Love Jihad: ನವದೆಹಲಿ: ಭಾರತೀಯ ದಂಡ ಸಂಹಿತೆ ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು ತಿದ್ದುಪಡಿಗೊಳಿಸಿ, ಹೊಸ ಹೆಸರುಗಳೊಂದಿಗೆ ಕಾಯ್ದೆಯಾಗಿ ಜಾರಿಗೆ ತರುವ ದಿಸೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೂರು ವಿಧೇಯಕಗಳನ್ನು ಸಂಸತ್‌ನಲ್ಲಿ ಮಂಡಿಸಿದ್ದಾರೆ. ದೇಶದಲ್ಲಿ ಬ್ರಿಟಿಷ್ ಕಾಲದ ಕ್ರಿಮಿನಲ್ ಕಾನೂನುಗಳ ಸಂಪೂರ್ಣ ತಿದ್ದುಪಡಿ ದಿಸೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ.
ಇದನ್ನೂ ಓದಿ; ಚಿಕ್ಕಮಗಳೂರು: ದಿಢೀರನೆ ಸುರಿದ ಮಳೆ; ಜನಜೀವನ ಸಂಪೂರ್ಣ ಅಸ್ತವ್ಯಸ್ತ!
* ಅತ್ಯಾಚಾರಿಗಳಿಗೆ 20 ವರ್ಷ ಜೈಲು:
ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವುದು ನೂತನ ಕಾನೂನುಗಳನ್ನು ಜಾರಿಗೊಳಿಸಲಾಗುತ್ತಿದೆ. “ಹೊಸ ಕಾನೂನುಗಳ ಅಡಿಯಲ್ಲಿ ಅತ್ಯಾಚಾರಿಗಳಿಗೆ ಗರಿಷ್ಠ 20 ವರ್ಷ ಅಥವಾ ಅವರು ಜೀವಿತಾವಧಿವರೆಗೆ ಜೈಲಿನಲ್ಲಿ ಕಾಲ ಕಳೆಯುವ ರೀತಿ ಶಿಕ್ಷೆ ವಿಧಿಸಲಾಗುತ್ತದೆ. ಹಾಗೆಯೇ, ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದವರಿಗೆ ಗಲ್ಲು ಶಿಕ್ಷೆ ವಿಧಿಸುವ, ಅತ್ಯಾಚಾರ ಸಂತ್ರಸ್ತೆಯರ ಮಾಹಿತಿ ಬಹಿರಂಗಪಡಿಸಿದವರಿಗೂ ಶಿಕ್ಷೆ ವಿಧಿಸುವ ಕಾನೂನು ಇರಲಿದೆ’ ಎಂದು ಅಮಿತ್ ಶಾ ಮಾಹಿತಿ ನೀಡಿದರು.
ಇದನ್ನೂ ಓದಿ; ವಾಹನ ಮಾಲೀಕರೇ, ಚಾಲಕರೇ ಎಚ್ಚರ; ನಗರದಲ್ಲಿ ಹೆಚ್ಚಾಯಿತು ನಕಲಿ ಇನ್ಸೂರೆನ್ಸ್ ಜಾಲ
* ಗುಂಪು ಹತ್ಯೆ ಅಪರಾಧಿಗಳಿಗೆ ಜೀವಾವಧಿ:
ದೇಶದಲ್ಲಿ ನರೇಂದ್ರ ಮೋದಿ ಆಡಳಿತದಲ್ಲಿ ಗುಂಪು ಹತ್ಯೆಗಳ ಸಂಖ್ಯೆ ಜಾಸ್ತಿಯಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಗುಂಪು ಹತ್ಯೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಮುಂದಾಗಿದೆ.ಗುಂಪು ಹತ್ಯೆಯಲ್ಲಿ ಭಾಗಿಯಾದವರಿಗೆ ಕನಿಷ್ಠ ಏಳು ವರ್ಷ ಹಾಗೂ ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಹಾಗೆಯೇ, ಹೆಚ್ಚಿನ ಮೊತ್ತದ ದಂಡವನ್ನೂ ವಿಧಿಸಲಾಗುತ್ತದೆ ಎಂದು ಅಮಿತ್ ಶಾ ತಿಳಿಸಿದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರತಿದಿನ ನಿಂಬೆ ರಸ ಕುಡಿತೀರಾ?; ಹಾಗಾದ್ರೆ ಹುಷಾರ್! ಯಾಕೆ ಅಂತೀರಾ?; ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯದೋ ಅಷ್ಟೇ ಡೇಂಜರ್!
