Cell Broadcasting System:ಭಾರತದಲ್ಲಿನ ಅನೇಕ ಮೊಬೈಲ್ ಬಳಕೆದಾರರು ಸರ್ಕಾರದಿಂದ ತುರ್ತು ಎಚ್ಚರಿಕೆಯ ಸಂದೇಶವನ್ನು ಸ್ವೀಕರಿಸಿದ್ದು, ಈ ಸಂಗತಿ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗಿದೆ.. ಬೆಳಿಗ್ಗೆ 11:35 ಕ್ಕೆ Android ಮತ್ತು iPhone ಗಳಿಗೆ ತುರ್ತು ಸಂದೇಶ ಬಂದಿದ್ದು, ಏನಿದು ಸಂದೇಶ? ಯಾಕೆ ಬಂತು? ಎನ್ನುವ ಪ್ರಶ್ನೆ ಜಾಲತಾಣದಲ್ಲಿ ಚರ್ಚೆಯಾಗಿದೆ.
ಇದನ್ನೂ ಓದಿ; ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಈ ಬಗ್ಗೆ ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆಯೂ ಸಹ ಸ್ಪಷ್ಟನೆ ನೀಡಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ನಡೆದ ಸೆಲ್ ಬ್ರಾಡ್ ಕಾಸ್ಟ್ ಅಲರ್ಟ್ ಸಿಸ್ಟಮ್ ಪರೀಕ್ಷೆಯಾಗಿದೆ. ಈ ಪರೀಕ್ಷೆಯನ್ನು ವಾಸ್ತವವಾಗಿ ಇಂದು ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಮಾಡಲಾಯಿತು, ಆದರೂ ದೇಶದ ಅನೇಕ ಮಂದಿಗೆ ಈ ಸಂದೇಶ ಬಂದಿದೆ.
ಕರ್ನಾಟಕದಲ್ಲಿ ಅ.12 ಕ್ಕೆ:
ಸೆಲ್ ಬ್ರಾಡ್ ಕಾಸ್ಟ್ ಅಲರ್ಟ್ ಸಿಸ್ಟಮ್ ಪರೀಕ್ಷೆಯನ್ನು ಅ. 12ರಂದು ಕರ್ನಾಟಕದಾದ್ಯಂತ ನಡೆಸುವುದಾಗಿ ರಾಜ್ಯದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಅ. 12 ನಾಳೆ ರಾಜ್ಯದ ಜನತೆಯ ಮೊಬೈಲ್ ಗೆ ತುರ್ತು ಎಚ್ಚರಿಕೆಯ ಸಂದೇಶ ಬರಲಿದೆ. ಹೀಗಾಗಿ ಯಾರೂ ಗಾಬರಿ ಪಡಬೇಕಿಲ್ಲ. ಇದು ಸರ್ಕಾರದ ವತಿಯಿಂದಲೇ ನಡೆಯುತ್ತಿರುವ ಪರೀಕ್ಷೆಯಾಗಿದೆ.
ಇದನ್ನೂ ಓದಿ; ರಾಜ್ಯದಲ್ಲಿ ಪಟಾಕಿ ಬ್ಯಾನ್; ದೀಪಾವಳಿಗೂ ಪಟಾಕಿ ಹೊಡೀಬಾರದಾ?; ಸಿದ್ದರಾಮಯ್ಯ ಹೇಳಿದ್ದೇನು?
ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ನಮ್ಮ ನಾಗರಿಕರ ಅಮೂಲ್ಯವಾದ ಪ್ರಾಣವನ್ನು ಉಳಿಸಲು ತುರ್ತು ಸಂವಹನ ಅಭಿವೃದ್ಧಿಗಾಗಿ ಈ ಸೆಲ್ ಬ್ರಾಡ್ ಕಾಸ್ಟ್ ಅಲರ್ಟ್ ಸಿಸ್ಟಮ್ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಭಾರತದ ನಾಗರಿಕರು ಮತ್ತು ಸಮುದಾಯಗಳ ಸುರಕ್ಷತೆಗೆ ಪ್ರತಿ ಟೆಲಿಕಾಂ ಸೇವಾ ಪೂರೈಕೆದಾರರ ಮೇಲೆ ಸೆಲ್ ಬ್ರಾಡ್ಕಾ, ಅಲರ್ಟ್ ಸಿಮ್ ನ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಇದು ನಮ್ಮ ಬದ್ಧತೆಯೂ ಹೌದು ಎಂದು ದೂರಸಂಪರ್ಕ ಇಲಾಖೆ ತಿಳಿಸಿದೆ.
