Mini Tractor: ಮಿನಿ ಟ್ರ್ಯಾಕ್ಟರ್ ಖರೀದಿ ಸಹಾಯಧನಕ್ಕೆ ಅರ್ಜಿ ಆಹ್ವಾನ

(Mini Tractor) ರೈತರಿಗಾಗಿ 2024-25 ನೇ ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ವಿವಿಧ ಯಂತ್ರಗಳನ್ನು ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ರೈತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು, ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್‌ ಕಾರ್ಡ್‌ ಅನ್ನು ಇಲ್ಲಿ ಪಡೆಯಿರಿ


ಯಾವುದೆಲ್ಲಾ ಯಂತ್ರಗಳ ವಿತರಣೆ:
ಸಾಮಾನ್ಯ ವರ್ಗದ ರೈತರಿಗೆ ಶೇ.50 ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಕಳೆ ಕೊಚ್ಚುವ ಯಂತ್ರಗಳು, ಪವರ್ ವೀಡರ್, ಪವರ್ ಸ್ಪ್ರೇಯರ್ಸ್, ಡೀಸೆಲ್ ಪಂಪ್‍ ಸೆಟ್, ಪ್ಲೋರ್‍ಮಿಲ್, ಯಂತ್ರ ಚಾಲಿತ ಮೋಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು ಹಾಗೂ ತುಂತುರು ನೀರಾವರಿ ಯೋಜನೆಯಡಿಯಲ್ಲಿ ಶೇ.90ರ ರಿಯಾಯ್ತಿ ದರದಲ್ಲಿ ತುಂತುರು ನೀರಾವರಿ ಘಟಕ(ಹೆಚ್‍ಡಿಪಿಇ ಪೈಪ್ಸ್) ವಿತರಿಸಲಾಗುತ್ತಿದೆ.


ಇದನ್ನೂ ಓದಿ;  ಪೋಷಕರ ಗಮನಕ್ಕೆ; ಸುಕನ್ಯಾ ಸಮೃದ್ಧಿ ಯೋಜನೆಯ ಕುರಿತು ಪೋಷಕರಿಗೆ ಮುಖ್ಯ ಮಾಹಿತಿ


ಈ ದಾಖಲೆ ಕಡ್ಡಾಯ:
* ಪಹಣಿ(ಆರ್.ಟಿ.ಸಿ)
* ಆಧಾರ್ ಕಾರ್ಡ್
* ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್
* ಎರಡು ಭಾವಚಿತ್ರ
* ರೂ.100 ರ ಛಾಪಾ ಕಾಗದ


ಇದನ್ನೂ ಓದಿ;  ರೈತರಿಗೆ ಗುಡ್ ನ್ಯೂಸ್; ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಆರಂಭ; ಬೆಲೆ ಎಷ್ಟು ನಿಗದಿ… ಇಲ್ಲಿದೆ ಡಿಟೈಲ್ಸ್


ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹ ರೈತರು ಅಗತ್ಯ ದಾಖಲೆಯಂದಿಗೆ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಯುವನಿಧಿ ಯೋಜನೆ ಫಲಾನುಭವಿಗಳ ಗಮನಕ್ಕೆ; ನ.25 ರೊಳಗೆ ತಪ್ಪದೇ ಈ ಕೆಲಸ ಮಾಡಿ!


ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.

Mini Tractor: ಮಿನಿ ಟ್ರ್ಯಾಕ್ಟರ್ ಖರೀದಿ ಸಹಾಯಧನಕ್ಕೆ ಅರ್ಜಿ ಆಹ್ವಾನ
Mini Tractor: ಮಿನಿ ಟ್ರ್ಯಾಕ್ಟರ್ ಖರೀದಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಇತ್ತೀಚಿನ ಜನಪ್ರಿಯ ಸುದ್ದಿಗಳು