Microfinance: ಮೈಕ್ರೋ ಫೈನಾನ್ಸ್ ಹಾವಳಿ, ಸಿಎಂ ನೇತೃತ್ವದಲ್ಲಿ ಏನೇನು ಚರ್ಚೆಯಾಯ್ತ?

(Microfinance) ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳ ಕಿರುಕುಳದಿಂದ ಹಲವು ಆತ್ಮಹತ್ಯೆ ಕೇಸ್‌ ಪ್ರಕರಣ ಹಾಗೂ ಇಡೀ ಗ್ರಾಮವೇ ಊರು ಬಿಟ್ಟಿರುವ ಘಟನೆ ನಡೆದಿದೆ. ಹೀಗಾಗಿ ನಿನ್ನೆ (ಶನಿವಾರ) ಸಿಎಂ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಹಾಗೂ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಯಾವುದೆಲ್ಲಾ ಆದೇಶ ಹೊರಡಿಸಲಾಗಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ಆಸ್ತಿ ಮಾಲೀಕರ ಗಮನಕ್ಕೆ; ಇ-ಖಾತಾ ಪಡೆಯುವುದು ಇನ್ನಷ್ಟು ಸುಲಭ; ಇಲ್ಲಿದೆ ನೋಡಿ ಸುಲಭ ಹಂತ


ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ:
ಸಾಲ ವಸೂಲಿಗೆ ರೌಡಿಶೀಟರ್‌, ಗೂಂಡಾಗಳನ್ನು ಬಳಸಬಾರದು. ಸಾಲ ವಸೂಲಾತಿ ಜವಾಬ್ದಾರಿಯನ್ನು ಫೈನಾನ್ಸ್​ಗಳು ಔಟ್​​ಸೋರ್ಸ್ ಕೊಡಬಾರದು. ಹಾಗೆ ಮಾಡಿದ್ದೇ ಆದರೆ ಅಂಥವರ ವಿರುದ್ಧ ಕೇಸು ದಾಖಲಿಸಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆಂದು ಸಿಎಂ ಸಿದ್ದರಾಮಯ್ಯ ಶನಿವಾರ ಖಡಕ್ ಸಂದೇಶ ರವಾನಿಸಿದ್ದಾರೆ.

ಆರ್.ಬಿ.ಐ ನಿಯಮ ಪಾಲನೆ:
ಮೈಕ್ರೋಫೈನಾನ್ಸ್ ಅಸೋಸಿಯೇಷನ್ ಅಭಿಪ್ರಾಯ ಪಡೆದಿದ್ದೇನೆ. ಆರ್​​​ಬಿಐ ಅಧಿಕಾರಿಗಳ ಅಭಿಪ್ರಾಯವನ್ನೂ ಕೇಳಿದ್ದೇನೆ. ಯಾರಿಗೂ ಸಾಲ ಕೊಡಬೇಡಿ ಎಂದು ನಾವು ಹೇಳುವುದಿಲ್ಲ. ಆದರೆ ವಸೂಲಿ ಮಾಡುವಾಗ ಕಿರುಕುಳ ಕೊಡಲೇಬಾರದು. ಆರ್​​ಬಿಐ ನಿಯಮದಂತೆ ನಡೆದುಕೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.


ಇದನ್ನೂ ಓದಿ: ಇನ್ಮುಂದೆ ಇಂತಹವರಿಗೆ ಸಿಗಲ್ಲ ರೇಷನ್‌!, ಯಾಕೆ ಗೊತ್ತಾ?; ರೇಷನ್‌ ಕಾರ್ಡ್‌ ಹೊಂದಿರುವವರು ಮಿಸ್‌ ಮಾಡ್ದೆ ಈ ಸುದ್ದಿ ಓದಿ


(Microfinance) ಹೆಚ್ಚು ಬಡ್ಡಿ ಪಡೆಯುವಂತಿಲ್ಲ:
ಆರ್​ಬಿಐ ನಿಯಮದಂತೆ ಶೇ 17.07ಕ್ಕಿಂತ ಹೆಚ್ಚು ಬಡ್ಡಿ ಪಡೆಯುವಂತಿಲ್ಲ. ಯಾವುದೇ ಸಾಲಗಾರರಿಗೆ 3 ಬಾರಿಗಿಂತ ಹೆಚ್ಚು ಸಾಲ ಕೊಡುವಂತಿಲ್ಲ. ಮೈಕ್ರೋ ಫೈನಾನ್ಸ್ ಕಂಪನಿಗಳು ಆರ್​ಬಿಐ ನಿಯಮಕ್ಕಿಂತ ಹೆಚ್ಚು, ಅಂದರೆ, ಸುಮಾರು ಶೇ 28,29 ರಷ್ಟು ಬಡ್ಡಿ ವಸೂಲಿ ಮಾಡುತ್ತಿರುವ ಬಗ್ಗೆ ಮಾಹಿತಿ ಇದೆ. ಇದರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮಾಹಿತಿ ನೀಡುತ್ತೇವೆ. ಅಧಿಕ ಬಡ್ಡಿ ವಸೂಲಿ ಮಾಡ್ತಿರುವ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

5 ಗಂಟೆ ನಂತರ ಸಾಲ ವಸೂಲಾತಿ ಇಲ್ಲ:
ಸಂಜೆ 5 ಗಂಟೆ ನಂತರ ಸಾಲ ವಸೂಲಾತಿಗೆ ಹೋಗಬಾರದು. ಮೈಕ್ರೋ ಫೈನಾನ್ಸ್, ಗಿರವಿ ಅಂಗಡಿಯವರು ಕಾನೂನು ಪಾಲಿಸಬೇಕು. ಕಾನೂನು ಉಲ್ಲಂಘಿಸುವವರ ವಿರುದ್ಧ ಮುಲಾಜಿಲ್ಲದೆ ಕ್ರಮಕೈಗೊಳ್ಳುತ್ತೇವೆ.


