರ ಪತ್ರದಲ್ಲಿ ಸಹಕಾರ ಸಂಸ್ಥೆಗಳ ಮೂಲಕ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲಗಳನ್ನು ಪಡೆದು ದಿನಾಂಕ:31.12.2023 ರ ಅಂತ್ಯಕ್ಕೆ ಸಹಕಾರ ಸಂಸ್ಥೆಗಳಿಗೆ 56,879-ರೈತರಿಂದ 58,575.96/- ಲಕ್ಷಗಳ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲಗಳು ಸುಸ್ತಿಯಾಗಿದ್ದು, ಇದರ ಮೇಲಿನ ಬಡ್ಡಿ, ಬಾಬು ರೂ. 44,020.50/- ಲಕ್ಷಗಳಾಗಿರುತ್ತವೆ ಎಂದು ತಿಳಿಸಿರುತ್ತಾರೆ.

ಇದನ್ನೂ ಓದಿ; ಗೃಹಜ್ಯೋತಿ ನಿಯಮದಲ್ಲಿ ಮಹತ್ವದ ಬದಲಾವಣೆ; ಏನದು ಬದಲಾವಣೆ?

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರೈತರು ರಾಜ್ಯದ ಸಹಕಾರ ಸಂಘಗಳು ಅಂದರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು ದಿನಾಂಕ:31.12.2023 ಕ್ಕೆ ಸುಸ್ತಿಯಾಗಿರುವ, ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು ದಿನಾಂಕ:29.02.2024 ರೊಳಗೆ ಸಂಬಂಧಪಟ್ಟ ಪತ್ತಿನ ಸಹಕಾರ ಸಂಘ/ಬ್ಯಾಂಕುಗಳಿಗೆ ಪೂರ್ತಿಯಾಗಿ ಮರುಪಾವತಿಸಿದಲ್ಲಿ ಈ ಮೊತ್ತಕ್ಕೆ ಬಾಕಿ ಇರುವ ಬಡ್ಡಿಯನ್ನು ಮನ್ನಾ ಮಾಡಲು ಮತ್ತು ಈ ರೀತಿ ಮನ್ನಾ ಮಾಡಿದ ಬಡ್ಡಿ ಮೊಬಲಗನ್ನು ಸಹಕಾರ ಸಂಘಗಳಿಗೆ ಸರ್ಕಾರವು ಭರ್ತಿ ಮಾಡಲು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಮಂಜೂರಾತಿ ನೀಡಲಾಗಿದೆ.

ಸರ್ಕಾರದ ಷರತ್ತುಗಳು ಈ ಕೆಳಗಿನಂತಿವೆ:
1.ಈ ಸೌಲಭ್ಯವು ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು ದಿನಾಂಕ :31.12.2023 ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳಿಗೆ ಮಾತ್ರ ಅನ್ವಯವಾಗುತ್ತದೆ.

2.ಈ ಯೋಜನೆ ಕೃಷಿಯೇತರ ಸಾಲಗಳಿಗೆ ಅನ್ವಯವಾಗುವುದಿಲ್ಲ ಮತ್ತು ಮೇಲೆ ತಿಳಿಸಿರುವ ಸಂಸ್ಥೆಗಳನ್ನು ಹೊರತುಪಡಿಸಿ ಇತರೆ ಸಹಕಾರ ಸಂಸ್ಥೆಗಳಲ್ಲಿ ಪಡೆದ ಸಾಲಗಳಿಗೆ ಅನ್ವಯಿಸುವುದಿಲ್ಲ. ನಬಾರ್ಡ್ ಗುರುತಿಸಿದ ಕೃಷಿ / ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಅಂದರೆ ಲಘು ನೀರಾವರಿ, ಭೂ ಅಭಿವೃದ್ಧಿ, ಸಾವಯವ ಕೃಷಿ, ಪಶುಸಂಗೋಪನೆ ಹಾಗೂ ಹೈನುಗಾರಿಕೆ, ಮೀನು ಕೃಷಿ, ರೇಷ್ಮೆ ಕೃಷಿ, ಕೃಷಿ ಯಾಂತ್ರೀಕರಣ, ಪ್ಲಾಂಟೇಷನ್ ಹಾಗೂ ತೋಟಗಾರಿಕೆ ಅಭಿವೃದ್ಧಿ ಉದ್ದೇಶಗಳಿಗೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ. ಮುಂದುವರೆದು, ರಾಜ್ಯ ಸರ್ಕಾರದ ಬಡ್ಡಿ ರಿಯಾಯತಿ ಬದ್ಧತೆಯಡಿ ವಿತರಿಸಿರುವ ಕೃಷಿ / ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಮಾತ್ರ ಅನ್ವಯವಾಗುತ್ತದೆ.

