LOAN: ಸ್ವಯಂ ಉದ್ಯೋಗಕ್ಕಾಗಿ ಸಿಗಲಿದೆ 2 ಲಕ್ಷ ಸಾಲ ಸೌಲಭ್ಯ!

(LOAN) ಕೇಂದ್ರ ಪುರಸ್ಕೃತ ಯೋಜನೆಯಾದ ದೀನ್ ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ


ಯಾವುದೆಲ್ಲಾ ಯೋಜನೆಗಳಲ್ಲಿ ಸಾಲ ಸೌಲಭ್ಯ:
ಸ್ವಯಂ ಉದ್ಯೋಗ ಕಾರ್ಯಕ್ರಮ(ವೈಯಕ್ತಿಕ):
ವೈಯಕ್ತಿಕ ಸ್ವಯಂ ಉದ್ಯೋಗ ಕೈಗೊಳ್ಳಲು ಗರಿಷ್ಠ ರೂ.2 ಲಕ್ಷದವರೆಗೆ ಸೇವಾ ವಲಯ ಬ್ಯಾಂಕ್ ಗಳಿಂದ 100 ಅರ್ಹ ಅಭ್ಯರ್ಥಿಗಳಿಗೆ ಸಾಲ ಸೌಲಭ್ಯ ಹಾಗೂ ಸಾಲದ ಮೇಲೆ ಬಡ್ಡಿ ದರ ಶೇ.7ಕ್ಕಿಂತ ಮೇಲ್ಪಟ್ಟಿದ್ದರೆ ಬಡ್ಡಿ ಸಹಾಯಧನ ನೀಡಲಾಗುವುದು. ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು.

ಅರ್ಜಿ ಸಲ್ಲಿಸಲು ಅರ್ಹತೆ ಏನು?;
* ಅಭ್ಯರ್ಥಿ ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘಗಳ ಸದಸ್ಯರಾಗಿರಬೇಕು ಅಥವಾ ಅವರ ಮನೆಯಲ್ಲಿ ಯಾರಾದರೂ ಒಬ್ಬರು ಸಂಘದ ಸದಸ್ಯರಾಗಿರಬೇಕು.
* ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಾಗ 18 ವರ್ಷ ವಯಸ್ಸು ಪೂರೈಸಿರಬೇಕು.


ಇದನ್ನೂ ಓದಿ: ಆಧಾರ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಅಪ್ಡೇಟ್ ಮಾಡಲು ಇದೇ ಕೊನೆ ದಿನ..!


ಸ್ವಯಂ ಉದ್ಯೋಗ ಕಾರ್ಯಕ್ರಮ(ಗುಂಪು):
SJRSY ಯೋಜನೆ ಹಾಗೂ ಡೇ-ನಲ್ಮ್ ಯೋಜನೆಯಡಿ ರಚಿತವಾದ 08 ಗುಂಪುಗಳು ಸ್ವಸಹಾಯ ಉದ್ದಿಮೆ/ಚಟುವಟಿಕೆಗಳನ್ನು ಪ್ರಾರಂಭಿಸಲು 10 ಲಕ್ಷಗಳವರೆಗೆ ಸೇವಾ ವಲಯ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಒದಗಿಸಲಾಗುವುದು. ಅಲ್ಲದೆ ಸಾಲದ ಮೇಲೆ ಬಡ್ಡಿ ದರ ಶೇ.7 ಕ್ಕಿಂತ ಮೇಲ್ಪಟ್ಟಿದ್ದರೆ ಬಡ್ಡಿ ಸಹಾಯಧನ ಕೂಡ ನೀಡಲಾಗುವುದು.

ಅರ್ಜಿ ಸಲ್ಲಿಸಲು ಅರ್ಹತೆ ಏನು?;
* ಗುಂಪಿನ ಎಲ್ಲಾ ಸದಸ್ಯರ ವಯಸ್ಸು 18 ವರ್ಷ ಪೂರೈಸಿರಬೇಕು.
* ಗುಂಪು ಚಟುವಟಿಕೆಗಳನ್ನು ಕೈಗೊಳ್ಳಲು ಸ್ವ-ಸಹಾಯ ಸಂಘ ಅಥವಾ ಕನಿಷ್ಟ 5 ಜನ ಸದಸ್ಯರ ಜೆ.ಎಲ್.ಜಿ ಗುಂಪು ಇರಬೇಕು
* ಸದರಿ ಸದಸ್ಯರು ಶೇ.70 ರಷ್ಟು ಬಡ ಕುಟುಂಬದವರಾಗಿರಬೇಕು.


