(marathi community:) 2025-26 ನೇ ಸಾಲಿಗೆ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಜನರಿಗೆ ವಿವಿಧ ಯೋಜನೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಪಾನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಇಂತಹವರಿಗೆ 10 ಸಾವಿರ ದಂಡ!
ಯಾವೆಲ್ಲಾ ಯೋಜನೆಗಳಿಗೆ:
ವಿವಿಧ ಯೋಜನೆಗಳಾದಂತ ಶಹಾಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವು ಜಲಭಾಗ್ಯ ಯೋಜನೆ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಅರಿವು ಶೈಕ್ಷಣಿಕ ಸಾಲ ಯೋಜನೆ, (ಅರಿವು ಶೈಕ್ಷಣಕ ಸಾಲ ಯೋಜನೆ ನವೀಕರಣ), ಶಾಹುಮಹಾರಾಜ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ (ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ), ಮರಾಠ ಮಿಲ್ಟ್ರೀ ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವ್ಯಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಿಗೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯಿತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮತ್ತು ಇದರ ಉಪ ಸಮುದಾಯಗಳನ್ನು ಹೊರತು ಪಡಿಸಿ) ಮರಾಠ ಸಮುದಾಯದ ಜನರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; 15,000 ಸಂಬಳ
(marathi community:) ಅರ್ಜಿ ಸಲ್ಲಿಕೆ ಹೇಗೆ?:
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡಿಂಗ್ ಮಾಡಿಸಿರಬೇಕು. ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯ ಬಯಸುವವರೂ ಸಹ ಆನ್ ಲೈನ್ ನಲ್ಲಿ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವುದು.
ಎಲ್ಲಾ ಯೋಜನೆಗಳಿಗೆ ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಜುಲೈ 4 ರೊಳಗಾಗಿ ಸಲ್ಲಿಸುವುದು. (ಶೈಕ್ಷಣಿಕ ಸಾಲ ಯೋಜನೆಗೆ ಕೊನೆಯ ದಿನಾಂಕ ಇರುವುದಿಲ್ಲ).
ಇದನ್ನೂ ಓದಿ: ಶೃಂಗೇರಿ ರೈತರ ಗಮನಕ್ಕೆ; ವಿವಿಧ ಯೋಜನೆಯಡಿಯಲ್ಲಿ ಸಿಗಲಿದೆ ಸಹಾಯಧನ
(marathi community:) ಹೆಚ್ಚಿನ ಮಾಹಿತಿಗಾಗಿ https://kmcdc.karnataka.gov.in ಹಾಗೂ ನಿಗಮದ ಸಹಾಯವಾಣಿ ಮೊ.ನಂ. 8867537799 ದೂ.ಸಂ.080-29903994 ಗಳನ್ನು ಸಂಪರ್ಕಿಸಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (marathi community:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





