Sunday, September 24, 2023
HomeರಾಜಕೀಯBREAKING NEWS: ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಂ ಪಿ ಕುಮಾರಸ್ವಾಮಿ

BREAKING NEWS: ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಂ ಪಿ ಕುಮಾರಸ್ವಾಮಿ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಶಾಸಕ ಸ್ಥಾನಕ್ಕೆ ಎಂ ಪಿ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ನಿನ್ನೆ ರಾತ್ರಿ ಬಿಜೆಪಿ ತನ್ನ ಎರಡನೇ ಪಟ್ಟಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂಡಿಗೆರೆ ಎಸ್ ಸಿ ಮೀಸಲು ಕ್ಷೇತ್ರಕ್ಕೆ ಜಿಲ್ಲಾ ಉಪಾಧ್ಯಕ್ಷ ದೀಪಕ್ ದೊಡ್ಡಯ್ಯ ಹೆಸರು ಘೋಷಣೆ ಮಾಡಿತ್ತು.

ಇದನ್ನೂ ಓದಿ; ಮೊದಲ ಹಂತದಲ್ಲಿ 189 ಜನರ ಪಟ್ಟಿ ಘೋಷಿಸಿದ ಬಿಜೆಪಿ!

ಜಿಲ್ಲೆಯಲ್ಲೇ ಅಲ್ಲದೇ ರಾಜ್ಯಮಟ್ಟದಲ್ಲೇ ಅತ್ಯಂತ ಹೆಚ್ಚು ಸುದ್ದಿ ಮಾಡಿದ್ದ ಮೂಡಿಗೆರೆ ಎಸ್ ಸಿ ಮೀಸಲು ವಿಧಾನಸಭಾ ಕ್ಷೇತ್ರದ ಟಿಕೆಟ್ ಬಿಜೆಪಿಯ ತಳಮಟ್ಟದ ಕಾರ್ಯಕರ್ತರ ನಿರೀಕ್ಷೆಯಂತೆ ಬಿಜೆಪಿ ಹಾಲಿ ಶಾಸಕ ಎಂ ಪಿ ಕುಮಾರಸ್ವಾಮಿಗೆ ಟಿಕೆಟ್ ನೀಡದೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದೀಪಕ್ ದೊಡ್ಡಯ್ಯ ಅವರಿಗೆ ಮಣೆ ಹಾಕಿತ್ತು. ಈ ಮೂಲಕ ಬಿಜೆಪಿ ಕಾರ್ಯಕರ್ತರ ಪಕ್ಷ ಎಂದು ಸಾಭೀತುಪಡಿಸಲು ಮುಂದಾಗಿತ್ತು. ಶಾಸಕ ಎಂಪಿಕೆಗೆ ಟಿಕೆಟ್ ನೀಡಬಾರದೆಂದು ಈ ಹಿಂದೆ ಪಕ್ಷದ ಕಾರ್ಯಕರ್ತರೇ ಪಟ್ಟು ಹಿಡಿದಿದ್ದರು.