ಇದನ್ನೂ ಓದಿ: 10 ನೇ ತರಗತಿಯಲ್ಲಿ ಪಾಸ್ ಆಗಿದ್ದೀರಾ?; ಹಾಗಿದ್ರೆ ತಿಂಗಳಿಗೆ 3,500 ಸ್ಕಾಲರ್ ಶಿಪ್ ಗೆ ಈಗಲೇ ಅರ್ಜಿ ಸಲ್ಲಿಸಿ


(LOAN) ಸ್ವಸಹಾಯ ಸಂಘಗಳ ಬ್ಯಾಂಕ್ ಕ್ರೆಡಿಟ್ ಲಿಂಕೇಜ್:
SJRSY ಯೋಜನೆ ಹಾಗೂ ಡೇ-ನಲ್ಮ್ ಯೋಜನೆಯಡಿ ರಚಿತವಾದ 126 ಗುಂಪುಗಳು ಖಾತೆ ಹೊಂದಿರುವ ಬ್ಯಾಂಕ್ ಗಳ ಮೂಲಕ ಸಾಲ ಸೌಲಭ್ಯ ಕಲ್ಪಿಸುವುದು. (ಬ್ಯಾಂಕ್ ಲಿಂಕೇಜ್).

ಅರ್ಜಿ ಸಲ್ಲಿಸಲು ಅರ್ಹತೆ ಏನು?;
* ಸ್ವಸಹಾಯ ಗುಂಪುಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು.
* ಆವರ್ತಕ ನಿಧಿ ಪಡೆದಿರಬೇಕು.


ಇದನ್ನೂ ಓದಿ: ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗ; 35 ಸಾವಿರದಿಂದ ವೇತನ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ


ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ರೇಷನ್ ಕಾರ್ಡ್
* ಆಧಾರ್ ಕಾರ್ಡ್
* ಮತದಾರರ ಗುರುತಿನ ಚೀಟಿ
* ಇತ್ತೀಚಿನ ಮೂರು ಭಾವಚಿತ್ರ
* ವಿದ್ಯಾರ್ಹತೆ ಪ್ರಮಾಣ ಪತ್ರ
* ಇತರೆ ದಾಖಲೆ


ಇದನ್ನೂ ಓದಿ: ಉದ್ಯೋಗಾಂಕ್ಷಿಗಳ ಗಮನಕ್ಕೆ; ಇಂದು, ನಾಳೆ ಬೃಹತ್ ಉದ್ಯೋಗ ಮೇಳ; ಎಲ್ಲಿ? ಇಲ್ಲಿದೆ ನೋಡಿ ಮಾಹಿತಿ


ಸೂಚನೆ:
ಮೇಲ್ಕಂಡ ಯೋಜನೆಯ ಮಾರ್ಗಸೂಚಿಯ ಅನ್ವಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ನಿಗದಿತ ದಾಖಲಾತಿಗಳನ್ನು ಸಲ್ಲಿಸದಿದ್ದಲ್ಲಿ ಅರ್ಜಿಗಳನ್ನು ತಿರಸ್ಕøತಗೊಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆ ವಲಯ ಕಚೇರಿ – 1ರ (ಹಳೇ ಕಟ್ಟಡದ) ಡೇ-ನಲ್ಮ್ ಶಾಖೆ ಅಥವಾ ದೂ.08392-273479, 278168 ಗೆ ಸಂಪರ್ಕಿಸಬಹುದು.

LOAN: ಸ್ವಯಂ ಉದ್ಯೋಗಕ್ಕಾಗಿ ಸಿಗಲಿದೆ 2 ಲಕ್ಷ ಸಾಲ ಸೌಲಭ್ಯ!
LOAN: ಸ್ವಯಂ ಉದ್ಯೋಗಕ್ಕಾಗಿ ಸಿಗಲಿದೆ 2 ಲಕ್ಷ ಸಾಲ ಸೌಲಭ್ಯ!

ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    8. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    9. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    10. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    11. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!