Mangaluru: ಮಲೆನಾಡಿನ ಪಕ್ಕದ ಜಿಲ್ಲೆಯಲ್ಲಿ ಕೊಟ್ಯಾಂತರ ಮೌಲ್ಯದ ಡ್ರಗ್ಸ್ ವಶ

(Mangaluru) ಮಂಗಳೂರು: ಮಂಗಳೂರಿನ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು, ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಆರು ಕೆ.ಜಿಗೂ ಅಧಿಕ ಎಂಡಿಎಂಎ ಡ್ರಗ್ಸ್ ವಶಪಡಿಸಿಕೊಂಡಿದ್ದು, ನೈಜೀರಿಯಾದ ಪೀಟರ್ ಅಕೆಡಿ ಬೆಲೆನ್ಟೋ ನನ್ನು ವಶಕ್ಕೆ ಪಡೆದಿದ್ದಾರೆ.


ಇದನ್ನೂ ಓದಿ; ಮಾರುಕಟ್ಟೆಯಲ್ಲಿ ಚೀನೀ ಬೆಳ್ಳುಳ್ಳಿ ಹಾವಳಿ;  ಭಾರತ- ಚೀನಾ ಬೆಳ್ಳುಳ್ಳಿಗೆ ವ್ಯತ್ಯಾಸ ಗುರುತಿಸುವುದು ಹೇಗೆ?


ಮಂಗಳೂರು (Mangaluru) ಕಮಿಷನರೇಟ್ ವ್ಯಾಪ್ತಿಯ ಇತಿಹಾಸದಲ್ಲೇ ದೊಡ್ಡ ಮೌಲ್ಯದ ಡ್ರಗ್ ದಂಧೆ ಬಯಲಿಗೆಳೆದ ಪ್ರಕರಣ ಇದಾಗಿದೆ. ಒಟ್ಟು ಆರು ಕೆ.ಜಿ.ಯ ಆರು ಕೋಟಿ ಮೌಲ್ಯದ ಎಂಡಿಎಂ ಡ್ರಗ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದರು. ವಾರದ ಹಿಂದೆ ಹೈದರ್ ಅಲಿ ಎಂಬಾತನನ್ನು ವಶಕ್ಕೆ ಪಡೆದು 15 ಗ್ರಾಂ ಎಂಡಿಎಂ ವಶಕ್ಕೆ ಪಡೆಯಲಾಗಿತ್ತು. ಈತನನ್ನ ವಶಕ್ಕೆ ಪಡೆದು ತನಿಖೆ ನಡೆಸಿದಾಗ ಮಾಹಿತಿ ಲಭ್ಯವಾಗಿದೆ ಎಂದರು. ಅಂತೆಯೇ ಒಂದು ಬ್ಯಾಂಕ್ ವಿವರದಡಿ ಅಳವಾಗಿ ತನಿಖೆ ನಡೆಸಿದಾಗ ನೈಜೀರಿಯನ್ ಪ್ರಜೆಯ ಕೈವಾಡ ಇರುವುದು ಬೆಳಕಿಗೆ ಬಂದಿತ್ತು. ಆತನ ಜಾಡು ಹಿಡಿದು ಬೆಂಗಳೂರಿಗೆ ತೆರಳಿ ಆತನನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಪೊಲೀಸರ ಅತ್ಯುತ್ತಮ ಕಾರ್ಯಾಚರಣೆ ಇದಾಗಿದೆ ಎಂದು ಅನುಪಮ್ ಅಗರ್ವಾಲ್ ಹೇಳಿದರು.


ಇದನ್ನೂ ಓದಿ;  ರಾಜ್ಯವ್ಯಾಪ್ತಿ ಇ-ಸ್ವತ್ತು ಕಡ್ಡಾಯ; ತಪ್ಪಿದರೆ ಕಾನೂನು ಕ್ರಮದ ಎಚ್ಚರಿಕೆ


ಅಲ್ಲದೆ ಕಾರ್ಯಾಚರಣೆ ವೇಳೆ ಪೊಲೀಸ್ ಅಧಿಕಾರಿಗಳು 35 ಡೆಬಿಟ್ ಕಾರ್ಡ್ ಗಳು, 10 ಬ್ಯಾಂಕ್ ಪಾಸ್ ಪುಸ್ತಕಗಳು, 17 ಇನ್ ಆಕ್ಟಿವ್ ಸಿಮ್ ಕಾರ್ಡ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನ ಪಾಸ್‌ಪೋರ್ಟ್ ಸಹಿತ ಎಲ್ಲಾ ದಾಖಲೆ ವಶಕ್ಕೆ ಪಡೆಯಲಾಗಿದೆ. ಈತ ಸಣ್ಣ ಸಣ್ಣ ಪ್ಯಾಕೆಟ್ ಗಳ ಮೂಲಕ ರಾಜ್ಯದ ಹಲವಡೆ ಆತ ಡ್ರಗ್ ಪೂರೈಕೆ ಮಾಡುತ್ತಿದ್ದ. ನಗರದಲ್ಲಿ ಬಿಸ್ಕಿಟ್ ಪ್ಯಾಕೆಟ್, ಗುಟ್ಕ, ಚಿಪ್ಸ್ ನ ಪ್ಯಾಕೆಟ್ ಗಳಲ್ಲಿ ಕಸ ಎಸೆಯೋ ಜಾಗದಲ್ಲಿ ಎಸೆದು, ಬಳಿಕ ಪೆಡ್ಲರ್ ಗಳಿಗೆ ಅದರ ಫೋಟೊ ತೆಗೆದು ಪೂರೈಕೆದಾರನಿಗೆ ಮಾಹಿತಿ ರವಾನೆ ಮಾಡುತ್ತಿದ್ದ. ಅ ಬಳಿಕ ಅವರು ಅಲ್ಲಿಂದ ಅದನ್ನು ತೆಗೆದುಕೊಂಡು ಗ್ರಾಹಕರಿಗೆ ಪೂರೈಕೆ ಮಾಡುತ್ತಿದ್ದರು ಎನ್ನಲಾಗಿದೆ.


