Sunday, June 4, 2023
Homeಮಲೆನಾಡುಪಿಎಸ್‌ಐ ಮನೆಗೆ ಬೆಂಕಿ ಇಟ್ಟ ಕಿಡಿಗೇಡಿಗಳು; ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಪಿಎಸ್‌ಐ ಮನೆಗೆ ಬೆಂಕಿ ಇಟ್ಟ ಕಿಡಿಗೇಡಿಗಳು; ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಸಬ್ ಇನ್ಸ್ಪೆಕ್ಟರ್ ಮನೆಗೆ ದುಷ್ಕರ್ಮಿಗಳು ಬೆಂಕಿ ಹಬ್ಬಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ. ಕೊಣನೂರು ಪೊಲೀಸ್ ಠಾಣೆ ಪಿಎಸ್‌ಐಯಾದ ಶೋಭಾ ಭರಮಕ್ಕನವರ ಮನೆ.

ಇದನ್ನೂ ಓದಿ; ಓವರ್ ಟೇಕ್ ಮಾಡುವಾಗ ಆಕ್ಸಿಡೆಂಟ್ ;ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಇದನ್ನೂ ಓದಿ; ಹೈಟೆಕ್‌ ವೇಶ್ಯಾವಾಟಿಕೆ ದಂಧೆ ಮೇಲೆ ರೈಡ್

ರಜೆಯ ಮೇಲೆ ಊರಿಗೆ ತೆರಳಿದ್ದ ಶೋಭಾ ಭರಮಕ್ಕ, ಅವರ ಬಾಡಿಗೆ ಮನೆಯ ಕಿಟಕಿ ಒಡೆದು ಸೀಮೆಎಣ್ಣೆ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮನೆಯಲ್ಲಿದ್ದ ಲ್ಯಾಪ್‌ಟಾಪ್, ಡ್ರೆಸಿಂಗ್ ಟೇಬಲ್, ಬಟ್ಟೆ, ಪೀಠೋಪಕಣಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಶುಕ್ರವಾರ ಮನೆಗೆ ವಾಪಸಾದಾಗ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಜ್ಞಾನದಳ ಹಾಗೂ ಬೆರಳಚ್ಚು ತಜ್ಞರು, ಡಿವೈಎಸ್‌ಪಿ ಮುರುಳೀಧರ ಹಾಗೂ ವೃತ್ತ ನಿರೀಕ್ಷಕ ರಘುಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಕಳೆದ ಮೂರುವರೆ ತಿಂಗಳ ಹಿಂದಷ್ಟೇ ಜಾವಗಲ್ ಪೊಲೀಸ್ ಠಾಣೆಯಿಂದ ಕೊಣನೂರು ಪೊಲೀಸ್ ಠಾಣೆಗೆ ಶೋಭಾ ಭರಮಕ್ಕನವರ್ ವರ್ಗಾವಣೆಗೊಂಡಿದ್ದರು. ಇದೀಗ ಘಟನೆ ಬಗ್ಗೆ, ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ, ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ; ಕಳ್ಳತನವಾಗಿದ್ದ 30 ಮೊಬೈಲ್‌ಗಳು ಮಾಲೀಕರಿಗೆ ಹಸ್ತಾಂತರ

ಸಿ.ಟಿ ರವಿ ಗೆ ಶಾಕ್ ನೀಡಲು ಶಾಸಕ ಹೆಚ್ ಡಿ ತಮ್ಮಯ್ಯ ಕಸರತ್ತು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಎಚ್ ಡಿ ತಮ್ಮಯ್ಯ ಮಾಜಿ ಶಾಸಕ ಸಿಟಿ ರವಿಗೆ ಮತ್ತೊಂದು ಶಾಕ್ ನೀಡಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ.

