ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಕುಂಚೇಬೈಲಿನ ಕುಂತೂರು ನಿವಾಸಿ ನಾಗೇಶ್ (52) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನಾಗೇಶ್ ಕಳೆದ ಹಲವಾರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವೈದ್ಯರು ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರಿಂದ ಮಾನಸಿಕವಾಗಿ ಕುಗ್ಗಿದ್ದರು. ನಾಗೇಶ್ ಅವರ ಮಗ ಇಂದು ಗೃಹಪ್ರವೇಶ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ಮನೆಯಲ್ಲಿದ್ದ ತಮ್ಮ ಪತ್ನಿಯನ್ನು ತೋಟಕ್ಕೆ ದನಗಳು ಬಂದಿದ್ದು ಅವುಗಳನ್ನು ಓಡಿಸುವಂತೆ ಕಳುಹಿಸಿದ್ದಾರೆ. ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನಾಗೇಶ್ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ನಾಗೇಶ್ ಅವರು ಒಂದು ಗಂಡು ಒಂದು ಹೆಣ್ಣು ಮಗಳು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಬಿಜೆಪಿಗೆ ಮತ ಹಾಕಿದ್ದಕ್ಕೆ ಅನ್ಯಕೋಮಿನ ಮೂವರು ಹಲ್ಲೆ ನಡೆಸಿ, ಆಟೋ ಜಖಂಗೊಳಿಸಿದ್ದಾರೆ ಎಂದಿದ್ದ ಚಾಲಕ ಹರೀಶ್ ರಾವ್ ಉಲ್ಟಾ ಹೊಡೆದಿದ್ದಾನೆ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಬಳಿ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಬಳಿ ತನಗೆ ರಕ್ಷಣೆ ನೀಡಬೇಕು ಎಂದು ಹರೀಶ್ ರಾವ್ ಮನವಿ ಮಾಡಿಕೊಂಡಿದ್ದನು.
- ಇದನ್ನೂ ಓದಿ; ಹಣಕ್ಕಾಗಿ ಯುವತಿಯ ಕಿಡ್ನ್ಯಾಪ್
- ಇದನ್ನೂ ಓದಿ; ಅನಾಥ ಶವದ ಪಕ್ಕದಲ್ಲಿದ್ದ ಬ್ಯಾಗಿನಲ್ಲಿ 6.65 ಲಕ್ಷ ಪತ್ತೆ
ಈ ವೇಳೆ ಈಶ್ವರಪ್ಪ ಸೂಕ್ತ ನ್ಯಾಯ ಕೊಡಿಸುವ ಭರವಸೆ ನೀಡಿ 20 ಸಾವಿರ ರೂಪಾಯಿ ಹಣದ ಸಹಾಯ ಮಾಡಿದ್ದರು. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಬೆನ್ನಲ್ಲೇ ಆಟೋ ಚಾಲಕ ತನ್ನ ಹೇಳಿಕೆಯನ್ನು ಬದಲಿಸಿದ್ದಾನೆ.
ಎಸ್ಪಿ ಕಚೇರಿ ಬಳಿ ನಡೆದಿದ್ದೇನು?:
ಹಾನಿಯಾಗಿದ್ದ ಗಾಜು, ಹರಿದ ಟಾಪ್‌ನೊಂದಿಗೆ ಹರೀಶ್ ರಾವ್ ಎಂಬ ಚಾಲಕ ತನ್ನ ಆಟೋವನ್ನು ಸೋಮವಾರ ಬೆಳಗ್ಗೆ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಗೆ ತಂದಿದ್ದ. ಇದೆ ವೇಳೆ ಎಸ್‌ಪಿ ಕಚೇರಿಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ಮುಖಂಡರು ಮತ್ತು ಮಾಧ್ಯಮದವರನ್ನು ನೋಡುತ್ತಿದ್ದಂತೆ ಹರೀಶ್ ರಾವ್ ಸಂಕಟ ಹೇಳಿಕೊಂಡಿದ್ದ. ‘ಬಿಜೆಪಿಗೆ ಮತ ನೀಡಿದ್ದಕ್ಕೆ ತನ್ನ ಮೇಲೆ ಮೂವರು ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆ. ಆಟೋ ಜಖಂ ಮಾಡಿದ್ದಾರೆ ಎಂದು ಕಣ್ಣೀರು ಸುರಿಸಿದ್ದ. ಈಶ್ವರಪ್ಪ ಅವರ ಕಾಲಿಗೆ ಬಿದ್ದು ರಕ್ಷಣೆಗೆ ಮೊರೆ ಇಟ್ಟಿದ್ದ.