Mobile App E-Khata: ಇ-ಖಾತಾ ಅರ್ಜಿಗೆ ಶೀಘ್ರವೇ ಮೊಬೈಲ್ ಆ್ಯಪ್!

(Mobile App E-Khata:) ಇ-ಖಾತಾ ಅರ್ಜಿ ಸಲ್ಲಿಕೆಯನ್ನು ಇನ್ನಷ್ಟು ಸರಳ ಮತ್ತು ಸುಲಭಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಶೀಘ್ರದಲ್ಲೇ ಇ-ಖಾತಾ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಿದೆ ಎನ್ನಲಾಗಿದೆ.


ಇದನ್ನೂ ಓದಿ: 4-6ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ, ಏನದು?


ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮತ್ತಷ್ಟು ಸುಲಭ:
ಇ-ಖಾತಾ ಪಡೆಯಲು ಬೆಂಗಳೂರು ಒನ್ ಕೇಂದ್ರ, ಸೈಬರ್ ಸೆಂಟರ್ ಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅರ್ಜಿ ಸಲ್ಲಿಸಲು ವೆಬ್ ಆಧಾರಿತ ತಂತ್ರಾಂಶ ರೂಪಿಸಲಾಗಿದ್ದು, ಸಾರ್ವಜನಿಕರು ಕಂಪ್ಯೂಟರ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿತ್ತು. ಇದೀಗ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮತ್ತಷ್ಟು ಸರಳಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಇ-ಆಸ್ತಿ ಮೊಬೈಲ್ ಆ್ಯಪ್ ಸಿದ್ಧಪಡಿಸಿದ್ದು, ಶೀಘ್ರವೇ ಈ ಆ್ಯಪ್ ಕಾರ್ಯಾಚರಣೆ ಆರಂಭಿಸಲಿದೆ ಎನ್ನಲಾಗಿದೆ.


ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್‌ ನ್ಯೂಸ್ ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಸಾರ್ವಜನಿಕರು ತಮ್ಮ ಮೊಬೈಲ್ನಲ್ಲಿ ಆ್ಯಪ್ ಡೌನ್ಲೋಡ್ ಮಾಡಿ, ಅದರಲ್ಲೇ ಅರ್ಜಿ ಸಲ್ಲಿಸಬಹುದಾಗಿದೆ. ಆಸ್ತಿ ಮಾಲೀಕರು ಮಾತ್ರವಲ್ಲದೆ ಮಾಲೀಕರ ಪರ ಇತರರು ತಮ್ಮ ಮೊಬೈಲ್ನಲ್ಲಿ ಆ್ಯಪ್ ಡೌನ್ ಲೋಡ್ ಮಾಡಿಕೊಂಡು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

Mobile App E-Khata: ಇ-ಖಾತಾ ಅರ್ಜಿಗೆ ಶೀಘ್ರವೇ ಮೊಬೈಲ್ ಆ್ಯಪ್!
Mobile App E-Khata: ಇ-ಖಾತಾ ಅರ್ಜಿಗೆ ಶೀಘ್ರವೇ ಮೊಬೈಲ್ ಆ್ಯಪ್!

ಇತ್ತೀಚಿನ ಜನಪ್ರಿಯ ಸುದ್ದಿಗಳು (Mobile App E-Khata:) 

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