ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ; ಧರೆಗುರುಳಿದ ಬೃಹತ್ ಮರ, ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಟಿಪ್ಪರ್
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲೂ ಕಲ್ಲು ತೂರಿರುವ ಘಟನೆ ನಡೆದಿದೆ. ಕೆಲ ದಿನಗಳ ಹಿಂದೆ ಅಷ್ಟೇ ದಾವಣಗೆರೆಯಲ್ಲಿ ಕಲ್ಲು ತೂರಾಟ ನಡೆಸಿದ್ದರು. ಇದರ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆಯಲ್ಲೂ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಅಡಿಕೆ ರೇಟ್ ಯಾವಾಗ ಎಷ್ಟಿತ್ತು? ಚೆಕ್ ಮಾಡೋದು ಹೇಗೆ?
- ಕಲುಷಿತವೋ.. ವಿಷವೋ? ಕೆರೆಯಲ್ಲಿ ಸಾವಿರಾರು ಮೀನುಗಳು ಸಾವು
- ವಿಚಾರಣೆ ನೆಪದಲ್ಲಿ ಮೂಡಿಗೆರೆ ಬಿಜೆಪಿ ಮುಖಂಡನಿಗೆ ಪೊಲೀಸರಿಂದ ದೌರ್ಜನ್ಯ?
ಇಂದು ಬೆಳಗ್ಗೆ 8.45 ರ ಸುಮಾರಿಗೆ ಚಿಕ್ಕಮಗಳೂರು ಜಿಲ್ಲೆಯ ಬೀರೂರು-ಅರಸೀಕರೆ ನಡುವೆ ಸಂಚರಿಸುತ್ತಿದ್ದ ವೇಳೆ ಕಿಡಿಗೇಡಿಗಳು ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಕಲ್ಲು ತೂರಾಟ ನಡೆಸಿದ್ದಾರೆ.
ಇದನ್ನೂ ಓದಿ; ಬಾರೀ ಮಳೆಯ ಎಚ್ಚರಿಕೆ: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಹೈ ಅಲರ್ಟ್ ಘೋಷಣೆ
ಬಾರೀ ಮಳೆಯ ಎಚ್ಚರಿಕೆ: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಹೈ ಅಲರ್ಟ್ ಘೋಷಣೆ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲಾಡಳಿತ ಮುಂದಿನ 3 ದಿನ ಭಾರೀ ಮಳೆ ಸುರಿಯುವ ಎಚ್ಚರಿಕೆ ನೀಡಿದೆ. ಜು. 5, 6 ಹಾಗೂ 7 ರಂದು ಹೈ ಅಲರ್ಟ್ ಘೋಷಣೆ ಮಾಡಿದೆ. ಮುಂದಿನ 3 ದಿನ 115 ರಿಂದ 204 ಮಿ.ಮೀ. ಮಳೆ ಸಾಧ್ಯತೆಯಿದ್ದು ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನಲೆಯಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ.
ಈ ಸಂದರ್ಭದಲ್ಲಿ ಸಾರ್ವಜನಿಕರು, ಪ್ರವಾಸಿಗರು ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.