Machinerys: ಈ ಯಂತ್ರಗಳ ಖರೀದಿಗೆ ಸಿಗಲಿದೆ ಶೇ.90ರಷ್ಟು ಸಬ್ಸಿಡಿ

(Machinerys) ಕೃಷಿ ಯಂತ್ರಗಳ ಖರೀದಿಗೆ ಸಬ್ಸಿಡಿಯನ್ನು ನೀಡುತ್ತಿದ್ದು, ಅರ್ಹ ರೈತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು, ಎಲ್ಲಿ ಅರ್ಜಿ ಸಲ್ಲಿಸುವುದು ಎಂಬುದರ ಕುರಿತು ಸಂಪೂರ್ಣ ಮಾಹಿತಿಯನ್ನ ಇಲ್ಲಿ ನೀಡಲಾಗಿದೆ.


ಇದನ್ನೂ ಓದಿ; ಇ-ಖಾತೆ ಪಡೆಯುವವರಿಗೆ ಮುಖ್ಯ ಮಾಹಿತಿ; ಇಲ್ಲಿದೆ ಕಂಪ್ಲೀಟ್‌ ಡಿಟೈಲ್ಸ್


ರೈತರಿಗೆ ಕೃಷಿ ಯಾಂತ್ರೀಕರಣ ಹಾಗೂ ಕೃಷಿ ಸಂಸ್ಕರಣ ಘಟಕಗಳಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಿದೆ.


ಇದನ್ನೂ ಓದಿ; ರೈತರ ಗಮನಕ್ಕೆ; ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ


ಪ್ರಸಕ್ತ ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಕಳೆ ಕೊಚ್ಚುವ ಯಂತ್ರಗಳು, ಪವರ್ ವೀಡರ್, ಪವರ್ ಸ್ಪ್ರೇಯರ್ಸ್, ಡೀಸೆಲ್ ಪಂಪ್‍ಸೆಟ್, ಪ್ಲೋರ್‍ಮಿಲ್, ಯಂತ್ರ ಚಾಲಿತ ಮೋಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು ಹಾಗೂ ತುಂತುರು ನೀರಾವರಿ ಯೋಜನೆಯಡಿಯಲ್ಲಿ ಶೇ.90ರ ರಿಯಾಯ್ತಿ ದರದಲ್ಲಿ ತುಂತುರು ನೀರಾವರಿ ಘಟಕ(ಹೆಚ್‍ಡಿಪಿಇ ಪೈಪ್ಸ್) ವಿತರಿಸಲಾಗುತ್ತಿದೆ.


ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಬಿಗ್ ಶಾಕ್; ಜಾರಿಗೆ ಬರಲಿವೆ ಈ ಹೊಸ ನಿಯಮಗಳು!


ಅ‌ರ್ಜಿ ಸಲ್ಲಿಸಲು ಬಯಸುವ ಅರ್ಹ ರೈತರು ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಎರಡು ಭಾವಚಿತ್ರ, ರೂ.100 ರ ಛಾಪಾ ಕಾಗದ ಹೊಂದಿರಬೇಕು.


ಇದನ್ನೂ ಓದಿ; ಯಜಮಾನಿಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್; ಏನದು? ಮಹಿಳೆಯರೇ ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಹಾಗದರೆ ಅರ್ಜಿ ಸಲ್ಲಿಕೆ ಹೇಗೆ?
ಅಗತ್ಯ ದಾಖಲೆಯೊಂದಿಗೆ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

Machinerys: ಈ ಯಂತ್ರಗಳ ಖರೀದಿಗೆ ಸಿಗಲಿದೆ ಶೇ.90ರಷ್ಟು ಸಬ್ಸಿಡಿ
Machinerys: ಈ ಯಂತ್ರಗಳ ಖರೀದಿಗೆ ಸಿಗಲಿದೆ ಶೇ.90ರಷ್ಟು ಸಬ್ಸಿಡಿ

ಇತ್ತೀಚಿನ ಜನಪ್ರಿಯ ಸುದ್ದಿಗಳು