(Lok sabha elections 2024) 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನಾಯಕರಿಗೆ ಮೊಟ್ಟ ಮೊದಲ ಗೆಲುವು ಸಿಕ್ಕಿದೆ. ಹೌದು, 2024 ರ ರಿಸಲ್ಟ್ ಇನ್ನೇನು ಕೆಲವೇ ಕ್ಷಣಗಳಲ್ಲಿ ಇಡೀ ಜಗತ್ತಿನ ಎದುರು ಹೊರಬೀಳಲಿದೆ. ಹೀಗಿದ್ದಾಗ ಮತ ಎಣಿಕೆ ಆರಂಭಕ್ಕೂ ಮೊದಲೇ ಬಿಜೆಪಿ ಒಂದು ಸ್ಥಾನ ಗೆದ್ದು ಬೀಗಿದೆ. ಅಷ್ಟಕ್ಕೂ ಬಿಜೆಪಿಯ ಭದ್ರಕೋಟೆ ಗುಜರಾತ್ ರಾಜ್ಯದ ಸೂರತ್ ಲೋಕಸಭೆ ಕ್ಷೇತ್ರವನ್ನು ಬಿಜೆಪಿ ಗೆದ್ದಿದೆ. ಬಿಜೆಪಿ ಅಭ್ಯರ್ಥಿ ಆಗಿದ್ದ ಮುಕೇಶ್ ದಲಾಲ್ ಅವಿರೋಧವಾಗಿ ಆಯ್ಕೆ ಆಗುವ ಮೂಲಕ 2024 ರ ಏಪ್ರಿಲ್ ತಿಂಗಳಲ್ಲಿ ಸಂಚಲನವನ್ನ ಸೃಷ್ಟಿ ಮಾಡಿದ್ದರು. ಈ ಮೂಲಕ ಬಿಜೆಪಿ ಪಕ್ಷ ಲೋಕಸಭೆ ಚುನಾವಣೆ ಆರಂಭದಲ್ಲೇ ಇಡೀ ದೇಶದ ಗಮನವನ್ನ ಸೆಳೆದು, ಶುಭಾರಂಭ ಪಡೆದಿತ್ತು.
ಇದನ್ನೂ ಓದಿ: ರೈತರೇ ಗಮನಿಸಿ; ಪಿಎಂ ಫಸಲ್ ಭೀಮಾ ಯೋಜನೆ; ಈ ಯೋಜನೆಯ ಉದ್ದೇಶವೇನು? ಅರ್ಜಿ ಸಲ್ಲಿಕೆ ಹೇಗೆ?
ಹೌದು, ಕಾಂಗ್ರೆಸ್ ಅಭ್ಯರ್ಥಿ ಆಗಿದ್ದ ನೀಲೇಶ್ ಕುಂಭಾನಿ ನಾಮಪತ್ರ ತಿರಸ್ಕೃತವಾದ ನಂತರ, ಕಣದಲ್ಲಿದ್ದ ಎಲ್ಲಾ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂದೆ ಪಡೆದುಕೊಂಡ ಬಳಿಕ ಬಿಜೆಪಿಗೆ ಭರ್ಜರಿ ಗೆಲುವು ಸಿಕ್ಕಿತ್ತು. ಬಿಜೆಪಿ ಅಭ್ಯರ್ಥಿ ಆಗಿದ್ದ ಮುಖೇಶ್ ದಲಾಲ್ ಅವರ ಎದುರಲ್ಲಿ, ಯಾವುದೇ ಅಭ್ಯರ್ಥಿ ಇಲ್ಲದ ಕಾರಣಕ್ಕೆ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯೂ ಆಗಿದ್ದರು.

ಇದನ್ನೂ ಓದಿ: ಹಣ ಉಳಿತಾಯ ಮಾಡುವ ಪೋಷಕರಿಗೆ ಮಹತ್ವದ ಮಾಹಿತಿ; ಪೋಸ್ಟ್ ಆಫೀಸ್ ನಲ್ಲಿ 6 ರೂಪಾಯಿ ಉಳಿಸಿದ್ರೆ ಸಿಗತ್ತೆ 3 ಲಕ್ಷ
ಇಡೀ ದೇಶದ ಗಮನ ಸೆಳೆದ ಗುಜರಾತ್:
ಸೂರತ್ ಲೋಕಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಬಾಕಿ 8 ಮಂದಿ ಸ್ಪರ್ಧಿಗಳ ಪೈಕಿ, ಬಹುಜನ ಸಮಾಜ ಪಾರ್ಟಿಯ ಪ್ಯಾರೇಲಾಲ್ ಭಾರತಿ ಕಣದಿಂದ ಹಿಂದಕ್ಕೆ ಸರಿದಿದ್ದರು. ಹಾಗೂ ಮತ್ತೊಂದು ಕಡೆ ಬಾಕಿ ಇದ್ದ 7 ಇತರರು ಮತ್ತು ಪಕ್ಷೇತರರು ನಾಮಪತ್ರ ಹಿಂಪಡೆದಿದ್ದರು. ಈ ನಾಟಕೀಯ ಬೆಳವಣಿಗೆ ಕಾರಣಕ್ಕೆ ಇಡೀ ದೇಶದ ಗಮನ ಗುಜರಾತ್ ಕಡೆಗೆ ನೆಟ್ಟಿತ್ತು. ಕೊನೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿ ದಲಾಲ್ ಅವಿರೋಧವಾಗಿ ಆಯ್ಕೆಯಾಗಿ ಬಿಜೆಪಿಗೆ ಮೊದಲ ಜಯ ತಂದುಕೊಟ್ಟರು.
ಇದನ್ನೂ ಓದಿ: ಹಟ್ಟಿ ಚಿನ್ನದ ಗಣಿಯಲ್ಲಿ ಭರ್ಜರಿ ಜಾಬ್ ಆಫರ್; 25 ,000 ದಿಂದ 45.000 ರ ವರೆಗೆ ಸಂಬಳ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್