- ಗೂಗಲ್ ಮ್ಯಾಪ್ ಬಳಸಲು ಇಂಟರ್ನೆಟ್ ಬೇಡ; ಇದು ಹೇಗೆ ಸಾಧ್ಯ ಅಂತೀರಾ?, ಈ ಸ್ಟೋರಿ ಓದಿ
- ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?; ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು
Love Jihad: * ಲವ್ ಜಿಹಾದ್ ನಿಯಂತ್ರಣಕ್ಕೂ ಕೇಂದ್ರ ಸರ್ಕಾರ ಹೊಸ ಕಾನೂನು:
ನೂತನ ಕಾನೂನಿನಲ್ಲಿ ಲವ್ ಜಿಹಾದ್ ತಡೆಗೆ ಹಲವು ರೀತಿಯ ಕ್ರಮ ತೆಗೆದುಕೊಳ್ಳಲಾಗಿದೆ. ಯಾವುದೇ ವ್ಯಕ್ತಿಯು ತನ್ನ ಗುರುತು, ಆಚರಣೆಗಳನ್ನು ಮುಚ್ಚಿಟ್ಟು, ನಕಲಿ ದಾಖಲೆ ತೋರಿಸಿ, ಸುಳ್ಳು ಭರವಸೆಗಳನ್ನು ನೀಡಿ ಲೈಂಗಿಕ ಸಂಬಂಧ ಹೊಂದಿದರೆ ಅಥವಾ ಮದುವೆಯಾದರೆ ಅದನ್ನು ಅಪರಾಧ ಎಂದು ಘೋಷಿಸಲಾಗುತ್ತದೆ. (Love Jihad: ) ಅಲ್ಲದೆ, ಹಾಗೆ ಮಾಡುವವರಿಗೆ 10 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ಭಾರಿ ದಂಡ ವಿಧಿಸಲಾಗುತ್ತದೆ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ; 4.43 ಕೋಟಿ ಮೌಲ್ಯದ 50 ಮೆಟ್ರಿಕ್ ಟನ್ ಅಡಿಕೆ ವಶ
ನೂತನ ಕಾನೂನುಗಳು:
* ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023,
* ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023
* ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ಸಾಕ್ಷ್ಯ ವಿಧೇಯಕ-2023 ಎಂಬುದಾಗಿ ಮಾರ್ಪಡಿಸಲಾಗುತ್ತಿದೆ.
ಇದನ್ನೂ ಓದಿ; ಶೃಂಗೇರಿ: ರಾತ್ರೋರಾತ್ರಿ ರಸ್ತೆಯ ಪಕ್ಕದಲ್ಲಿದ್ದ ಮರ ಕಡಿದು ಹೊತ್ತೊಯ್ದ ಕಳ್ಳರು; ಆಗುಂಬೆ: ಎರಡು ಕಾರುಗಳ ನಡುವೆ ಅಪಘಾತ
ಇವುಗಳನ್ನು ಸಂಸದೀಯ ಸಮಿತಿಯ ಪರಿಶೀಲನೆಗಾಗಿ ಕಳುಹಿಸಲಾಗುತ್ತಿದೆ ಎಂದು ಅಮಿತ್ ಶಾ ಮಾಹಿತಿ ನೀಡಿದ್ದಾರೆ. ಸಮಿತಿ ಪರಿಶೀಲನೆ ಬಳಿಕ ವಿಧೇಯಕಗಳಿಗೆ ಸಂಸತ್ತಿನ ಎರಡೂ ಸದನಗಳಲ್ಲಿ ಅಂಗೀಕಾರ ದೊರೆತರೆ ಮೂರೂ ಕಾನೂನುಗಳು ಜಾರಿಗೆ ಬರಲಿವೆ.






Leave a Reply