ಇದನ್ನೂ ಓದಿ; ಕಾರ್ಯಕರ್ತರ ಶ್ರಮ ಅಪಾರ, ಸಮಚಿತ್ತದಿಂದ ಚುನಾವಣೆಯ ಫಲಿತಾಂಶ ಸ್ವೀಕಾರ: ಡಿ.ಎನ್ ಜೀವರಾಜ್

ಈ ಬಾರಿ ತೀವ್ರ ಜಿದ್ದಾಜಿದ್ದಿನ ಕ್ಷೇತ್ರವಾಗಿ ಪರಿವರ್ತನೆಯಾಗಿತ್ತು. ಸಿಟಿ ರವಿ ಆಪ್ತ ಬಣ್ಣದಲ್ಲಿ ಗುರುತಿಸಿಕೊಂಡಿದ್ದ ಹೆಚ್ ಡಿ ತಮ್ಮಯ್ಯನೇ ಎದುರಾಳಿಯಾಗಿ ಸಿ.ಟಿ ರವಿಗೆ ಸೋಲಿನ ರುಚಿಯನ್ನು ತೋರಿಸಿದ್ದರು. ಇದೀಗ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದಾರೆ.

ಎಚ್ ಡಿ ತಮ್ಮಯ್ಯ ಸದ್ದಿಲ್ಲದೆ ಆಪರೇಷನ್ ಕಮಲಕ್ಕೆ ಮುಂದಾಗಿದ್ದಾರೆ. ನಗರಸಭೆ ಆಡಳಿತವನ್ನು ಬಿಜೆಪಿಯಿಂದ ತಪ್ಪಿಸಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಸರತ್ತು ಆರಂಭಿಸಿದ್ದಾರೆ. ಚಿಕ್ಕಮಗಳೂರು ನಗರಸಭೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ತಂತ್ರಗಾರಿಕೆಯನ್ನು ಆರಂಭಿಸಿದ್ದಾರೆ.

ಇದನ್ನೂ ಓದಿ; ಚಿಕ್ಕಮಗಳೂರು: ಸ್ಟೈಲಾಗಿ ಡ್ರೆಸ್ ಮಾಡ್ಕೊಂಡು ಹಣ ವಸೂಲಿಗಿಳಿದ ಲೇಡಿ ಗ್ಯಾಂಗ್

ಮೂಲಗಳ ಮಾಹಿತಿ ಪ್ರಕಾರ ವಿಧಾನಸಭಾ ಅಧಿವೇಶನ ಮುಗಿದ ಬಳಿಕ ನಗರಸಭಾ ಸದಸ್ಯರ ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಎಚ್ ಡಿ ತಮ್ಮಯ್ಯ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಮೂವರು ನಗರಸಭಾ ಸದಸ್ಯರಿಂದ ರಾಜೀನಾಮೆ ಕೊಡಿಸುವ ಮೂಲಕ ನಗರಸಭೆಯಲ್ಲಿ ಬಿಜೆಪಿ ಬಲವನ್ನು ತಗ್ಗಿಸುವ ಕಾರ್ಯತಂತ್ರವನ್ನು ಎಣಿದಿದ್ದಾರೆ.

ಇದನ್ನೂ ಓದಿ; ಬೆಂಗಳೂರಿಂದ ಚಿಕ್ಕಮಗಳೂರಿಗೆ 6 ಅತ್ಯಾಧುನಿಕ ‘ಎಲೆಕ್ಟ್ರಿಕ್ ಬಸ್’

ಬಿಜೆಪಿ ಪಕ್ಷದಿಂದ ಆಯ್ಕೆಯಾಗಿರುವ ಮೂವರು ಸದಸ್ಯರು ರಾಜೀನಾಮೆ ಕೊಟ್ಟರೆ ನಗರಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ ಕುಸಿತಗೊಳ್ಳಲಿದೆ ಆಗ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪಕ್ಷವನ್ನು ಅಧಿಕಾರಕ್ಕೆ ತರುವ ಯೋಜನೆಯನ್ನು ನೂತನ ಶಾಸಕ ಎಚ್ ಡಿ ತಮ್ಮಯ್ಯ ಮಾಡಿದ್ದಾರೆ ಎನ್ನಲಾಗುತ್ತಿದೆ.

Most Popular

Recent Comments