ಇದನ್ನೂ ಓದಿ; ಈ ಯೋಜನೆಯ ಫಲಾನುಭವಿಗಳು 10 ಲಕ್ಷದ ವರೆಗೆ ಪಡೆಯಬಹುದು ವಿಮಾ ಕವರೇಜ್

3. ಕೃಷಿ ಪತ್ತಿನ ಸಹಕಾರ ಸಂಘ/ಬ್ಯಾಂಕುಗಳಿಂದ :31.12.2023 ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲನ್ನು ದಿನಾಂಕ:29.02.2024 ರೊಳಗೆ ಸಂಬಂಧಪಟ್ಟ ಸಂಸ್ಥೆಗಳಿಗೆ ಸಾಲ ಪಡೆದ ರೈತರು ಮರುಪಾವತಿ ಮಾಡಿದಲ್ಲಿ ಸದರಿ ಸಾಲಗಳ ಮೇಲಿನ ಮರುಪಾವತಿ ದಿನಾಂಕದವರೆಗಿನ ಬಡ್ಡಿಯನ್ನು ಮನ್ನಾ ಮಾಡಿ (Loan Interest Waive: ) ಸಂಬಂಧಪಟ್ಟ ಸಹಕಾರಿ ಸಂಸ್ಥೆಗಳಿಗೆ ಸರ್ಕಾರ ಭರಣ ಮಾಡುವುದು. ಈ ಯೋಜನೆಯು ಮಾರಿಟೋರಿಯಂ ಅವಧಿಯಲ್ಲಿ ಸುಸ್ತಿಯಾಗಿರುವ ಬಡ್ಡಿಗೂ ಸಹ ಅನ್ವಯವಾಗುತ್ತದೆ.

Loan Interest Waive: ರಾಜ್ಯದ ರೈತರ ಕೃಷಿ ಸಾಲದ ಬಡ್ಡಿ ಮನ್ನಾ
Loan Interest Waive: ರಾಜ್ಯದ ರೈತರ ಕೃಷಿ ಸಾಲದ ಬಡ್ಡಿ ಮನ್ನಾ

4. ಈ ಯೋಜನೆಯಡಿಯಲ್ಲಿ ಪ್ರಾಥಮಿಕ ಸಹಕಾರ ಸಂಘಗಳು, ಲ್ಯಾಂಪ್ ಸಹಕಾರ ಸಂಘಗಳು, ಡಿಸಿಸಿ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕು (ಪಿಕಾರ್ಡ್) ಗಳಿಗೆ ರೈತರು ಮರುಪಾವತಿಸುವ ಸುಸ್ತಿ ಸಾಲದ ಅಸಲು ದಿನಾಂಕ:01.04.2004 ಕ್ಕಿಂತ ಹಿಂದಿನ ಅವಧಿಯ ಸಾಲವಾಗಿದ್ದರೆ, ಬಡ್ಡಿ ಪಾವತಿಸಲು ಬಾಕಿ ಇದ್ದ ದಿನಾಂಕದಿಂದ ಸಾಲ ಮರುಪಾವತಿ ದಿನಾಂಕದವರೆಗೆ ಸಾಲಗಳಿಗೆ ನಿಗದಿಮಾಡಲಾಗಿರುವ ಬಡ್ಡಿ, ದರ ಅಥವಾ ಶೇ. 12 ರ ಬಡ್ಡಿದರ ಇದರಲ್ಲಿ ಯಾವುದು ಕಡಿಮೆಯೋ ಅಂತಹ ಬಡ್ಡಿ, ಆಧಾರದಲ್ಲಿ ಸಹಕಾರ ಸಂಘಗಳಿಗೆ ಸರ್ಕಾರದ ವತಿಯಿಂದ ಬಡ್ಡಿ ಸಹಾಯಧನವನ್ನು ಭರಿಸಲಾಗುವುದು.

5. ದಿನಾಂಕ:01.04.2004ರ ನಂತರದಲ್ಲಿನ ಸಾಲಗಳಿಗೆ ಆಯಾ ವರ್ಷದಲ್ಲಿ ರೈತರು ಪಾವತಿಸಬೇಕಾದ ಬಡ್ಡಿ ಮತ್ತು ಸರ್ಕಾರ ಪಾವತಿಸಬೇಕಾದ ಬಡ್ಡಿ ಸಹಾಯಧನದ ಒಟ್ಟು ಬಡ್ಡಿ ಅಥವಾ ಗರಿಷ್ಟ ಶೇ.12 ಇದರಲ್ಲಿ ಯಾವುದು ಕಡಿಮೆಯೋ ಆ ಬಡ್ಡಿಯನ್ನು ಸಂಬಂಧಿಸಿದ ಸಹಕಾರ ಸಂಸ್ಥೆಗಳಿಗೆ ಸರ್ಕಾರದಿಂದ ಭರಿಸಲಾಗುವುದು. ರೂ.10.00 ಲಕ್ಷಕ್ಕಿಂತ ಹೆಚ್ಚಿನ ಸಾಲವನ್ನು ಸಾಮಾನ್ಯ ಬಡ್ಡಿ ದರದಲ್ಲಿ ವಿತರಿಸಿದ್ದರೂ ಸಹ ಆಯಾ ವರ್ಷದಲ್ಲಿ ರೂ.10.00 ಲಕ್ಷಗಳವರೆಗೆ ನಿಗದಿಪಡಿಸಿದ ಬಡ್ಡಿ ದರದನ್ವಯ ಬಡ್ಡಿ ಮನ್ನಾ ಮೊತ್ತ ಕ್ಲೇಮು ಮಾಡತಕ್ಕದ್ದು.

6. ಈ ಯೋಜನೆಯಲ್ಲಿ ಮರುಪಾವತಿಸುವ ಸಾಲಗಳಿಗೆ ಯಾವುದೇ ಸುಸ್ತಿ ಬಡ್ಡಿ. ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬಡ್ಡಿ ವಸೂಲಿ ವೆಚ್ಚ ಹಾಗೂ ಇತರೆ ವೆಚ್ಚಗಳನ್ನು ಸಹಕಾರ ಸಂಸ್ಥೆಗಳು ಕ್ಲೇಮು ಮಾಡತಕ್ಕದ್ದಲ್ಲ.

ಇದನ್ನೂ ಓದಿ; ಡಿಸಿಸಿ ಬ್ಯಾಂಕ್‌ ನಲ್ಲಿ ಉದ್ಯೋಗ; 93 ಹುದ್ದೆಗಗಳಿಗೆ ಅರ್ಜಿ ಆಹ್ವಾನ

7. ಈ ಯೋಜನೆಯಲ್ಲಿ ತಗಲುವ ವೆಚ್ಚವನ್ನು ಸಹಕಾರ ಇಲಾಖೆಗೆ ಒದಗಿಸಿರುವ ಆಯವ್ಯಯದ ಸಾಮಾನ್ಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯ ಲೆಕ್ಕಶೀರ್ಷಿಕೆಯಲ್ಲಿ ಭರಿಸತಕ್ಕದ್ದು.

8. ಈ ಯೋಜನೆಯಡಿ ಕ್ಷೇಮ್ ಬಿಲ್ಲುಗಳನ್ನು ಸಹಕಾರ ಸಂಘಗಳು ವಸೂಲಾತಿ ಅಂತಿಮ ದಿನಾಂಕದಿಂದ 45 ದಿನಗಳೊಳಗಾಗಿ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸತಕ್ಕದ್ದು, ರೈತರು ಸುಸ್ತಿ ಅಸಲು ಮೊತ್ತವನ್ನು ಮರುಪಾವತಿಸುವ ದಿನಾಂಕದವರೆಗೆ ಮಾತ್ರ ಬಡ್ಡಿ ಕ್ಷೇಮುಗಳಿಗೆ ಅವಕಾಶವಿರುತ್ತದೆ. ಯಾವುದೇ ಕಾರಣದಿಂದಾಗಿ ಕ್ಲೇಮು ಮೊತ್ತ ಬಿಡುಗಡೆಗೆ ಆಗುವ ವಿಳಂಬದ ಅವಧಿಗೆ ಯಾವುದೇ ಕ್ಲೇಮುಗಳಿಗೆ ಅವಕಾಶವಿರುವುದಿಲ್ಲ.

9. ಪ್ಯಾಕ್ಸ್/ಲ್ಯಾಂಪ್ಸ್ ಸಹಕಾರ ಸಂಘಗಳು ಹಾಗೂ ಡಿಸಿಸಿ ಬ್ಯಾಂಕುಗಳ ಬಿಲ್ಲುಗಳನ್ನು (Loan Interest Waive: ) ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಯಾರಿಸಿ ಸಹಕಾರ ಸಂಘಗಳ ಲೆಕ್ಕಪರಿಶೋಧನ ಜಂಟಿ / ಉಪ ನಿರ್ದೇಶಕರು ಮತ್ತು ಸಹಕಾರ ಸಂಘಗಳ ಉಪನಿಬಂಧಕರು ಇವರುಗಳ ಜಂಟಿ ದೃಢೀಕರಣದೊಂದಿಗೆ ಬಿಲ್ಲುಗಳನ್ನು ಬಿಡುಗಡೆಗೆ ವ್ಯವಸ್ಥಾಪಕ ನಿರ್ದೇಶಕರು, ಅಪೆಕ್ಸ್ ಬ್ಯಾಂಕ್ ಇವರ ಮೂಲಕ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸತಕ್ಕದ್ದು

10. ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕು (ಪಿಕಾರ್ಡ್)ಗಳ ಬಿಲ್ಲುಗಳನ್ನು ಜಿಲ್ಲಾ ವ್ಯವಸ್ಥಾಪಕರು ತಯಾರಿಸಿ ಸಹಕಾರ ಸಂಘಗಳ ಲೆಕ್ಕಪರಿಶೋಧನ ಜಂಟಿ / ಉಪ ನಿರ್ದೇಶಕರು ಮತ್ತು ಸಹಕಾರ ಸಂಘಗಳ ಉಪನಿಬಂಧಕರು ಇವರುಗಳ ಜಂಟಿ ದೃಢೀಕರಣದೊಂದಿಗೆ ಕಸ್ಕಾರ್ಡ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು ಇವರ ಮೂಲಕ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸತಕ್ಕದ್ದು.

ಇದನ್ನೂ ಓದಿ; ಚಾಕ್ ಪೀಸ್ ನಲ್ಲಿ ಯುವಕನ ಕೈಚಳಕ; ರಾಮ ಮಂದಿರ ಕಲಾಕೃತಿ ನಿರ್ಮಾಣ

11. ಸಹಕಾರ ಸಂಘಗಳ ನಿಬಂಧಕರು ಅರ್ಹ ಕ್ಲೇಮು ಗಳನ್ನು ಪರಿಶೀಲಿಸಿ, ನಿಗಧಿತವಾಗಿ ಹಣ ಬಿಡುಗಡೆಗೆ ಕ್ರಮವಿಡತಕ್ಕದ್ದು ಮತ್ತು ಕಾಲಕಾಲಕ್ಕೆ ಸರ್ಕಾರಕ್ಕೆ ಬಳಕೆ ಪ್ರಮಾಣ ಪತ್ರವನ್ನು ಒದಗಿಸತಕ್ಕದ್ದು,

12. ಸಹಕಾರ ಸಂಘಗಳ ನಿಬಂಧಕರು ಈ ಯೋಜನೆ ಅನುಷ್ಠಾನಕ್ಕಾಗಿ ಅಗತ್ಯವಿರುವ ಪ್ರಪತ್ರಗಳನ್ನು ಒದಗಿಸಲು ಮತ್ತು ಕಾಲಕಾಲಕ್ಕೆ ಸಂಬಂಧಿಸಿದವರಿಗೆ ಅಗತ್ಯ ಸಲಹೆ/ಸೂಚನೆ/ನಿರ್ದೇಶನಗಳನ್ನು ನೀಡತಕ್ಕದ್ದು.

13.ಈ ಯೋಜನೆಯು ಜಾರಿ ಇರುವ ಬಗ್ಗೆ, ಎಲ್ಲಾ ಸಾಲಗಾರ ಸದಸ್ಯರಿಗೆ ಪತ್ರದ ಮುಖೇನ ಸಾಲದ ಸೌಲಭ್ಯ ಮತ್ತು ಇದರಿಂದ ರೈತ ಸದಸ್ಯರಿಗೆ ದೊರೆಯುವ ರಿಯಾಯಿತಿ ವಿವರಗಳನ್ನು ಸಂಘದ ಮೂಲಕ ತಿಳಿಸುವ ವ್ಯವಸ್ಥೆಯನ್ನು ನಿಬಂಧಕರು ಮಾಡತಕ್ಕದ್ದು.

ಪ್ರಮುಖ ಸುದ್ದಿಗಳನ್ನು ಓದಿ

  1. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ; ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
  2. ಜಿಯೋದಿಂದ ಗಣರಾಜ್ಯೋತ್ಸವಕ್ಕೆ ವಿಶೇಷ ಆಫರ್; ರೀಚಾರ್ಜ್‌ ನಲ್ಲಿ 3 ಸಾವಿರಕ್ಕೂ ಹೆಚ್ಚು ಮೌಲ್ಯದ ಕೂಪನ್‌ ಗೆಲ್ಲುವ ಅವಕಾಶ
  3. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  4. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  5. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  6. 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
  7.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  8. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  9. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  10.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  11. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  12. ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
  13. rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್‌ ಟಂಟ್‌ಗಳ ನೇಮಕ
  14. ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
  15. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  16. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  17. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್‌ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
  18.  ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
  19.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  20. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  21. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  22.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  23. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  24. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