ಇದನ್ನೂ ಓದಿ: ಕೇಂದ್ರ ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಭರ್ಜರಿ ಅನುದಾನ; ಕೃಷಿ ಕ್ಷೇತ್ರದಲ್ಲಿ ಸಬ್ಸಿಡಿ ಸೇರಿದಂತೆ ಸಾಲದ ಮಿತಿ ಹೆಚ್ಚಳ!


ಮೈಕ್ರೋ ಫೈನಾನ್ಸ್ ಸಾಲ ವಸೂಲಾತಿಗೆ ನಿರ್ದೇಶನ:(Microfinance) 
• ಈ ನಿರ್ದೇಶನದಲ್ಲಿ ಅರ್‌ಬಿಐ ನಿಯಮ ಮೀರಿ ಸಾಲ ನೀಡಿ, ಬಡ್ಡಿ ವಿಧಿಸುವಂತಿಲ್ಲ ಎಂದು ಹೇಳಲಾಗಿದೆ.
• ಸಂಜೆ 5ರ ಬಳಿಕ ಸಾಲ ವಸೂಲಿಗೆ ಹೋಗುವುದಕ್ಕೆ ನಿರ್ಬಂಧ
• ಸಾಲ ವಸೂಲಿಗಾಗಿ ರೌಡಿ, ಗೂಂಡಾಗಳನ್ನು ಬಳಸಬಾರದು
• ಡಿಸಿ ಕಚೇರಿಗಳಲ್ಲಿ ಹೆಲ್ಪ್ ಲೈನ್ ಸ್ಥಾಪಿಸಿ ದೂರು ಸಲ್ಲಿಸಲು ಅವಕಾಶ
• ಸಾಲ ವಸೂಲಿಗೆ ಅವಮಾನ, ಕಿರುಕುಳ, ಬೆದರಿಕೆ ಹಾಕಿದರೆ ದಾವೆ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಳ್ಳುವುದು‌


ಇದನ್ನೂ ಓದಿ: ಗ್ರಾಮೀಣ ಭಾಗದ ಜನರಿಗೆ ಇಲ್ಲಿದೆ ಮುಖ್ಯ ಮಾಹಿತಿ; ಗ್ರಾಮ ಪಂಚಾಯತಿಯಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯ


ಕೇಂದ್ರಕ್ಕೆ ಒತ್ತಾಯ:
ಅನಧಿಕೃತ ಲೇವಾದೇವಿ ಚಟುವಟಿಕೆಗಳ ನಿಷೇಧ ಕುರಿತು ಕೇಂದ್ರ ಸರ್ಕಾರ ಕರಡು ಸಿದ್ಧಪಡಿಸಿದೆ. ಕೂಡಲೇ ಹೊಸ ಕಾಯ್ದೆ ಜಾರಿಗೆ ತರಬೇಕು ಎಂದು ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸಲಾಗುವುದು. ಸರ್ಕಾರಕ್ಕೆ ರಾಜ್ಯದಲ್ಲಿ ಅನಧಿಕೃತ ಮೈಕ್ರೋ ಫೈನಾನ್ಸ್ ಕಂಪನಿಗಳ ಸಾಲ ವಸೂಲಿ ಉಪಟಳ, ಮೂರನೇ ವ್ಯಕ್ತಿಗಳ ಒತ್ತಾಯ ಬಳಕೆ, ದಬ್ಬಾಳಿಕೆ, ಆತ್ಮಹತ್ಯೆ, ಊರು ತೊರೆದವರು, ಬಡವರು, ಕೆಳ ಮಧ್ಯಮವರ್ಗದ ಜನರು ಇಂತಹ ಸಂಕಷ್ಟದ ಸುಳಿಗೆ ಸಿಲುಕಿರುವುದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಆದರೆ, ಬಂಡವಾಳಶಾಹಿಗಳು, ಉಳ್ಳವರಿಗೆ ಬ್ಯಾಂಕ್‌ಗಳಿಂದ ಶೇ.3-4ರ ಬಡ್ಡಿ ದರದಲ್ಲಿ ಸಾಲ ಸುಲಭವಾಗಿ ಸಿಗಲಿದ್ದು, ಸಕಾಲಕ್ಕೆ ಪಾವತಿಸದಿದ್ದರೆ ರೈಟ್ ಆಫ್ ಹೆಸರಿನಲ್ಲಿ ಮನ್ನಾ ಮಾಡಲಾಗುತ್ತಿದೆ ಎಂದೂ ಸಿಎಂ ಹೇಳಿದರು.

Microfinance: ಮೈಕ್ರೋ ಫೈನಾನ್ಸ್ ಹಾವಳಿ, ಸಿಎಂ ನೇತೃತ್ವದಲ್ಲಿ ಏನೇನು ಚರ್ಚೆಯಾಯ್ತ?
Microfinance: ಮೈಕ್ರೋ ಫೈನಾನ್ಸ್ ಹಾವಳಿ, ಸಿಎಂ ನೇತೃತ್ವದಲ್ಲಿ ಏನೇನು ಚರ್ಚೆಯಾಯ್ತ?

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