ವಿವಿಧ ಮೊಬೈಲ್ ಆಪರೇಟರ್ ಗಳು ಮತ್ತು ಸೆಲ್ ಬ್ರಾಡ್ ಕಾಸ್ಟ್ (Cell Broadcasting:) ಸಿಸ್ಟಮ್ ಗಳ ತುರ್ತು ಎಚ್ಚರಿಕೆ ಪ್ರಸಾರದ ದಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಅಳೆಯಲು ಈ ಪರೀಕ್ಷೆಗಳನ್ನು ಕಾಲಕಾಲಕ್ಕೆ ದೇಶದಾದ್ಯಂತ ವಿವಿಧ ಪ್ರದೇಶಗಳಲ್ಲಿ ನಡೆಸಲಾಗುತ್ತದೆ. ಸೆಲ್ ಬ್ರಾಡ್ ಕಾಸ್ಟ್ (Cell Broadcasting:) ಅಲರ್ಟ್ ಸಿಸ್ಟಮ್ ಅತ್ಯಾಧುನಿಕ ತಂತ್ರಜ್ಞಾನವಾಗಿದ್ದು, ಸಂದೇಶ ಸ್ವೀಕರಿಸುವವರು ನಿವಾಸಿಗಳು ಅಥವಾ ಪ್ರವಾಸಿಗರು ಎಂಬುದನ್ನು ಲೆಕ್ಕಿಸದೆ, ಗೊತ್ತುಪಡಿಸಿದ ಭೌಗೋಳಿಕ ಪ್ರದೇಶದ ಎಲ್ಲ ಮೊಬೈಲ್ ಸಾಧನಗಳಿಗೆ ವಿಪತ್ತು ನಿರ್ವಹಣೆಗಾಗಿ ನಿರ್ಣಾಯಕ ಮತ್ತು ಸಮಯ ಸೂಕ್ಷ್ಮ ಸಂದೇಶಗಳನ್ನು ಕಳುಹಿಸಲು ಅನುಮತಿ ನೀಡುತ್ತದೆ.
ಇದನ್ನೂ ಓದಿ; ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?
Cell Broadcasting System:ಪ್ರಮುಖ ತುರ್ತು ಮಾಹಿತಿಯು ಸರಿಯಾದ ಸಮಯಕ್ಕೆ ಆನೇಕ ಜನರನ್ನು ತಲುಪುವುದನ್ನು ಈ ಸಿಸ್ಟಮ್ ಖಚಿತಪಡಿಸಲಿದೆ. ಸಂಭಾವ್ಯ ಬೆದರಿಕೆಗಳ ನಿರ್ಣಾಯಕ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ತಿಳಿಸಲು ಸರ್ಕಾರಿ ಏಜೆನ್ಸಿಗಳು ಮತ್ತು ತುರ್ತು ಸೇವೆಗಳು ಇದನ್ನು ಬಳಸುತ್ತವೆ. ಸುನಾಮಿ, ದಿಢೀರ್ ಪ್ರವಾಹ, ಭೂಕಂಪನಗಳು ಮುಂತಾದ ಗಂಭೀರ ಸ್ವರೂಪದ ಹವಾಮಾನ ಎಚ್ಚರಿಕೆ ಸಂದೇಶಗಳನ್ನು ಕಳುಹಿಸಲು ಸೆಲ್ ಬ್ರಾಡ್ ಕಾಸ್ಟ್ ಅನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ. ಎಚ್ಚರಿಕೆ ಸಂದೇಶದಲ್ಲಿ ಸಾರ್ವಜನಿಕ ಸುರಕ್ಷತಾ ಕ್ರಮಗಳು, ಸ್ಥಳಾಂತರದ ಸೂಚನೆ ಮತ್ತು ಇತರೆ ಮಹತ್ವದ ಮಾಹಿತಿಗಳು ಇರಲಿವೆ.
ಪರೀಕ್ಷಾ ಹಂತದಲ್ಲಿ ಅನೇಕ ಜನರು ತಮ್ಮ ಮೊಬೈಲ್ ಸಾಧನಗಳಲ್ಲಿ ಈ ತುರ್ತು ಎಚ್ಚರಿಕೆ ಸಂದೇಶಗಳನ್ನು ಪಡೆಯಬಹುದು. ಈ ಎಚ್ಚರಿಕೆಗಳು ಕೇವಲ ಪರೀಕ್ಷಾ ಪ್ರಕ್ರಿಯೆಯ ಭಾಗವಾಗಿದೆ ಹೊರತು ನಿಜವಾದ ತುರ್ತು ಪರಿಸ್ಥಿತಿಯನ್ನು ಸೂಚಿಸುವುದಿಲ್ಲ. ಈ ಬಗ್ಗೆ ಮೆಸೇಜ್ ನಲ್ಲೇ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ಇನ್ನು ಅ. 12ರಂದು ಕರ್ನಾಟಕದಾದ್ಯಂತ ಈ ಪರೀಕ್ಷೆ ನಡೆಯಲಿದೆ ಎಂದು ರಾಜ್ಯದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
- ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ
- ಚೈತ್ರಾ ಕುಂದಾಪುರ ಗ್ಯಾಂಗ್ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
- ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
- ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
- ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
- ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
- hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
- ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
- ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
- 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
- 14 ನ್ಯೂಸ್ ಆ್ಯಂಕರ್ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
- ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
- ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
- ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
- ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
- ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
- ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
- ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
- ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
- ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
- ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್..!; ಆಫರ್ ತಿಳಿದ್ರೆ ವಾವ್ ಅಂತೀರಾ!?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply