loan;- 50,000 ದಿಂದ 1 ಲಕ್ಷದ ವರೆಗೆ ಪಡೆಯಬಹುದು ಸಹಾಯಧನ

(loan;-) ಪ್ರಸಕ್ತ ಸಾಲಿನಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ನೇರಸಾಲ-ಕುರಿ ಸಾಕಾಣಿಕೆ ಯೋಜನೆ ಹಾಗೂ ಸ್ವಾವಲಂಭಿ ಸಾರಥಿ-ಫುಡ್ ಕಾರ್ಟ್ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ.


ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ


ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆಯಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕುರಿ ಸಾಕಾಣಿಕೆ ಉದ್ದೇಶಕ್ಕಾಗಿ ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುವುದು. ಘಟಕ ವೆಚ್ಚ ರೂ.1 ಲಕ್ಷ, ಸಹಾಯಧನ ರೂ. 50 ಸಾವಿರ, ಸಾಲ ರೂ. 50 ಸಾವಿರ ಆಗಿರುತ್ತದೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ


ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ ಯೋಜನೆಯಲ್ಲಿ ಜಿಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿ ಮಾತ್ರ ಬ್ಯಾಂಕ್‍ ಗಳ ಸಹಯೋಗದೊಂದಿಗೆ ಯೋಜನೆ ಅನುಷ್ಟಾನ. ಸಾಲದ ಮೊತ್ತಕ್ಕೆ ಶೇ.75 ರಷ್ಟು ಅಥವಾ ಗರಿಷ್ಟ ರೂ.4 ಲಕ್ಷಗಳ ಸಹಾಯಧನ. ಉಳಿದ ಮೊತ್ತ ಬ್ಯಾಂಕ್ ಸಾಲ ಆಗಿರುತ್ತದೆ.

ಹಾಗಾದರೆ ಈ ಎರಡು ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ?;
ನೇರಸಾಲ-ಕುರಿ ಸಾಕಾಣಿಕೆ ಯೋಜನೆ, ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಈ ವೆಬ್‌ ಸೈಟ್‌ ಮೂಲಕ https://sevasindhu.karnataka.gov.in ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
ಡಿಸೆಂಬರ್, 29 2024

ಇನ್ನು ಯೋಜನೆಗಳ ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮದ ವೆಬ್‍ ಸೈಟ್ https://adcl.karnataka.gov.in ಅಥವಾ ಕಲ್ಯಾಣ ಮಿತ್ರ ಏಕೀಕೃತ ಎಸ್‍ಸಿ, ಎಸ್‍ಟಿ ಸಹಾಯವಾಣಿ 9482300400 ನ್ನು ಸಂಪರ್ಕಿಸಬಹುದು.


ಇದನ್ನೂ ಓದಿ; ಆಸ್ತಿ ಮಾಲೀಕರಿಗೆ ಹೊಸ ಆದೇಶ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಈಗಾಗಲೇ ಅರ್ಜಿ ಸಲ್ಲಿಸಿರುವವರು ಉದ್ದೇಶ ಬದಲಾವಣೆ ಇಚ್ಛಿಸಿದಲ್ಲಿ ನೇರವಾಗಿ ವೆಬ್‍ ಸೈಟ್ ವಿಳಾಸ https://swdcorp.karnataka.gov.in/ADCLPortal ನಲ್ಲಿ ಉದ್ದೇಶ ಬದಲಾವಣೆ ಮಾಡಬಹುದಾಗಿರುತ್ತದೆ.

loan;- 50,000 ದಿಂದ 1 ಲಕ್ಷದ ವರೆಗೆ ಪಡೆಯಬಹುದು ಸಹಾಯಧನ
loan;- 50,000 ದಿಂದ 1 ಲಕ್ಷದ ವರೆಗೆ ಪಡೆಯಬಹುದು ಸಹಾಯಧನ

ಇತ್ತೀಚಿನ ಜನಪ್ರಿಯ ಸುದ್ದಿಗಳು