ಇದನ್ನೂ ಓದಿ; ಟೀ ಜೊತೆ ಸಿಗರೇಟ್​ ಸೇದುತ್ತೀರಾ?; ಈಗ್ಲೇ ಬಿಟ್ಟುಬಿಡಿ, ಇಲ್ಲದಿದ್ರೆ ಈ ಕಾಯಿಲೆಗಳು ಬರೋದು ಫಿಕ್ಸ್​!


ಇತ್ತೀಚೆಗೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪಂಪ್ ವೆಲ್ ಬಳಿಯ ಲಾಡ್ಜ್ ವೊಂದರಲ್ಲಿ ಇದ್ದುಕೊಂಡು ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಹೈದರ್ ಆಲಿ ಎಂಬಾತನನ್ನು ಬಂಧಿಸಿ, ಆತನಿಂದ 75,000 ಮೌಲ್ಯದ 15 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿತ್ತು. ಈ ಪ್ರಕರಣದ ಮುಂದಿನ ತನಿಖೆಯನ್ನು ಮಂಗಳೂರು ಸಿಸಿಬಿ ಘಟಕಕ್ಕೆ ಹಸ್ತಾಂತರಿಸಲಾಗಿತ್ತು. ಈ ಪ್ರಕರಣದಲ್ಲಿ ಮಾದಕ ವಸ್ತುವನ್ನು ಪೂರೈಕೆ ಮಾಡುವ ಡ್ರಗ್ಸ್ ಪೆಡ್ಲರ್ ಗಳನ್ನು ಪತ್ತೆ ಹಚ್ಚುವ ಸಲುವಾಗಿ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ಈ ತನಿಖೆಯ ವೇಳೆ ಹೈದರ್ ಆಲಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇನ್ನಿತರ ಡ್ರಗ್ ಪೆಡ್ಲರ್ ಗಳ ಬಗ್ಗೆ ಮಾಹಿತಿ ಸಂಗ್ರಹಿಸಿದಾಗ ಪ್ರಮುಖ ಆರೋಪಿ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ನೈಜೇರಿಯಾ ದೇಶದ ವಿದೇಶಿ ಪ್ರಜೆ ಎಂದು ತಿಳಿದುಬಂದಿತ್ತು. ಅದರಂತೆ ಬೆಂಗಳೂರು ನಗರದ ದೊಮ್ಮಸಂದ್ರ ಗ್ರಾಮದ ಸ್ವಾಮಿ ವಿವೇಕಾನಂದ ನಗರದ ಬಾಡಿಗೆ ಮನೆಯೊಂದರ ಮೇಲೆ ದಾಳಿ ನಡೆಸಿ, ಮಾದಕ ವಸ್ತುವನ್ನು ಹೊಂದಿದ್ದ ನೈಜಿರಿಯಾ ಪ್ರಜೆಯನ್ನು ಬಂಧಿಸಿದ್ದಾರೆ.


ಇದನ್ನೂ ಓದಿ; ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ ನೋಡಿ


ಅಲ್ಲದೆ ಬಂಧಿತ ಆರೋಪಿಯ ವಿಸಾ ಅವಧಿ ಮುಕ್ತಾಯ ಆಗಿದೆ. ಸಿಸಿಬಿ ತಂಡಕ್ಕೆ ಡಿಜಿಪಿ ಒಂದು ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ. ಕಮಿಷನರೇಟ್ ನಿಂದ ಪ್ರತ್ಯೇಕ ಒಂದು ಲಕ್ಷ ರೂ. ಬಹುಮಾನ ಘೋಷಿಸುತ್ತಿರುವುದಾಗಿ ಅನುಪಮ್ ಅಗರ್ವಾಲ್ ತಿಳಿಸಿದರು.

Mangaluru: ಮಲೆನಾಡಿನ ಪಕ್ಕದ ಜಿಲ್ಲೆಯಲ್ಲಿ ಕೊಟ್ಯಾಂತರ ಮೌಲ್ಯದ ಡ್ರಗ್ಸ್ ವಶ
Mangaluru: ಮಲೆನಾಡಿನ ಪಕ್ಕದ ಜಿಲ್ಲೆಯಲ್ಲಿ ಕೊಟ್ಯಾಂತರ ಮೌಲ್ಯದ ಡ್ರಗ್ಸ್ ವಶ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!