Mahentesh Bilagi: ರಸ್ತೆ ಅಪಘಾತದಲ್ಲಿ IAS ಅಧಿಕಾರಿ ಸಾ*ವು

(Mahentesh Bilagi:) ಕರ್ನಾಟಕ ರಾಜ್ಯ ಕಂಡ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಮಹಾಂತೇಶ್​ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ಅಸುನೀಗಿದ್ದಾರೆ. ಮೂವರು ಸಹೋದರೊಂದಿಗೆ ಮದುವೆ ಕಾರ್ಯಕ್ರಮಕ್ಕೆ ವಿಜಯಪುರದಿಂದ ಕಲಬುರುಗಿಗೆ ತೆರಳುತ್ತಿದ್ದ ವೇಳೆ ಭೀ*ಕರ ರಸ್ತೆ ಅಪಘಾತದಲ್ಲಿ ದುರ್ಮ*ರಣ ಹೊಂದಿದ್ದಾರೆ. ಹಿರಿಯ ಐಎಎಸ್​ ಅಧಿಕಾರಿಗಳು ಮಹಾಂತೇಶ್​ ಬೀಳಗಿ ಅವರು ಸಹೋದರನ ಮಗಳ ಮದುವೆ ಹಿನ್ನೆಲೆ ಇಬ್ಬರು ಸಹೋದರ ಸಂಬಂಧಿ ಜೊತೆ ಕಾರಿನಲ್ಲಿ ಕಲಬುರಗಿಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.


ನ್ನೂ ಓದಿ: ಪಿಎಂ-ಕಿಸಾನ್ 21ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ: 9 ಕೋಟಿ ರೈತರಿಗೆ ಒಟ್ಟು 18,000 ಕೋಟಿ ರೂ. ಹಣ ಸಂದಾಯ


(Mahentesh Bilagi:) ಮಹಾಂತೇಶ ಬೀಳಗಿ ಅವರು ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದವರು, 1974ರ ಮಾರ್ಚ್ 27ರಂದು ಜನಿಸಿ ಕಡು ಬಡತನದಲ್ಲಿ ಶಿಕ್ಷಣ ಪಡೆದು ಉನ್ನತ ಹುದ್ದೇಗೇರಿದ್ದರು. ರಾಮದುರ್ಗದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪಡೆದಿದ್ದ ಬೀಳಗಿ ಅವರು ವಿದ್ಯಾರ್ಥಿ ಜೀವನದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದರು. ಬೀಳಗಿ ಅವರ ತಾಯಿ ರೊಟ್ಟಿ ವ್ಯಾಪಾರ ಮಾಡಿ ಕುಟುಂಬ ನಿರ್ವಹಣೆ ಮಾಡುತ್ತಿದ್ದರು.

ಕಷ್ಟದ ಜೀವನದಲ್ಲಿ ಛಲ ಬಿಡದೇ ಓದಿ, ಕೆಎಎಸ್​ನಲ್ಲಿ ನಾಲ್ಕನೇ ರ್ಯಾಂಕ್ ಪಡೆದಿದ್ದ ಮಹಾಂತೇಶ ಬೀಳಗಿ ಅವರು 2012ರಲ್ಲಿ ಕರ್ನಾಟಕ ಕೇಡರ್​ನ IAS ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಪ್ರಸ್ತುತ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಬೆಸ್ಕಾಂ ಎಂಡಿ, ದಾವಣಗೆರೆ ಡಿಸಿ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು. ದಾವಣಗೆರೆ ಡಿಸಿ ಆಗಿದ್ದ ವೇಳೆ ಹಲವು ಮಹತ್ವದ ಕೆಲಸಗಳನ್ನ ಮಾಡಿ ಜನರ ನೆಚ್ಚಿನ ಡಿಸಿಯಾಗಿದ್ದರು.


ನ್ನೂ ಓದಿ: ಆಲದ ಮರದ ನೆರಳಿನಲ್ಲಿ ಶುರುವಾದ ಭಾರತೀಯ ಸ್ಟಾಕ್ ಮಾರ್ಕೆಟ್ – ಇಂದು 400 ಲಕ್ಷ ಕೋಟಿಯ ಮೌಲ್ಯ!


Mahentesh Bilagi: ರಸ್ತೆ ಅಪಘಾತದಲ್ಲಿ IAS ಅಧಿಕಾರಿ ಸಾ*ವು
Mahentesh Bilagi: ರಸ್ತೆ ಅಪಘಾತದಲ್ಲಿ IAS ಅಧಿಕಾರಿ ಸಾ*ವು

ಇತ್ತೀಚಿನ ಜನಪ್ರಿಯ ಸುದ್ದಿಗಳು (Mahentesh Bilagi:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