ಇದನ್ನೂ ಓದಿ; ಪ್ರಪಾತಕ್ಕೆ ಬಿದ್ದ ಬೈಕ್ ; ಚಿಕ್ಕಮಗಳೂರು ಮೂಲದ ಯುವಕ ಸಾವು

ಇದೀಗ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ನಿನ್ನೆ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ತಮ್ಮ ಫೇಸ್ಬುಕ್ ಅಕೌಂಟ್ ನಲ್ಲಿ ‘ಆತ್ಮೀಯ ಕ್ಷೇತ್ರದ ಮತದಾರ ಬಂಧುಗಳೇ.. ನಾನೆಂದು ಅಭಿವೃದ್ಧಿ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ, ಕ್ಷೇತ್ರದ ಎಲ್ಲಾ ಜಾತಿ, ಧರ್ಮದ ಪ್ರತಿಯೊಬ್ಬರನ್ನೂ ಸಮಾನವಾಗಿ ಕಂಡಿದ್ದು ಹೈಕಮಾಂಡ್ ಗೇ ತಪ್ಪಾಗಿ ಕಂಡಿದ್ದು ಪರಮಾಶ್ಚರ್ಯ….!!? ಸರ್ವೇ ಆಧರಿಸಿ ಟಿಕೇಟ್ ನೀಡುವ ಪಕ್ಷ ಪ್ರತಿ ಸರ್ವೆಯಲ್ಲಿ ಮುನ್ನಡೆಯಿದ್ದರು, ಟಿಕೇಟ್ ನಿರಾಕರಿಸಿದ್ದು ನೋವಿನ ವಿಚಾರ… ಮಳೆಯಿಂದಾಗಿ ಬೆಳೆ ಕಳೆದುಕೊಂಡ ಕ್ಷೇತ್ರದ ರೈತಭಾಂದವರಿಗೋಸ್ಕರ ವಿಧಾನಸೌಧದ ಗಾಂಧಿಪ್ರತಿಮೆ ಮುಂದೆ ಏಕಾಂಗಿಯಾಗಿ ಧರಣಿ ಕುಳಿತಿದ್ದು ಹೈಕಾಮಾಂಡ್ಗೆ ತಪ್ಪು ಅನ್ನಿಸಿದ್ದು ಇನ್ನೂ ಪರಮಾಶ್ಚರ್ಯ..!! ನಿಮಗೆಲ್ಲಾ ತಳಿದಿರುವಂತೆ ಶತ್ರುಗಳಿಗೂ ಕೂಡ ಕೇಡು ಬಯಸದೇ ಎಲ್ಲರನ್ನ ಸದಾ ಗೌರವಿಸುತ್ತಾ ಪ್ರೀತಿಯಿಂದ ಕಾಣುತ್ತಲೇ ಬಂದೆ.. ಪಕ್ಷದ ಕಾರ್ಯಕರ್ತರನ್ನ ಬೆಳೆಸಿದ್ದೇನೆ ಹೊರತು ನನ್ನ ಮನೆಯವರನ್ನಲ್ಲಾ.. ಯೋಚಿಸುವ ಶಕ್ತಿ ನಿಮ್ಮಲ್ಲಿದೆ
ನನಗೆ ಶಕ್ತಿ ತುಂಬುವ ಕೈಗಳು ನೀವು.. ಇನ್ನು ಮುಂದೆಯೂ ನಿಮ್ಮೊಂದಿಗೆ ಸದಾ ಜೊತೆಯಲ್ಲಿರುತ್ತೇನೆ.. ನಿಮ್ಮೆಲ್ಲರ ಆಶೀರ್ವಾದ ಸದಾ ನನ್ನ ಮೇಲಿರುತ್ತದೆ ಎಂಬ ನಂಬಿಕೆ ನನಗಿದೆ’ ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೂರು ಪಕ್ಚದಿಂದ 3ಕ್ಕೂ ಹೆಚ್ಚು ಜನ ಆಕಾಂಕ್ಷಿಗಳಿದ್ದರು. ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಇರುವ ಕುಮಾರಸ್ವಾಮಿಗೆ ಯಡಿಯೂರಪ್ಪ ನೀಡಿದ 19 ಜನರ ಪಟ್ಟಿಯಲ್ಲಿ ಇವರ ಹೆಸರೂ ಇತ್ತು. ಪ್ರಭಲ ಆಕಾಂಕ್ಷಿಗಳಾಗಿದ್ದ ದೀಪಕ್ ದೊಡ್ಡಯ್ಯ, ವಿಜಯ ಕುಮಾರ್, ಹೆಸರು ಹೈಕಮಾಂಡ್ ಮುಂದೆ ಹೋಗಿತ್ತು. ಇದೀಗ ಎಂ ಪಿ ಕುಮಾರಸ್ವಾಮಿಗೆ ಟಿಕೆಟ್ ನೀಡಿಲ್ಲ. ಬದಲಾಗಿ ದೀಪಕ್ ದೊಡ್ಡಯ್ಯ ಅವರ ಹೆಸರು ಘೋಷಿಸಿದೆ.

ಇದನ್ನೂ ಓದಿ; ರಾಷ್ಟ್ರೀಯ ಹೆದ್ದಾರಿಯಲ್ಲಿ YSV ದತ್ತ ಶಕ್ತಿ ಪ್ರದರ್ಶನ

ಮೂಡಿಗೆರೆಯಲ್ಲಿ ಕಾಂಗ್ರೆಸ್ ನಿಂದ ಬಹುತೇಕ ನಯನ ಮೋಟಮ್ಮ ಅವರಿಗೆ ಟಿಕೆಟ್ ಫೈನಲ್ ಆಗಿದೆ ಇನ್ನು ಜೆಡಿಎಸ್ ಬಿಡುಗಡೆಗೊಳಿಸಿದ ಮೊದಲ ಪಟ್ಟಿಯಲ್ಲೇ ಮೂಡಿಗೆರೆ ಮಾಜಿ ಶಾಸಕ ಬಿ ಬಿ ನಿಂಗಯ್ಯ ಅವರ ಹೆಸರಿತ್ತು. ಈ ಬಾರಿ ಮೂಡಿಗೆರೆಯಲ್ಲಿ ಜಿದ್ದಾಜಿದ್ದು ಏರ್ಪಡುವ ಸಾಧ್ಯತೆ ಹೆಚ್ಚಿದೆ.

Most Popular

Recent Comments