ಬೆಂಗಳೂರು: ದೇಶದ ಅಲ್ಪಸಂಖ್ಯಾತರು ಒಗ್ಗಟ್ಟಾಗಿ ಕಾಂಗ್ರೆಸ್ ಗೆ ಬೆಂಬಲವನ್ನು ನೀಡಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ದೇಶದ ಜನತೆಗೆ ಕರೆ ನೀಡಿದರು.
ಮಂಗಳವಾರ ನಗರದ ಅರಮನೆ ಮೈದಾನದ ನಲಪಾಡ್ ಪೆವಿಲಿಯನ್ ನಲ್ಲಿ ನಡೆದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷ ಅಬ್ದುಲ್ ಜಬ್ಬಾರ್ ರವರ ಪದಗ್ರಹಣ ಸಮಾರಂಭದಲ್ಲಿ ದೇಶದಲ್ಲಿ ಬಿಜೆಪಿ ಪಕ್ಷವನ್ನು ಕಿತ್ತೊಗೆಯಲು ಅಲ್ಪಸಂಖ್ಯಾತರು ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲವನ್ನು ನೀಡಬೇಕು ಎಂದು ಹೇಳಿದರು.
ಸತತ ಎರಡನೇ ಬಾರಿಯೂ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ದೇಶವನ್ನು ಸರ್ವನಾಶ ಮಾಡುತ್ತಿದ್ದಾರೆ. ಈ ಬಿಜೆಪಿ ಸರ್ಕಾರ ಪುನಃ ಅಧಿಕಾರಕ್ಕೆ ಬಂದರೇ ದೇಶದ ಸಂವಿಧಾನವನ್ನೇ ಬದಲಿಸುತ್ತಾರೆ. ಬಿಜೆಪಿ ಪಕ್ಷ ನೆಲಕಚ್ಚಲು ಹಾಗೂ ಅವರನ್ನು ಸೋಲಿಸಿ ಸಂವಿಧಾನವನ್ನು ರಕ್ಷಿಸಲು ದೇಶದ ಜನರು ಒಗ್ಗೂಡಿ ಬಿಜೆಪಿ ವಿರುದ್ಧ ಹೋರಾಡಬೇಕು ಎಂದು ಹೇಳಿದರು.